AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ದಾಳಿ: ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ಮೋದಿ ಮಾತುಕತೆ

ಇರಾನ್​​ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ಇಂದು ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್‌ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಇಂದು ನಡೆದ ಘಟನೆ ತೀವ್ರ ಕಳವಳಕಾರಿಯಾಗಿದ್ದು, ನಾವು ಪ್ರಸ್ತುತ ಪರಿಸ್ಥಿತಿಯನ್ನು ವಿವರವಾಗಿ ಚರ್ಚಿಸಿದ್ದೇವೆ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದರು.

ಅಮೆರಿಕ ದಾಳಿ: ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ಮೋದಿ ಮಾತುಕತೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jun 22, 2025 | 3:49 PM

Share

ನವದೆಹಲಿ, ಜೂನ್ 22: ಇರಾನ್(Iran)​​ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ಇಂದು ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್‌ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಇಂದು ನಡೆದ ಘಟನೆ ತೀವ್ರ ಕಳವಳಕಾರಿಯಾಗಿದ್ದು, ನಾವು ಪ್ರಸ್ತುತ ಪರಿಸ್ಥಿತಿಯನ್ನು ವಿವರವಾಗಿ ಚರ್ಚಿಸಿದ್ದೇವೆ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದರು.

ಇರಾನ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ನಂತರ ಮಸೂದ್ ಪೆಜೆಶ್ಕಿಯನ್ ಅವರಿಗೆ ಹೊಸ ಜವಾಬ್ದಾರಿ ಸಿಕ್ಕಿದೆ. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದರು. ಭಾರತ-ಇರಾನ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ನಡೆಸಿದ ದಾಳಿಗಳಿಂದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷವು ಶೀಘ್ರವಾಗಿ ನಿಯಂತ್ರಣ ತಪ್ಪುವ ಅಪಾಯ ಈಗ ಹೆಚ್ಚುತ್ತಿದೆ. ಇದು ನಾಗರಿಕರು, ಪ್ರದೇಶ ಮತ್ತು ಪ್ರಪಂಚಕ್ಕೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದ್ದಾರೆ.

ಅಮೆರಿಕದ ದಾಳಿ ಅಪಾಯಕಾರಿ ತಿರುವು ಎಂದು ಚೀನಾದ ಸರ್ಕಾರಿ ಮಾಧ್ಯಮ ಹೇಳಿದೆ.ಸಂವಾದಕ್ಕೆ ಆದ್ಯತೆ ನೀಡುವ ಮೂಲಕ ಸಮತೋಲಿತ, ರಾಜತಾಂತ್ರಿಕ ವಿಧಾನವನ್ನು ಅಳವಡಿಸಿಕೊಳ್ಳುವುದು ಮುಖ್ಯವಾಗಿದ ಎಂದು ಹೇಳಿದೆ.ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್ ನಡೆಸಿರುವುದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದ್ದು, ಇದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ. ಜತೆಗೆ, ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತಷ್ಟು ಹೆಚ್ಚಾಗುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದೆ.

ಮತ್ತಷ್ಟು ಓದಿ: ಅಮೆರಿಕದ ದಾಳಿ, ಎಚ್ಚರಿಕೆಗೆ ಬಗ್ಗದ ಇರಾನ್, ಇಸ್ರೇಲ್ ಮೇಲೆ ಮತ್ತೆ ಕ್ಷಿಪಣಿ ದಾಳಿ

ಇರಾನ್‌ನ ಫೋರ್ಡೊ, ನತಾನ್ಜ್ ಮತ್ತು ಇಸ್‌ಫಹಾನ್‌ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಅಮೆರಿಕ ದಾಳಿ ನಡೆಸಿದೆ. ಫೋರ್ಡೊ ಮೇಲೆ ಆರು ಬಿ-2 ಬಾಂಬರ್ ಯುದ್ಧ ವಿಮಾನಗಳು 12 ಬಂಕರ್ ನಿಷ್ಕ್ರಿಯಗೊಳಿಸುವ ಬಾಂಬ್‌ಗಳನ್ನು ಬೀಳಿಸಿವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ಇರಾನ್ ಪ್ರತೀಕಾರ ತೀರಿಸಿಕೊಂಡರೆ ಮತ್ತಷ್ಟು ದಾಳಿ ನಡೆಸುತ್ತೇವೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಇದರಿಂದ ಮಧ್ರಪ್ರಾಚ್ಯದಲ್ಲಿ ಉಂಟಾಗಿರುವ ಸಂಘರ್ಷ ಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:47 pm, Sun, 22 June 25