PM Modi in Germany: ಪ್ರಧಾನಿ ಜರ್ಮನಿ ಪ್ರವಾಸ; ಜಿ7 ಶೃಂಗಸಭೆಯಲ್ಲಿ ವಿಶ್ವದ ನಾಯಕರನ್ನು ಭೇಟಿಯಾಗಲಿರುವ ನರೇಂದ್ರ ಮೋದಿ

ಜಿ7 ಶೃಂಗಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿ ಪ್ರಯಾಣ ಬೆಳೆಸಿದ್ದಾರೆ. ಒಟ್ಟು ಮೂರು ದಿನಗಳ ಪ್ರವಾಸ ಇದಾಗಿದ್ದು, ಇಂದು ಜರ್ಮನಿಯಲ್ಲಿ ಆಯೋಜಿಸಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೂನ್ 28ರಂದು ಯುಎಇಗೆ ಭೇಟಿ ನೀಡಲಾಗಿದ್ದಾರೆ.

PM Modi in Germany: ಪ್ರಧಾನಿ ಜರ್ಮನಿ ಪ್ರವಾಸ; ಜಿ7 ಶೃಂಗಸಭೆಯಲ್ಲಿ ವಿಶ್ವದ ನಾಯಕರನ್ನು ಭೇಟಿಯಾಗಲಿರುವ ನರೇಂದ್ರ ಮೋದಿ
ಜರ್ಮನಿಯಲ್ಲಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 27, 2022 | 10:40 AM

ಮ್ಯೂನಿಚ್: ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ7 ಶೃಂಗಸಭೆಗಾಗಿ 2 ದಿನಗಳ ಜರ್ಮನಿ (Germany)  ಪ್ರವಾಸದಲ್ಲಿದ್ದು, ಇಂದು (ಸೋಮವಾರ) ವಿಶ್ವದ ಪ್ರಮುಖ ದೇಶಗಳ ನಾಯಕರನ್ನು ಭೇಟಿಯಾಗಲಿದ್ದಾರೆ. ಭಾನುವಾರ ಮ್ಯೂನಿಚ್‌ಗೆ ಬಂದಿಳಿದಿರುವ ಪ್ರಧಾನಿ ಮೋದಿ ಸ್ಥಳೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಸ್ಕ್ಲೋಸ್ ಎಲ್ಮಾವ್‌ನಲ್ಲಿ ಭವ್ಯ ಸ್ವಾಗತವನ್ನು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಡೆಯುವ “ಉತ್ತಮ ಭವಿಷ್ಯದಲ್ಲಿ ಹೂಡಿಕೆ: ಹವಾಮಾನ, ಇಂಧನ, ಆರೋಗ್ಯ” ವಿಷಯ ಕುರಿತು ನಡೆಯುವ ಅಧಿವೇಶನದಲ್ಲಿ ಅವರು ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿ ಮೋದಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ, ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಮತ್ತು ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೊ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆಗಳನ್ನು ನಡೆಸಲಿದ್ದಾರೆ. ನಂತರ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಯುರೋಪಿಯನ್ ಯೂನಿಯನ್ ಆಯೋಗದ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್ ಅವರನ್ನು ಭೇಟಿಯಾಗಲಿದ್ದಾರೆ.

ಜಿ-7 ಶೃಂಗಸಭೆಯ ನಂತರ, ಪ್ರಧಾನಿ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಪ್ರಯಾಣಿಸಲಿದ್ದಾರೆ. ಯುಎಇ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದ ಬಗ್ಗೆ ಅವರು ತಮ್ಮ ವೈಯಕ್ತಿಕ ಸಂತಾಪವನ್ನು ವ್ಯಕ್ತಪಡಿಸಲಿದ್ದಾರೆ.

ಇದನ್ನೂ ಓದಿ
Image
PM Modi Speech: ಯೋಗ ಶಾಂತಿ ತಂದುಕೊಡುತ್ತದೆ; ಶಾಂತಿ ವ್ಯಕ್ತಿಗೆ ಸೀಮಿತವಾಗಿಲ್ಲ, ಇಡೀ ಜಗತ್ತಿಗೆ ಅನ್ವಯ ಆಗುತ್ತೆ
Image
International Yoga Day 2022: ರಾಧಿಕಾ ನಾರಾಯಣ್​ ಫಿಟ್ನೆಸ್​ ರಹಸ್ಯವೇ ಯೋಗಾಸನ; ಇಲ್ಲಿವೆ ಫೋಟೋಗಳು
Image
International Yoga Day 2022: ಜಗತ್ತಿಗೆ ಯೋಗ ಸೂತ್ರವನ್ನು ನೀಡಿದ ಮಹಾತ್ಮರು ಇವರೇ, ಮಹರ್ಷಿ ಪತಂಜಲಿ
Image
International Yoga Day 2022: ಯೋಗದಿಂದ ಬದಲಾಯಿತು ಈ ಬಾಲಿವುಡ್ ನಟಿಯರ ಬದುಕು; ಇಲ್ಲಿದೆ ವಿವರ

ಇದನ್ನೂ ಓದಿ: ಜಿ7 ಶೃಂಗಸಭೆಯಲ್ಲಿ ಜಾಗತಿಕ ನಾಯಕರೊಂದಿಗೆ ಇಂಧನ, ಹವಾಮಾನ, ಆಹಾರ ಭದ್ರತೆ ಕುರಿತು ಚರ್ಚಿಸಲಿದ್ದಾರೆ ಮೋದಿ

ಭಾನುವಾರ ಪ್ರಧಾನಿ ಮೋದಿ ಅವರು ಜರ್ಮನಿಯ ಮ್ಯೂನಿಚ್‌ನಲ್ಲಿ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಜಾಪ್ರಭುತ್ವ ಭಾರತದ ಹೆಮ್ಮೆ. ಪ್ರಜಾಪ್ರಭುತ್ವಕ್ಕೆ ಭಾರತವೇ ತಾಯಿ. ಆದರೆ, 46 ವರ್ಷಗಳ ಹಿಂದೆ ಇದೇ ಪ್ರಜಾಪ್ರಭುತ್ವವನ್ನೇ ಬಂಧಿಸಿಡುವ ಪ್ರಯತ್ನ ನಡೆದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನಿಮ್ಮಲ್ಲಿ ಹಲವರು ಅತಿ ದೂರದಿಂದ ಇಲ್ಲಿಗೆ ಆಗಮಿಸಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ಪ್ರೀತಿ, ನಿಮ್ಮ ಆತಿಥ್ಯಕ್ಕೆ ನಮನಗಳು. ಭಾರತದಲ್ಲಿ ಇಂದು ಪ್ರತಿ ಹಳ್ಳಿಗೆ ನೀರು ತಲುಪುತ್ತಿದೆ. ಎಲ್ಲ ಹಳ್ಳಿಗಳಿಗೂ ಗ್ಯಾಸ್ ಸಂಪರ್ಕ ಸಿಕ್ಕಿದೆ. ಕೊರೋನಾ ಸಮಯದಲ್ಲಿ ಬಡವರಿಗೆ ಪಡಿತರವನ್ನು ಉಚಿತವಾಗಿ ನೀಡಲಾಗಿದೆ. ಇದೀಗ ಭಾರತ ಸ್ಟಾರ್ಟ್ ಅಪ್ ಹಬ್ ಆಗಿ ಬದಲಾಗಿದೆ. ಇಂದು ಭಾರತದಲ್ಲಿ ರೈಲ್ವೆ ಕೋಚ್ ನಿರ್ಮಾಣ ಮಾಡಲಾಗುತ್ತಿದೆ. ಅತಿ ವೇಗದಲ್ಲಿ ಎಲ್ಲಾ ಮನೆಗೆ ನಳ್ಳಿ ನೀರು ತಲುಪಿಸುವ ಕೆಲಸ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi Speech: ‘ಭಾರತ ಪ್ರಜಾಪ್ರಭುತ್ವದ ತಾಯಿ’, ಮ್ಯೂನಿಚ್​ನಲ್ಲಿ ಭಾರತದ ಪ್ರಜಾಪ್ರಭುತ್ವ ಬಗ್ಗೆ ಮೋದಿ ಭಾಷಣ

ಭಾರತ ಈಗ ಎಲ್ಲಾ ಕ್ಷೇತ್ರದಲ್ಲೂ ಶಕ್ತವಾಗಿದೆ. ಡಿಜಿಟಲ್ ಪಾವತಿಯಲ್ಲಿ ವಿಶ್ವದ ಶೇ. 40ರಷ್ಟು ಭಾರತದಲ್ಲಿ ನಡೆಯುತ್ತಿದೆ. ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇಂಟರ್ನೆಟ್ ಡೇಟಾ ಅಗ್ಗವಾಗಿದೆ. ಕೊರೋನಾ ಲಸಿಕಾ ಪ್ರಮಾಣ ಪತ್ರ ಪಡೆಯಲು 110 ಕೋಟಿ ಜನರು ರಿಜಿಸ್ಟ್ರೇಶನ್ ಮಾಡಿದ್ದಾರೆ. ಆರೋಗ್ಯ ಸೇತು ಸೇರಿದಂತೆ ಸರ್ಕಾರಿ ಸೌಲಭ್ಯಗಳು ಹಾಗೂ ಮಾಹಿತಿ ಪಡೆಯಲು ಭಾರತೀಯರು ಇದೀಗ ಡಿಜಿಟಲ್ ಮಾಧ್ಯಮದ ಮೂಲಕ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಜಿ7 ಶೃಂಗಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿ ಪ್ರಯಾಣ ಬೆಳೆಸಿದ್ದಾರೆ. ಒಟ್ಟು ಮೂರು ದಿನಗಳ ಪ್ರವಾಸ ಇದಾಗಿದ್ದು, ಇಂದು ಜರ್ಮನಿಯಲ್ಲಿ ಆಯೋಜಿಸಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೂನ್ 28ರಂದು ಯುಎಇಗೆ ಭೇಟಿ ನೀಡಲಾಗಿದ್ದಾರೆ. ಈಗಾಗಲೇ ಭಾರತೀಯ ಸಮುದಾಯ ಹಾಗೂ ಭಾರತೀಯ ಮೂಲದ ವಿದ್ಯಾರ್ಥಿಗಳು ಮೋದಿ ಆಗಮನದಿಂದ ಪುಳಕಿತರಾಗಿದ್ದಾರೆ.

Published On - 10:40 am, Mon, 27 June 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್