AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋನೇಷ್ಯಾ ಪ್ರವಾಸದಲ್ಲಿ ಪ್ರಧಾನಿ ಮೋದಿ: ಭಾರತದ ‘ಅಸ್ತ್ರ’ ಕ್ಷಿಪಣಿ ಖರೀದಿಗೆ ಒಪ್ಪಂದ

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ ರಕ್ಷಣೆ, ತಂತ್ರಜ್ಞಾನ, ಆರ್ಥಿಕ ಸಂಬಂಧಗಳನ್ನು ಗಟ್ಟಿಗೊಳಿಸಿದೆ. ಇಂಡೋನೇಷ್ಯಾ ಭಾರತದ ಅಸ್ತ್ರ ಕ್ಷಿಪಣಿ, ಬ್ರಹ್ಮೋಸ್ ಸಂಗ್ರಹ ವಿಸ್ತರಿಸಲಿದೆ. ಸಬಾಂಗ್ ಬಂದರು ಜಂಟಿ ಅಭಿವೃದ್ಧಿ, ಇವಿಎಂ ತಂತ್ರಜ್ಞಾನ ಬೆಂಬಲ, ಖನಿಜ ಹೂಡಿಕೆಗಳು ಪ್ರಮುಖವಾಗಿವೆ. ಭಾರತ ಈಗ ರಕ್ಷಣಾ ತಂತ್ರಜ್ಞಾನ ನೀಡುವ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇದು ಹಿಂದೂ ಮಹಾಸಾಗರದಲ್ಲಿ ಚೀನಾ ಪ್ರಾಬಲ್ಯಕ್ಕೆ ತಕ್ಕ ಪ್ರತ್ಯುತ್ತರ.

ಇಂಡೋನೇಷ್ಯಾ ಪ್ರವಾಸದಲ್ಲಿ ಪ್ರಧಾನಿ ಮೋದಿ: ಭಾರತದ 'ಅಸ್ತ್ರ' ಕ್ಷಿಪಣಿ ಖರೀದಿಗೆ ಒಪ್ಪಂದ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 07, 2026 | 11:11 AM

Share

ಜಕಾರ್ತ, ಜುಲೈ 07: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಇಂಡೋನೇಷ್ಯಾ ಪ್ರವಾಸವು ಉಭಯ ದೇಶಗಳ ರಕ್ಷಣೆ, ತಂತ್ರಜ್ಞಾನ ಮತ್ತು ಆರ್ಥಿಕ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ. ಈ ಪ್ರವಾಸದ ವೇಳೆ ಭಾರತ ಮತ್ತು ಇಂಡೋನೇಷ್ಯಾ ನಡುವೆ ಹಲವು ಐತಿಹಾಸಿಕ ಮತ್ತು ಮಹತ್ವದ ಒಪ್ಪಂದಗಳು ಏರ್ಪಟ್ಟಿದ್ದು, ಜಾಗತಿಕ ಮಟ್ಟದಲ್ಲಿ ಭಾರತದ ತಂತ್ರಜ್ಞಾನ ಹಾಗೂ ರಕ್ಷಣಾ ಸಾಮರ್ಥ್ಯಕ್ಕೆ ಮತ್ತೊಂದು ದೊಡ್ಡ ಮನ್ನಣೆ ಸಿಕ್ಕಿದೆ.

ಇಂಡೋನೇಷ್ಯಾ ಚುನಾವಣೆಗೆ ಭಾರತದ ಇವಿಎಂ ಮಾದರಿ ಭಾರತದ ಬಲಿಷ್ಠ ಮತ್ತು ಯಶಸ್ವಿ ಚುನಾವಣಾ ನಿರ್ವಹಣಾ ಮಾದರಿಯನ್ನು ಇಂಡೋನೇಷ್ಯಾ ಮುಕ್ತವಾಗಿ ಶ್ಲಾಘಿಸಿದೆ. ಅಲ್ಲಿನ ಮುಂಬರುವ ಚುನಾವಣೆಗಳಿಗಾಗಿ ಇಂಡೋನೇಷ್ಯಾದ ಅಗತ್ಯಕ್ಕೆ ತಕ್ಕಂತೆ ವಿಶೇಷ ಇವಿಎಂ (EVM – ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್) ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಭಾರತ ಸಂಪೂರ್ಣ ಬೆಂಬಲ ನೀಡಲಿದೆ.

ಭಾರತದ ‘ಅಸ್ತ್ರ’ ಕ್ಷಿಪಣಿ ಖರೀದಿಸಲಿರುವ ಇಂಡೋನೇಷ್ಯಾ ಭಾರತೀಯ ವಾಯುಸೇನೆಯ ಇತ್ತೀಚಿನ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಭಾರತದಲ್ಲೇ ತಯಾರಾದ ಗಾಕಿನಿಂದ ಗಾಳಿಗೆ ಚಿಮ್ಮುವ ‘ಅಸ್ತ್ರ’ (Astra Missile) ಕ್ಷಿಪಣಿಗಳ ಭೀಕರ ಯಶಸ್ಸನ್ನು ಕಂಡು ಇಂಡೋನೇಷ್ಯಾ ಬೆರಗಾಗಿದೆ. ಹೀಗಾಗಿ, ತನ್ನ ವಾಯುಪಡೆಯ ಬಲವನ್ನು ಹೆಚ್ಚಿಸಿಕೊಳ್ಳಲು ಭಾರತದಿಂದ ‘ಅಸ್ತ್ರ’ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲು ಇಂಡೋನೇಷ್ಯಾ ನಿರ್ಧರಿಸಿದೆ.

ಮತ್ತಷ್ಟು ಓದಿ: ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ

‘ಬ್ರಹ್ಮೋಸ್’ ಸೂಪರ್‌ಸಾನಿಕ್ ಕ್ಷಿಪಣಿ ಖರೀದಿ ವಿಸ್ತರಣೆ ಇಂಡೋನೇಷ್ಯಾ ಈಗಾಗಲೇ ಭಾರತದಿಂದ ಬ್ರಹ್ಮೋಸ್ ಕ್ಷಿಪಣಿಗಳನ್ನು ಖರೀದಿಸುತ್ತಿದೆ. ಈಗ ತನ್ನ ಬ್ರಹ್ಮೋಸ್ ಕ್ಷಿಪಣಿಗಳ ಸಂಗ್ರಹವನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿದ್ದು, ಭಾರತವು ಇಂಡೋನೇಷ್ಯಾಕ್ಕೆ ಹೆಚ್ಚಿನ ಬ್ರಹ್ಮೋಸ್ ಕ್ಷಿಪಣಿ ಬ್ಯಾಟರಿಗಳನ್ನು ಮತ್ತು ತಾಂತ್ರಿಕ ನೆರವನ್ನು ನೀಡಲು ಒಪ್ಪಿಗೆ ಸೂಚಿಸಿದೆ.

ಚೀನಾಕ್ಕೆ ಟಕ್ಕರ್: ಜಂಟಿಯಾಗಿ ‘ಸಬಾಂಗ್ ಬಂದರು’ ಅಭಿವೃದ್ಧಿ ಸಮುದ್ರ ಮಾರ್ಗದ ಭದ್ರತೆ ಮತ್ತು ವ್ಯಾಪಾರದ ದೃಷ್ಟಿಯಿಂದ ಅತ್ಯಂತ ಆಯಕಟ್ಟಿನ ಜಾಗದಲ್ಲಿರುವ ಸಬಾಂಗ್ ಬಂದರನ್ನು (Sabang Port) ಭಾರತ ಮತ್ತು ಇಂಡೋನೇಷ್ಯಾ ಜಂಟಿಯಾಗಿ ಅಭಿವೃದ್ಧಿಪಡಿಸಲಿವೆ. ಈ ಬಂದರು ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗವಾದ ‘ಮಲಕ್ಕಾ ಜಲಸಂಧಿ’ಯ (Strait of Malacca) ಮೇಲ್ವಿಚಾರಣೆ ನಡೆಸಲು ಸಹಕಾರಿಯಾಗಿದೆ. ವಿಶೇಷವೆಂದರೆ, ಭಾರತದ ಗ್ರೇಟ್ ನಿಕೋಬಾರ್ ಬಂದರು ಯೋಜನೆಯಿಂದ ಇದು ಕೇವಲ 100 ಮೈಲಿ ದೂರದಲ್ಲಿದೆ. ಇದು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾದ ಪ್ರಾಬಲ್ಯಕ್ಕೆ ತಕ್ಕ ಟಕ್ಕರ್ ನೀಡಲಿದೆ.

ಖನಿಜ ವಲಯದಲ್ಲಿ ಭಾರಿ ಹೂಡಿಕೆ ಭವಿಷ್ಯದ ಕೈಗಾರಿಕೆಗಳಿಗೆ ಅತ್ಯಂತ ಅಗತ್ಯವಿರುವ ನಿರ್ಣಾಯಕ ಖನಿಜಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ಇಂಡೋನೇಷ್ಯಾದಲ್ಲಿ ಉಕ್ಕು (Steel), ನಿಕಲ್ ಮತ್ತು ಅಪರೂಪದ ಭೂಮಿಯ ಖನಿಜಗಳಿಂದ ತಯಾರಾಗುವ ಕಾಯಂ ಕಾಂತಗಳ ಉತ್ಪಾದನಾ ವಲಯದಲ್ಲಿ ಭಾರಿ ಹೂಡಿಕೆ ಮಾಡಲಿದೆ.

ಈ ನಿರ್ಧಾರಗಳು ರಕ್ಷಣಾ ಮತ್ತು ತಂತ್ರಜ್ಞಾನ ವಲಯದಲ್ಲಿ ಭಾರತ ಕೇವಲ ಗ್ರಾಹಕ ದೇಶವಾಗಿರದೆ, ಜಗತ್ತಿಗೆ ತಂತ್ರಜ್ಞಾನ ನೀಡುವ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿರುವುದನ್ನು ತೋರಿಸುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್