PM Modi in Australia: ಆಸ್ಟ್ರೇಲಿಯಾ ಜತೆಗಿನ ಬಾಂಧವ್ಯ ಮುಂದಿನ ಹಂತಕ್ಕೆ; ಪ್ರಧಾನಿ ಮೋದಿ

ರಕ್ಷಣೆ, ಭದ್ರತೆ ಒಳಗೊಂಡಂತೆ ವಿವಿಧ ಕ್ಷೇತ್ರಗಳಲ್ಲಿ ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಉದ್ದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಆರು ದಿನಗಳ ವಿದೇಶ ಪ್ರವಾಸದಲ್ಲಿರುವ ಅವರು ಸೋಮವಾರ ಆಸ್ಟ್ರೇಲಿಯಾ ತಲುಪಿದರು.

PM Modi in Australia: ಆಸ್ಟ್ರೇಲಿಯಾ ಜತೆಗಿನ ಬಾಂಧವ್ಯ ಮುಂದಿನ ಹಂತಕ್ಕೆ; ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on:May 22, 2023 | 10:53 PM

ಸಿಡ್ನಿ: ರಕ್ಷಣೆ, ಭದ್ರತೆ ಒಳಗೊಂಡಂತೆ ವಿವಿಧ ಕ್ಷೇತ್ರಗಳಲ್ಲಿ ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಉದ್ದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಆರು ದಿನಗಳ ವಿದೇಶ ಪ್ರವಾಸದಲ್ಲಿರುವ ಅವರು ಸೋಮವಾರ ಆಸ್ಟ್ರೇಲಿಯಾ (Australia) ತಲುಪಿದರು. ನಂತರ ‘ದಿ ಆಸ್ಟ್ರೇಲಿಯನ್ (The Australian)’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು, ಭಾರತ – ಆಸ್ಟ್ರೇಲಿಯಾ ದ್ವಿಪಕ್ಷೀಯ ಬಾಂಧವ್ಯ, ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದರು.

ಇಂಡೋ-ಪೆಸಿಫಿಕ್ ಪ್ರದೇಶವು ಹವಾಮಾನ ಬದಲಾವಣೆ, ಭಯೋತ್ಪಾದನೆ, ಸಂವಹನದ ಸಮುದ್ರ ಮಾರ್ಗಗಳ ಭದ್ರತೆ ಮತ್ತು ಕಡಲ್ಗಳ್ಳತನದಂತಹ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಪರಸ್ಪರ ಸಹಕಾರದಿಂದ ಮಾಡುವ ಪ್ರಯತ್ನಗಳ ಮೂಲಕ ಮಾತ್ರ ಅವುಗಳನ್ನು ಪರಿಹರಿಸಬಹುದು ಎಂಬುದಾಗಿ ಭಾರತ ಭಾವಿಸಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.

ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಸಂಬಂಧಿಸಿದ್ದೂ ಸೇರಿದಂತೆ, ರಕ್ಷಣೆ, ಭದ್ರತೆ ಮತ್ತು ಇತರ ಕ್ಷೇತ್ರಗಳಲ್ಲಿ ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಬಯಸುವುದಾಗಿ ಅವರು ಹೇಳಿದರು.

‘ನಾನೇನು ಸುಲಭವಾಗಿ ತೃಪ್ತನಾಗುವವನಲ್ಲ. ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಆ್ಯಂಟನಿ ಸಹ ಇದೇ ರೀತಿ ನಾನು ಮನಗಂಡಿದ್ದೇನೆ. ನಾವು ಮತ್ತೆ ಸಿಡ್ನಿಯಲ್ಲಿ ಜತೆಯಾಗಿ ಇರುವಾಗ, ನಮ್ಮ ಬಾಂಧವ್ಯವನ್ನು ಮುಂದಿನ ಹಂತಕ್ಕೆ ಹೇಗೆ ಕೊಂಡೊಯ್ಯಬಹುದು, ದ್ವಿಪಕ್ಷೀಯ ಬಾಂಧವ್ಯಕ್ಕೆ ಪೂರಕವಾದ ಹೊಸ ಕ್ಷೇತ್ರಗಳನ್ನು ಗುರುತಿಸಬಹುದು ಮತ್ತು ವಿಸ್ತರಿಸಬಹುದು ಎಂಬುದನ್ನು ಅನ್ವೇಷಿಸಲು ನಮಗೆ ಅವಕಾಶ ಸಿಗುತ್ತದೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಮೋದಿ ಹೇಳಿದರು.

ಮೋದಿ ಅವರು ಮೂರು ರಾಷ್ಟ್ರಗಳ ಪ್ರವಾಸದ ಮೂರನೇ ಮತ್ತು ಅಂತಿಮ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಆ್ಯಂಟನಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಉಭಯ ದೇಶಗಳ ನಡುವೆ ರಕ್ಷಣಾ ಸಹಭಾಗಿತ್ವ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಎರಡೂ ದೇಶಗಳ ನಡುವಣ ಭದ್ರತಾ ಕ್ಷೇತ್ರದ ಬಾಂಧವ್ಯವನ್ನು ಇನ್ನಷ್ಟು ಹೆಚ್ಚಿಸುವ ಮತ್ತು ನಿಜವಾದ ಸಾಮರ್ಥ್ಯವನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: PM Modi In Australia: ಆಸ್ಟ್ರೇಲಿಯಾಕ್ಕೆ ಬಂದಿಳಿದ ಪ್ರಧಾನಿ ಮೋದಿ; ಭಾರತೀಯರಿಂದ ಅದ್ದೂರಿ ಸ್ವಾಗತ

ಎರಡು ಪ್ರಜಾಪ್ರಭುತ್ವ ದೇಶಗಳಾಗಿ ಭಾರತ ಮತ್ತು ಆಸ್ಟ್ರೇಲಿಯಾಗಳು ಇಂಡೋ-ಪೆಸಿಫಿಕ್‌ನಲ್ಲಿ ಮುಕ್ತ ಮತ್ತು ಅಂತರ್ಗತ ಆಸಕ್ತಿಗಳನ್ನು ಹಂಚಿಕೊಂಡಿವೆ. ನಮ್ಮ ಕಾರ್ಯತಂತ್ರದ ದೃಷ್ಟಿಕೋನಗಳ ನಡುವೆ ಹೊಂದಾಣಿಕೆ ಇದೆ ಎಂದು ಅವರು ಹೇಳಿದರು.

ನಮ್ಮ ನಡುವಿನ ಉನ್ನತ ಮಟ್ಟದ ನಂಬಿಕೆಯು ಸ್ವಾಭಾವಿಕವಾಗಿ ರಕ್ಷಣೆ ಮತ್ತು ಭದ್ರತಾ ವಿಷಯಗಳಲ್ಲಿ ಹೆಚ್ಚಿನ ಸಹಕಾರವನ್ನು ಒದಗಿಸಿದೆ. ನಮ್ಮ ನೌಕಾಪಡೆಗಳು ಜಂಟಿ ನೌಕಾ ಸಮರಾಭ್ಯಾಸಗಳಲ್ಲಿ ಭಾಗವಹಿಸುತ್ತಿವೆ ಎಂದು ಅವರು ಹೇಳಿದರು.

ಉಕ್ರೇನ್‌ನೊಂದಿಗಿನ ಯುದ್ಧದ ವಿಚಾರದಲ್ಲಿ ರಷ್ಯಾವನ್ನು ಭಾರತ ಟೀಕಿಸದಿರುವುದು ಆಸ್ಟ್ರೇಲಿಯಾದೊಂದಿಗಿನ ದ್ವಿಪಕ್ಷೀಯ ಬಾಂಧವ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮೋದಿ ಹೇಳಿದರು.

ಉತ್ತಮ ಸ್ನೇಹಿತರಾಗಿರುವುದರ ಪ್ರಯೋಜನವೆಂದರೆ ನಾವು ಮುಕ್ತವಾಗಿ ಚರ್ಚಿಸಬಹುದು ಮತ್ತು ಪರಸ್ಪರರ ದೃಷ್ಟಿಕೋನವನ್ನು ಪ್ರಶಂಸಿಸಬಹುದು. ಆಸ್ಟ್ರೇಲಿಯಾವು ಭಾರತದ ಸ್ಥಾನವನ್ನು ಅರ್ಥಮಾಡಿಕೊಳ್ಳುತ್ತದೆ ಮತ್ತು ಇದು (ರಷ್ಯಾ-ಉಕ್ರೇನ್ ವಿಚಾರ) ನಮ್ಮ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮೋದಿ ಹೇಳಿದರು.

ಇದನ್ನೂ ಓದಿ: PM Modi: ಜಾಗತಿಕ ನಾಯಕತ್ವಕ್ಕಾಗಿ ಪ್ರಧಾನಿ ಮೋದಿಗೆ ಫಿಜಿಯಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ಹೊಸ ತಂತ್ರಜ್ಞಾನ, ಶುದ್ಧ ಇಂಧನ, ಖನಿಜ ಸಂಪತ್ತು, ಗಣಿಗಾರಿಕೆ, ಸೈಬರ್ ಸ್ಪೇಸ್, ​​ನುರಿತ ವೃತ್ತಿಪರರ ಚಲನೆಗೆ ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ನಿರ್ಮಿಸುವವರೆಗೆ ಸಹಕಾರದ ಹೊಸ ಕ್ಷೇತ್ರಗಳನ್ನು ಗುರುತಿಸಲು ಎರಡೂ ದೇಶಗಳಿಗೆ ಭೇಟಿ ಅವಕಾಶ ನೀಡಲಿದೆ ಎಂದು ಅವರು ಆಶಿಸಿದರು.

ನಾವು ರಕ್ಷಣೆ, ಭದ್ರತೆ, ಹೂಡಿಕೆ, ಶಿಕ್ಷಣ, ನೀರು, ಹವಾಮಾನ ಬದಲಾವಣೆ ಮತ್ತು ನವೀಕರಿಸಬಹುದಾದ ಇಂಧನ, ಕ್ರೀಡೆ, ವಿಜ್ಞಾನ, ಆರೋಗ್ಯ, ಸಂಸ್ಕೃತಿ ಮುಂತಾದ ಕ್ಷೇತ್ರಗಳಲ್ಲಿ ಗಣನೀಯವಾಗಿ ಪ್ರಗತಿ ಸಾಧಿಸಿದ್ದೇವೆ ಎಂದು ಮೋದಿ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Mon, 22 May 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ