AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಿನಿಡಾಡ್ ಪ್ರಧಾನಿ ಕಮಲಾಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ಕೊಟ್ಟ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi)  ಗುರುವಾರ ಟ್ರಿನಿಡಾಡ್ ಹಾಗೂ ಟೊಬಾಗೋಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಧಾನಿ ಕಮಲಾ ಪ್ರಸಾದ್ ಬಿಸ್ಸೆಸ್ಸರ್​ಗೆ ಮಹಾಕುಂಭದಿಂದ ತಂದ ಪವಿತ್ರ ಜಲ ಹಾಗೂ ರಾಮ ಮಂದಿರ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಿಹಾರದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು.

ಟ್ರಿನಿಡಾಡ್ ಪ್ರಧಾನಿ ಕಮಲಾಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ಕೊಟ್ಟ ಮೋದಿ
ನರೇಂದ್ರ ಮೋದಿ, ಕಮಲಾ ಪ್ರಸಾದ್
ನಯನಾ ರಾಜೀವ್
|

Updated on:Jul 04, 2025 | 10:42 AM

Share

ಟ್ರಿನಿಡಾಡ್, ಜುಲೈ 04: ಪ್ರಧಾನಿ ನರೇಂದ್ರ ಮೋದಿ(Narendra Modi)  ಗುರುವಾರ ಟ್ರಿನಿಡಾಡ್ ಹಾಗೂ ಟೊಬಾಗೋಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಧಾನಿ ಕಮಲಾ ಪ್ರಸಾದ್ ಬಿಸ್ಸೆಸ್ಸರ್​ಗೆ ಮಹಾಕುಂಭದಿಂದ ತಂದ ಪವಿತ್ರ ಜಲ ಹಾಗೂ ರಾಮ ಮಂದಿರ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಿಹಾರದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು.

ಭಾರತೀಯ ವಲಸಿಗರ ಧೈರ್ಯವನ್ನು ಶ್ಲಾಘಿಸಿದರು ಮತ್ತು ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರನ್ನು “ಬಿಹಾರದ ಮಗಳು” ಎಂದು ಕರೆದರು, ರಾಜ್ಯದೊಂದಿಗಿನ ಅವರ ಪೂರ್ವಜರ ಸಂಬಂಧಗಳನ್ನು ನೆನಪಿಸಿಕೊಂಡರು. ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರ ಪೂರ್ವಜರು ಬಿಹಾರದ ಬಕ್ಸಾರ್‌ನಲ್ಲಿ ವಾಸಿಸುತ್ತಿದ್ದರು. ಕಮಲಾ ಅವರು ಬಿಹಾರಕ್ಕೆ ಭೇಟಿ ನೀಡಿದ್ದಾರೆ.

ಜನರು ಅವರನ್ನು ಬಿಹಾರದ ಮಗಳು ಎಂದು ಪರಿಗಣಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಮಹಾಕುಂಭ ಮೇಳೆ ನಡೆದಿತ್ತು. ಸರಯು ನದಿ ಮತ್ತು ಮಹಾಕುಂಭದ ಪವಿತ್ರ ನೀರನ್ನು ಇಲ್ಲಿನ ಗಂಗಾ ಧಾರೆಗೆ ಅರ್ಪಿಸಲು ಕಮಲಾ ಬಳಿ ಕೇಳಿದರು. 2012 ರಲ್ಲಿ ಬಕ್ಸಾರ್ ಜಿಲ್ಲೆಯ ಇತಾರ್ಹಿ ಬ್ಲಾಕ್‌ನ ಅಡಿಯಲ್ಲಿರುವ ತಮ್ಮ ಪೂರ್ವಜರ ಗ್ರಾಮವಾದ ಭೇಲುಪುರಕ್ಕೆ ಭೇಟಿ ನೀಡಿದ್ದರು.

ಮತ್ತಷ್ಟು ಓದಿ: ಟ್ರಿನಿಡಾಡ್ ಮತ್ತು ಟೊಬಾಗೋದ ಮೊದಲ ಮಹಿಳಾ ಪ್ರಧಾನಿ ಕಮಲಾಗೂ ಭಾರತಕ್ಕೂ ಏನು ನಂಟು?

ಪ್ರಧಾನಿ ಮೋದಿಯನ್ನು ಕರೆದೊಯ್ಯಲು ಕಮಲಾ ತಮ್ಮ 38 ಸಚಿವರ ಜತೆ ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.ಇದು ಪ್ರಧಾನಿಯಾಗಿ ಮೋದಿ ಅವರ ಮೊದಲ ಭೇಟಿ ಮತ್ತು 1999 ರ ನಂತರ ಕೆರಿಬಿಯನ್ ರಾಷ್ಟ್ರಕ್ಕೆ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:40 am, Fri, 4 July 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್