AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಸಿಲಿಯಾದಲ್ಲಿ ಪ್ರಧಾನಿ ಮೋದಿಗೆ 144 ಕುದುರೆಗಳ ಅದ್ದೂರಿ ಸ್ವಾಗತ

ಬ್ರೆಸಿಲಿಯಾದಲ್ಲಿನ ಅಲ್ವೊರಾಡಾ ಅರಮನೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ 114 ಕುದುರೆಗಳ ಅದ್ದೂರಿ ಸ್ವಾಗತ ನೀಡಲಾಗಿದೆ. ಜುಲೈ 6-7ರಂದು ರಿಯೊ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಮೋದಿ ಅವರು ಬ್ರೆಸಿಲಿಯಾಕ್ಕೆ ಆಗಮಿಸಿದರು. ಪ್ರಧಾನಿ ಮೋದಿಗೆ ಬ್ರೆಜಿಲ್‌ನಲ್ಲಿ 114 ಕುದುರೆಗಳ ಅದ್ದೂರಿ ಸ್ವಾಗತ ದೊರೆಯಿತು. ಭಾರತ-ಬ್ರೆಜಿಲ್ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ. 57 ವರ್ಷಗಳಲ್ಲಿ ಬ್ರೆಜಿಲ್​ಗೆ ರಾಜ್ಯ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾದರು.

ಬ್ರೆಸಿಲಿಯಾದಲ್ಲಿ ಪ್ರಧಾನಿ ಮೋದಿಗೆ 144 ಕುದುರೆಗಳ ಅದ್ದೂರಿ ಸ್ವಾಗತ
Modi In Brasilia
ಸುಷ್ಮಾ ಚಕ್ರೆ
|

Updated on: Jul 08, 2025 | 9:30 PM

Share

ನವದೆಹಲಿ, ಜುಲೈ 8: ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಇಂದು (ಮಂಗಳವಾರ) ಬ್ರೆಜಿಲ್ ಅಧ್ಯಕ್ಷರ ಅಧಿಕೃತ ನಿವಾಸವಾದ ಅಲ್ವೊರಾಡಾ ಅರಮನೆಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಭಾರತದ ಪಾಲಿಗೆ ಇದು ಐತಿಹಾಸಿಕ ಕ್ಷಣವಾಗಿದೆ. 57 ವರ್ಷಗಳಲ್ಲಿ ಬ್ರೆಜಿಲ್‌ಗೆ ರಾಜ್ಯ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಬ್ರೆಜಿಲ್ ರಾಜಧಾನಿ ಬ್ರೆಸಿಲಿಯಾಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು 114 ಕುದುರೆಗಳನ್ನು ಒಳಗೊಂಡ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ಇದು ವಿರಳವಾಗಿ ನೀಡಲಾಗುವ ಗೌರವವಾಗಿದೆ. ಇದು ಬ್ರೆಜಿಲ್​ಗೆ ಭೇಟಿ ನೀಡುವ ಬೇರೆ ದೇಶದ ನಾಯಕನ ಬಗ್ಗೆ ಹೊಂದಿರುವ ಮೆಚ್ಚುಗೆಯ ಸಂಕೇತವಾಗಿದೆ.

ಪ್ರಧಾನಿ ಮೋದಿ ಸೋಮವಾರ ಸಂಜೆ (ಸ್ಥಳೀಯ ಸಮಯ) ಬ್ರೆಜಿಲ್‌ಗೆ ತಮ್ಮ ಅಧಿಕೃತ ಭೇಟಿಗಾಗಿ ಬ್ರೆಸಿಲಿಯಾಕ್ಕೆ ಆಗಮಿಸಿದರು. ಬ್ರೆಜಿಲ್‌ನ ರಕ್ಷಣಾ ಸಚಿವ ಜೋಸ್ ಮ್ಯೂಸಿಯೊ ಮಾಂಟೆರೊ ಫಿಲ್ಹೋ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಾಂಪ್ರದಾಯಿಕ ಬ್ರೆಜಿಲಿಯನ್ ಸಾಂಬಾ ರೆಗ್ಗೇ ಪ್ರದರ್ಶನ ನೀಡಿದ ಕಲಾವಿದರನ್ನು ಮೋದಿ ಶ್ಲಾಘಿಸಿದರು.

ಇದನ್ನೂ ಓದಿ: ವೈಯಕ್ತಿಕ, ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆಯನ್ನು ಮೌನವಾಗಿ ಬೆಂಬಲಿಸುವುದು ತಪ್ಪು: ಮೋದಿ

ಜುಲೈ 6ರಿಂದ 7ರವರೆಗೆ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯ ನಂತರ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಬ್ರೆಜಿಲ್‌ಗೆ ಭೇಟಿ ನೀಡಿದ್ದಾರೆ. ಅವರ ಭೇಟಿಯು ಬ್ರಿಕ್ಸ್ ಚೌಕಟ್ಟಿನ ಅಡಿಯಲ್ಲಿ ಭಾರತ-ಬ್ರೆಜಿಲ್ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ