
ನವದೆಹಲಿ, ಜುಲೈ 8: ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಇಂದು (ಮಂಗಳವಾರ) ಬ್ರೆಜಿಲ್ ಅಧ್ಯಕ್ಷರ ಅಧಿಕೃತ ನಿವಾಸವಾದ ಅಲ್ವೊರಾಡಾ ಅರಮನೆಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಭಾರತದ ಪಾಲಿಗೆ ಇದು ಐತಿಹಾಸಿಕ ಕ್ಷಣವಾಗಿದೆ. 57 ವರ್ಷಗಳಲ್ಲಿ ಬ್ರೆಜಿಲ್ಗೆ ರಾಜ್ಯ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಬ್ರೆಜಿಲ್ ರಾಜಧಾನಿ ಬ್ರೆಸಿಲಿಯಾಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು 114 ಕುದುರೆಗಳನ್ನು ಒಳಗೊಂಡ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ಇದು ವಿರಳವಾಗಿ ನೀಡಲಾಗುವ ಗೌರವವಾಗಿದೆ. ಇದು ಬ್ರೆಜಿಲ್ಗೆ ಭೇಟಿ ನೀಡುವ ಬೇರೆ ದೇಶದ ನಾಯಕನ ಬಗ್ಗೆ ಹೊಂದಿರುವ ಮೆಚ್ಚುಗೆಯ ಸಂಕೇತವಾಗಿದೆ.
ಪ್ರಧಾನಿ ಮೋದಿ ಸೋಮವಾರ ಸಂಜೆ (ಸ್ಥಳೀಯ ಸಮಯ) ಬ್ರೆಜಿಲ್ಗೆ ತಮ್ಮ ಅಧಿಕೃತ ಭೇಟಿಗಾಗಿ ಬ್ರೆಸಿಲಿಯಾಕ್ಕೆ ಆಗಮಿಸಿದರು. ಬ್ರೆಜಿಲ್ನ ರಕ್ಷಣಾ ಸಚಿವ ಜೋಸ್ ಮ್ಯೂಸಿಯೊ ಮಾಂಟೆರೊ ಫಿಲ್ಹೋ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಾಂಪ್ರದಾಯಿಕ ಬ್ರೆಜಿಲಿಯನ್ ಸಾಂಬಾ ರೆಗ್ಗೇ ಪ್ರದರ್ಶನ ನೀಡಿದ ಕಲಾವಿದರನ್ನು ಮೋದಿ ಶ್ಲಾಘಿಸಿದರು.
ಇದನ್ನೂ ಓದಿ: ವೈಯಕ್ತಿಕ, ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆಯನ್ನು ಮೌನವಾಗಿ ಬೆಂಬಲಿಸುವುದು ತಪ್ಪು: ಮೋದಿ
ಜುಲೈ 6ರಿಂದ 7ರವರೆಗೆ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯ ನಂತರ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಬ್ರೆಜಿಲ್ಗೆ ಭೇಟಿ ನೀಡಿದ್ದಾರೆ. ಅವರ ಭೇಟಿಯು ಬ್ರಿಕ್ಸ್ ಚೌಕಟ್ಟಿನ ಅಡಿಯಲ್ಲಿ ಭಾರತ-ಬ್ರೆಜಿಲ್ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ