India-US Relationship: ನಮ್ಮ ಸ್ನೇಹ ಮೊದಲಿಗಿಂತಲೂ ಗಾಢವಾಗಿದೆ ಎಂದ ಬೈಡನ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ನಮ್ಮ ಸ್ನೇಹ ಮೊದಲಿಗಿಂತಲೂ ಬಲವಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್(Joe Biden) ಟ್ವೀಟ್ ಮಾಡಿದ್ದು, ಅದಕ್ಕೆ ಪ್ರಧಾನಿ ಮೋದಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಸ್ನೇಹ ಮೊದಲಿಗಿಂತಲೂ ಬಲವಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್(Joe Biden) ಟ್ವೀಟ್ ಮಾಡಿದ್ದು, ಅದಕ್ಕೆ ಪ್ರಧಾನಿ ಮೋದಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಹೌದು ಭಾರತ ಮತ್ತು ಅಮೆರಿಕ ಸ್ನೇಹವು ಪ್ರಪಂಚದ ಒಳಿತಿಗಾಗಿ ಒಂದು ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಅಧಿಕೃತ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಜೂನ್ 21 ರಿಂದ 23ರವರೆಗೆ ಅಮೆರಿಕ ಪ್ರವಾಸಕ್ಕೆ ತೆರಳಿದ್ದರು.
ಈ ವೇಳೆ ಉಭಯ ನಾಯಕರ ನಡುವೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆದಿದೆ, ಈ ಹಿನ್ನೆಲೆಯಲ್ಲಿ ಬೈಡನ್ ಟ್ವಿಟ್ಟರ್ನಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ಅದರಲ್ಲಿ ಅಮೆರಿಕ ಹಾಗೂ ಭಾರತದ ನಡುವಿನ ಸ್ನೇಹವು ವಿಶ್ವದಲ್ಲೇ ಅತ್ಯಂತ ಮಹತ್ವದ್ದಾಗಿದೆ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ.
I fully agree with you, @POTUS @JoeBiden! Friendship between our countries is a force of global good. It will make a planet better and more sustainable. The ground covered in my recent visit will strengthen our bond even more. ?? ?? https://t.co/iEEhBIYG17
— Narendra Modi (@narendramodi) June 25, 2023
ಭಾರತದ ಪ್ರಧಾನಿ ಮೋದಿಯವರ ಐತಿಹಾಸಿಕ ಯುಎಸ್ ಭೇಟಿಯ ನಡುವೆ ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ಮತ್ತಷ್ಟು ಓದಿ: Narendra Modi: ನೈಲ್ ಪ್ರಶಸ್ತಿಯೂ ಸೇರಿ 9 ವರ್ಷದಲ್ಲಿ ಪ್ರಧಾನಿ ಮೋದಿಗೆ 13 ದೇಶಗಳಿಂದ ಸಿಕ್ಕ ಅಗ್ರಮಾನ್ಯ ಪ್ರಶಸ್ತಿಗಳ ಪಟ್ಟಿ
ಉಭಯ ದೇಶಗಳ ನಾಯಕರು ಶೈಕ್ಷಣಿಕ ವಿನಿಮಯವನ್ನು ಹೆಚ್ಚಿಸುವುದು, ಜನರ-ಜನರ ನಡುವಿನ ಸಂಬಂಧವನ್ನು ಉತ್ತೇಜಿಸುವುದು ಮತ್ತು ಹವಾಮಾನ ಬದಲಾವಣೆ, ಉದ್ಯೋಗಿಗಳ ಅಭಿವೃದ್ಧಿ ಮತ್ತು ಆರೋಗ್ಯ ಭದ್ರತೆ ಸೇರಿದಂತೆ ವಿವಿಧ ಸವಾಲುಗಳ ಕುರಿತು ಸಹಕಾರಗಳ ಬಗ್ಗೆ ಚರ್ಚಿಸಿದರು.
ಮೊದಲ ಬಾರಿಗೆ ಈಜಿಪ್ಟ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾರತಕ್ಕೆ ಹಿಂದಿರುಗಿದರು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಅರಬ್ ದೇಶದ ಅತ್ಯುನ್ನತ ಗೌರವ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಅಧ್ಯಕ್ಷ ಅಬ್ದೆಲ್ ಫತ್ತಾಹ್ ಆಹ್ವಾನ ನೀಡಿದ್ದರಿಂದ ಪ್ರಧಾನಿ ಮೋದಿ ಅವರು ಈಜಿಪ್ಟ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. 1997ರ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿತ್ತು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ