AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Speech: ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪು: ಅಮೆರಿಕದ ನ್ಯೂಯಾರ್ಕ್​ನಲ್ಲಿ ಪ್ರಧಾನಿ ಮೋದಿ ಮಾತು

PM Modi Speech in US: ಪಧಾನಿ ನರೇಂದ್ರ ಮೋದಿಯವರು 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಂದು(ಸೆ.22) ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು ‘ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

PM Modi Speech: ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪು: ಅಮೆರಿಕದ ನ್ಯೂಯಾರ್ಕ್​ನಲ್ಲಿ ಪ್ರಧಾನಿ ಮೋದಿ ಮಾತು
ನ್ಯೂಯಾರ್ಕ್‌ನಲ್ಲಿ ಪ್ರಧಾನಿ ಮೋದಿ ಭಾಷಣ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Sep 22, 2024 | 10:59 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಅದರಂತೆ ಇಂದು(ಸೆ.22) ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ನಾನು ಸ್ವರಾಜ್ಯಕ್ಕಾಗಿ ನನ್ನ ಪ್ರಾಣವನ್ನು ತೆರಲು ಸಾಧ್ಯವಿಲ್ಲ. ಆದರೆ, ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪಾಗಿಡುತ್ತೇನೆ. ನಿಮ್ಮ ಪ್ರೀತಿ ನನಗೆ ಆಶೀರ್ವಾದವಾಗಿದೆ ಎಂದರು.

ನೀವು ಭಾರತವನ್ನು ಅಮೆರಿಕಕ್ಕೆ ಮತ್ತು ಅಮೆರಿಕವನ್ನು ಭಾರತಕ್ಕೆ ಸಂಪರ್ಕಿಸಿದ್ದೀರಿ. ನಿಮ್ಮ ಕೌಶಲ್ಯ, ಪ್ರತಿಭೆ ಮತ್ತು ಬದ್ಧತೆಗೆ ಯಾವುದೇ ಸ್ಪರ್ಧೆಯಿಲ್ಲ. ನೀವು ಏಳು ಸಮುದ್ರಗಳ ಅಂತರದಲ್ಲಿ ಬಂದಿರಬಹುದು, ಆದರೆ ಯಾವುದೇ ಸಮುದ್ರವು ನಿಮ್ಮನ್ನು ಭಾರತದಿಂದ ದೂರವಿರಿಸುವಷ್ಟು ಆಳವನ್ನು ಹೊಂದಿಲ್ಲ. ಭಾರತ ನಮಗೆ ಕಲಿಸಿದುದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ:ಕಳ್ಳಸಾಗಣೆಯಾಗಿದ್ದ ಭಾರತದ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಮೋದಿಗೆ ಹಸ್ತಾಂತರಿಸಿದ ಬೈಡನ್

ನನಗೆ AI ಎಂದರೆ ಅಮೆರಿಕ-ಭಾರತ

ನಾವು ಎಲ್ಲಿಗೆ ಹೋದರೂ, ನಾವು ಎಲ್ಲರನ್ನು ಕುಟುಂಬವಾಗಿ ಸ್ವೀಕರಿಸುತ್ತೇವೆ. ವೈವಿಧ್ಯತೆಯನ್ನು ಅರ್ಥಮಾಡಿಕೊಳ್ಳುವುದು, ವೈವಿಧ್ಯತೆಯಲ್ಲಿ ಬದುಕುವುದು ನಮ್ಮ ರಕ್ತನಾಳಗಳಲ್ಲಿದೆ. ಇದೇ ವೇಳೆ ತಮಾಷೆಯಾಗಿ ಜಗತ್ತಿಗೆ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕ-ಭಾರತ ಎಂದರು. ಇನ್ನು ಭಾರತವು ಈಗ ಅವಕಾಶಗಳ ನಾಡಾಗಿದೆ. ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ. ಭಾರತ ಶಕ್ತಿ ಮತ್ತು ಕನಸುಗಳಿಂದ ತುಂಬಿದೆ. ಪ್ರತಿದಿನ ನಾವು ಹೊಸ ಹೊಸ ಸಾಧನೆಗಳನ್ನ ಕಾಣುತ್ತೇವೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sun, 22 September 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ