ವಿದೇಶಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ದಾಖಲೆಯ 14ನೇ ಭಾಷಣ

ಪ್ರಧಾನಿ ನರೇಂದ್ರ ಮೋದಿ ಗಯಾನಾಗೆ ಭೇಟಿ ನೀಡಿದ್ದು, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ ಪರವಾಗಿ ಮಾಡುತ್ತಿರುವ 14 ಭಾಷಣ ಇದಾಗಿದೆ. ವಿದೇಶಿ ಸಂಸತ್ತುಗಳಿಗೆ ಅತಿ ಹೆಚ್ಚು ಭಾಷಣ ಮಾಡಿದ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವಿದೇಶಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ದಾಖಲೆಯ 14ನೇ ಭಾಷಣ
ನರೇಂದ್ರ ಮೋದಿ Image Credit source: NDTV
Follow us
ನಯನಾ ರಾಜೀವ್
|

Updated on: Nov 21, 2024 | 10:03 AM

ಪ್ರಧಾನಿ ನರೇಂದ್ರ ಮೋದಿ ಗಯಾನಾ ಪ್ರವಾಸದಲ್ಲಿದ್ದಾರೆ, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ ಪರವಾಗಿ ಮಾಡುತ್ತಿರುವ 14 ಭಾಷಣ ಇದಾಗಿದೆ. ವಿದೇಶಿ ಸಂಸತ್ತುಗಳಿಗೆ ಅತಿ ಹೆಚ್ಚು ಭಾಷಣ ಮಾಡಿದ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮನಮೋಹನ್​ ಸಿಂಗ್ ವಿದೇಶಿ ಸಂಸತ್ತುಗಳಲ್ಲಿ 7 ಬಾರಿ ಭಾಷಣ ಮಾಡಿದ್ದರು. ಇಂದಿರಾಗಾಂಧಿ ವಿದೇಶಿ ಶಾಸಕರನ್ನು ಉದ್ದೇಶಿಸಿ ನಾಲ್ಕು ಬಾರಿ ಭಾಷಣ ಮಾಡಿದ್ದರೆ, ಜವಾಹರಲಾಲ್ ನೆಹರೂ ಮೂರು ಬಾರಿ ಭಾಷಣ ಮಾಡಿದ್ದರು. ರಾಜೀವ್ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅಂತಹ ಎರಡು ಭಾಷಣಗಳನ್ನು ಮಾಡಿದರು ಮತ್ತು ಮೊರಾರ್ಜಿ ದೇಸಾಯಿ ಮತ್ತು ಪಿವಿ ನರಸಿಂಹ ರಾವ್ ಅವರಂತಹವರು ಒಮ್ಮೆ ಮಾತ್ರ ಭಾಷಣ ಮಾಡಿದ್ದರು.

ಪಿಎಂ ಮೋದಿ ಅವರು ಅಮೆರಿಕದಿಂದ ಯುರೋಪ್, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಏಷ್ಯಾದವರೆಗೆ ವಿಶ್ವದಾದ್ಯಂತ ಸಂಸತ್ತುಗಳಲ್ಲಿ ಭಾಷಣ ಮಾಡಿದ್ದಾರೆ. 2016ರಲ್ಲಿ ಮತ್ತು ನಂತರ 2023ರಲ್ಲಿ ಎರಡು ಬಾರಿ ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ಭಾಷಣ ಮಾಡಿದ್ದಾರೆ.

2014ರಲ್ಲಿ, ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾ ಮತ್ತು ಫಿಜಿ ಸಂಸತ್ತುಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ 2015 ರಲ್ಲಿ ಬ್ರಿಟಿಷ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು. ಆಫ್ರಿಕಾದಲ್ಲಿ, ಪ್ರಧಾನಿ ಮೋದಿ 2015 ರಲ್ಲಿ ಮಾರಿಷಸ್‌ನ ರಾಷ್ಟ್ರೀಯ ಅಸೆಂಬ್ಲಿ ಮತ್ತು 2018 ರಲ್ಲಿ ಉಗಾಂಡಾ ಸಂಸತ್ತಿನಲ್ಲಿ ಭಾಷಣ ಮಾಡಿದ್ದಾರೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿಗೆ ಗಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ‘ಆರ್ಡರ್ ಆಫ್ ಎಕ್ಸಲೆನ್ಸ್​’ ನೀಡಿ ಗೌರವಿಸಿದ ಅಧ್ಯಕ್ಷ ಇರ್ಫಾನ್ ಅಲಿ

ಏಷ್ಯಾದಲ್ಲಿ, 2014 ರಲ್ಲಿ ಭೂತಾನ್ ಸಂಸತ್ತು ಮತ್ತು ನೇಪಾಳ ಸಂವಿಧಾನದ ಅಸೆಂಬ್ಲಿಯ ಜಂಟಿ ಅಧಿವೇಶನ, 2015 ರಲ್ಲಿ ಶ್ರೀಲಂಕಾ, ಮಂಗೋಲಿಯಾ ಮತ್ತು ಅಫ್ಘಾನಿಸ್ತಾನದ ಸಂಸತ್ತುಗಳು ಮತ್ತು 2019 ರಲ್ಲಿ ಮಾಲ್ಡೀವ್ಸ್ ಸಂಸತ್ತಿನ ಸಂಸತ್ತಿನಲ್ಲಿ ಪ್ರಧಾನಿ ಭಾಷಣ ಮಾಡಿದ್ದಾರೆ.

ವರ್ಷ 2014 ಭೂತಾನ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು ನೇಪಾಳದ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು ಆಸ್ಟ್ರೇಲಿಯಾದ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು ಫಿಜಿಯ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು ವರ್ಷ 2015 ಶ್ರೀಲಂಕಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು ಮಂಗೋಲಿಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು ಬ್ರಿಟಿಷ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು ಅಫ್ಘಾನಿಸ್ತಾನದ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು

ವರ್ಷ 2016 ಯುಎಸ್ ಕಾಂಗ್ರೆಸ್ (ಸಂಸತ್ತು) ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದರು

ವರ್ಷ 2018 ಉಗಾಂಡಾ ಸಂಸತ್ತನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದರು ವರ್ಷ 2019 ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು

ವರ್ಷ 2023 ಪ್ರಧಾನಿ ಮೋದಿ ಜೂನ್ 22 ರಂದು ಎರಡನೇ ಬಾರಿಗೆ ಯುಎಸ್ ಕಾಂಗ್ರೆಸ್ (ಸಂಸತ್ತು) ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದರು.

ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ರಾಜೀವ್ ಗಾಂಧಿ ಅವರು ತಲಾ ಎರಡು ಬಾರಿ ವಿದೇಶಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಮತ್ತು ವಿಪಿ ಸಿಂಗ್ ತಲಾ ಒಮ್ಮೆ ವಿದೇಶಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು.

ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು 1949 ರಲ್ಲಿ ಯುಎಸ್ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದರು. ರಾಜೀವ್ ಗಾಂಧಿ ಅವರು 1985 ರಲ್ಲಿ ಯುಎಸ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು. 1994 ರಲ್ಲಿ ಪಿ.ವಿ.ನರಸಿಂಹರಾವ್ ಅವರು ಕಾಂಗ್ರೆಸ್ ಸಂಸತ್ತಿನಲ್ಲಿ ಭಾಷಣ ಮಾಡಿದ್ದರು.

ಇದಾದ ನಂತರ 2000ನೇ ಇಸವಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಅಮೇರಿಕಾದ ಸಂಸತ್ತಿನಲ್ಲಿ ಭಾಷಣ ಮಾಡಿದರು. ಮನಮೋಹನ್ ಸಿಂಗ್ ಅವರು 2005ರಲ್ಲಿ ಅಮೆರಿಕ ಸಂಸತ್ತಿನಲ್ಲಿ ಭಾಷಣ ಮಾಡಿದ್ದರು. ಇದರ ನಂತರ, 2016 ರಲ್ಲಿ, ಪ್ರಧಾನಿ ಮೋದಿ ಮೊದಲ ಬಾರಿಗೆ ಯುಎಸ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?