AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Russia Visit: ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ, ಇಂದಿನಿಂದ ಶುರು

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಆರಂಭಿಸಿದ ಬಳಿಕ ಪ್ರಧಾನಿ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ರಷ್ಯಾಕ್ಕೆ ಅವರ ಕೊನೆಯ ಭೇಟಿ 2019 ರಲ್ಲಿ ದೂರದ ಪೂರ್ವ ನಗರವಾದ ವ್ಲಾಡಿವೋಸ್ಟಾಕ್‌ನಲ್ಲಿ ನಡೆದ ಆರ್ಥಿಕ ಸಮಾವೇಶದಲ್ಲಿ ಭಾಗವಹಿಸಿದ್ದರು.

PM Modi Russia Visit: ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ, ಇಂದಿನಿಂದ ಶುರು
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 08, 2024 | 8:25 AM

Share

ಉಕ್ರೇನ್​, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಆಸ್ಟ್ರಿಯಾಕ್ಕೆ ತೆರಳಲಿರುವ ಪ್ರಧಾನಿ, ಗುರುವಾರದವರೆಗೂ ಅಲ್ಲಿರಲಿದ್ದಾರೆ. 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲು.

ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ನಂತರದ ಮೊದಲ ಭೇಟಿಯಲ್ಲಿ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಲಿದ್ದಾರೆ. ನಾಳೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಉಭಯ ನಾಯಕರು ಭಾಗವಹಿಸಲಿದ್ದಾರೆ.

ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಈ ಭೇಟಿ ಸಹಕಾರಿಯಾಗಲಿದೆ. ಪ್ರಧಾನಿಯವರ ರಷ್ಯಾ ಭೇಟಿಯ ಬಗ್ಗೆ ಪಾಶ್ಚಾತ್ಯರು ತುಂಬಾ ಅಸೂಯೆ ಪಟ್ಟಿದ್ದಾರೆ. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಇಂದು ರಷ್ಯಾಕ್ಕೆ ಭೇಟಿ ನೀಡುತ್ತಿದ್ದಾರೆ.

ಮತ್ತಷ್ಟು ಓದಿ: PM Modi Russia Visit: ಜುಲೈನಲ್ಲಿ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಹೇಳಿಕೆಯ ಪ್ರಕಾರ, ಉಭಯ ನಾಯಕರು ಸಮಕಾಲೀನ, ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.

2019ರಲ್ಲಿ ಪ್ರಧಾನಿ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ್ದರು. ಪೂರ್ವ ರಷ್ಯಾದಲ್ಲಿರುವ ವ್ಲಾದಿವೋಸ್ಟೊಕ್‌ನಲ್ಲಿ ಆರ್ಥಿಕ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದರು. ಆಧುನಿಕ ಡಿಜಿಟಲ್‌ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಭಯೋತ್ಪಾದನೆ ಮತ್ತು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಬದ್ಧವಾಗಿದೆ.

ಈ ಬಗ್ಗೆ ತನ್ನ ಸಹೋದರ(ಬ್ರಿಕ್ಸ್‌) ರಾಷ್ಟ್ರಗಳ ಸಹಕಾರದಲ್ಲಿ ಮುನ್ನಡೆಯುವುದಾಗಿ ಭಾರತದ ರಾಜತಾಂತ್ರಿಕ ನಿಯೋಗ ಬ್ರಿಕ್ಸ್‌ ಶೃಂಗದಲ್ಲಿ ಒತ್ತಿ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ