Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 5ರಂದು ಪ್ರಧಾನಿ ಮೋದಿ ಶ್ರೀಲಂಕಾ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5ರಂದು ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಪ್ರಧಾನಿ ಮೋದಿ ಅವರ ಶ್ರೀಲಂಕಾ ಭೇಟಿಯ ದಿನಾಂಕವನ್ನು ಘೋಷಿಸಿದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಕಳೆದ ವರ್ಷ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರ ದೆಹಲಿ ಭೇಟಿಯ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದಗಳನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5ರಂದು ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ. ಪೂರ್ವ ಬಂದರು ಜಿಲ್ಲೆಯಾದ ತ್ರಿಸ್ಮಾಯಿಲಿಯಲ್ಲಿ ಸಂಪೂರ್ ವಿದ್ಯುತ್ ಸ್ಥಾವರದ ನಿರ್ಮಾಣ ಕಾರ್ಯವು ಭಾರತದ ಪ್ರಧಾನಿಯವರ ಭೇಟಿಯ ಸಮಯದಲ್ಲಿಯೇ ಪ್ರಾರಂಭವಾಗಲಿದೆ ಎಂದು ಅಧ್ಯಕ್ಷರು ಸಂಸತ್ತಿನಲ್ಲಿ ತಿಳಿಸಿದರು.

ಏಪ್ರಿಲ್ 5ರಂದು ಪ್ರಧಾನಿ ಮೋದಿ ಶ್ರೀಲಂಕಾ ಪ್ರವಾಸ
Pm Modi
Follow us
ಸುಷ್ಮಾ ಚಕ್ರೆ
|

Updated on: Mar 22, 2025 | 5:04 PM

ನವದೆಹಲಿ, ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5ರಂದು ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಶುಕ್ರವಾರ ಸಂಸತ್ತಿನಲ್ಲಿ ಘೋಷಿಸಿದರು. ದೇಶದ ಸ್ಥಿರತೆಯಿಂದಾಗಿ ಮೋದಿ ಶ್ರೀಲಂಕಾಗೆ ಭೇಟಿ ನೀಡುತ್ತಿದ್ದಾರೆ ಎಂದು ದಿಸಾನಾಯಕೆ ಹೇಳಿದರು. ಕಳೆದ ವಾರ, ವಿದೇಶಾಂಗ ಸಚಿವೆ ವಿಜಿತಾ ಹೆರಾತ್ ಅವರು ಕಳೆದ ವರ್ಷ ಅಧ್ಯಕ್ಷ ದಿಸಾನಾಯಕೆ ಅವರ ದೆಹಲಿ ಭೇಟಿಯ ಸಮಯದಲ್ಲಿ ಮಾಡಿಕೊಂಡ ಒಪ್ಪಂದಗಳನ್ನು ಅಂತಿಮಗೊಳಿಸಲು ಮೋದಿ ಇಲ್ಲಿಗೆ ಆಗಮಿಸಲಿದ್ದಾರೆ ಎಂದು ಹೇಳಿದ್ದರು.

ಭಾರತದ ಪ್ರಧಾನಿ ಭೇಟಿಯ ಸಮಯದಲ್ಲಿಯೇ ತ್ರಿಕೋನಮಲಿಯ ಪೂರ್ವ ಬಂದರು ಜಿಲ್ಲೆಯಲ್ಲಿ ಸಂಪೂರ್ ವಿದ್ಯುತ್ ಸ್ಥಾವರದ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ಶ್ರೀಲಂಕಾ ಅಧ್ಯಕ್ಷ ದಿಸಾನಾಯಕೆ ಸಂಸತ್ತಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳು ಮೀನುಗಾರರ ಸಮಸ್ಯೆಗೆ ಬಗ್ಗೆ ಚರ್ಚೆ; ಶ್ರೀಲಂಕಾ ಅಧ್ಯಕ್ಷರ ಭೇಟಿ ಬಳಿಕ ಮೋದಿ ಹೇಳಿಕೆ

ಭಾರತ-ಶ್ರೀಲಂಕಾ ಒಪ್ಪಂದ:

ಕಳೆದ ತಿಂಗಳು, ಶ್ರೀಲಂಕಾ ಮತ್ತು ಭಾರತ ದ್ವೀಪ ದೇಶದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಒಪ್ಪಂದ ಮಾಡಿಕೊಂಡಿವೆ ಎಂದು ಆರೋಗ್ಯ ಸಚಿವೆ ನಲಿಂದಾ ಜಯಥಿಸ್ಸಾ ಘೋಷಿಸಿದ್ದರು. ಶ್ರೀಲಂಕಾ ಸರ್ಕಾರ ಮತ್ತು ಭಾರತ ಸರ್ಕಾರವು ತ್ರಿಕೋನಮಲಿಯ ಸಂಪೂರ್‌ನಲ್ಲಿ 50 ಮೆಗಾವ್ಯಾಟ್ (ಹಂತ 1) ಮತ್ತು 70 ಮೆಗಾವ್ಯಾಟ್ (ಹಂತ 2) ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಒಮ್ಮತಕ್ಕೆ ಬಂದಿವೆ.

ಇದಕ್ಕೂ ಮೊದಲು, ಭಾರತದ ಎನ್‌ಟಿಪಿಸಿ ಅದೇ ಸ್ಥಳದಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರವನ್ನು ನಿರ್ಮಿಸಬೇಕಿತ್ತು. ಹೊಸ ಜಂಟಿ ಉದ್ಯಮವು ಅದನ್ನು ಸೌರ ವಿದ್ಯುತ್ ಕೇಂದ್ರವಾಗಿ ಪರಿವರ್ತಿಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ