PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:May 23, 2023 | 1:04 PM

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ. ಪ್ರಧಾನಿಯವರ ಮೆಗಾ ಶೋ ನಡೆಯಲಿರುವ ಸಿಡ್ನಿ ಒಲಿಂಪಿಕ್ ಪಾರ್ಕ್‌ನ ಎಲ್ಲಾ ಟಿಕೆಟ್‌ಗಳು ಈಗಾಗಲೇ ಬುಕ್ ಆಗಿವೆ. ಆಸ್ಟ್ರೇಲಿಯದ ವಿವಿಧ ನಗರಗಳಿಂದ ಜನರು ಪ್ರಧಾನಿಯವರ ಮಾತುಗಳನ್ನು ಕೇಳಲು ಸಿಡ್ನಿ ತಲುಪುತ್ತಿದ್ದಾರೆ, ಇಂದು ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅನೇಕ ದೊಡ್ಡ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದ್ದರು. ಇದಾದ ಬಳಿಕ ಮಧ್ಯಾಹ್ನ ಸಿಡ್ನಿಯಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: PM Modi in Australia: ಆಸ್ಟ್ರೇಲಿಯಾ ಜತೆಗಿನ ಬಾಂಧವ್ಯ ಮುಂದಿನ ಹಂತಕ್ಕೆ; ಪ್ರಧಾನಿ ಮೋದಿ

ಆಸ್ಟ್ರೇಲಿಯನ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ 2016 ರ ಜನಗಣತಿಯ ಪ್ರಕಾರ, ಆಸ್ಟ್ರೇಲಿಯಾದಲ್ಲಿ 619,164 ಜನರು ತಾವು ಭಾರತೀಯ ಮೂಲದವರು ಎಂದು ಘೋಷಿಸಿದ್ದಾರೆ.

ಇದು ಆಸ್ಟ್ರೇಲಿಯನ್ ಜನಸಂಖ್ಯೆಯ 2.8 ಪ್ರತಿಶತವಾಗಿದೆ. ಆ ಪೈಕಿ 592,000 ಜನ ಭಾರತದಲ್ಲಿ ಜನಿಸಿದ್ದಾರೆ. ಪ್ರಧಾನಿ ಮೋದಿ ಅವರು ಕೊನೆಯ ಬಾರಿಗೆ 2014 ರಲ್ಲಿ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದರು.

12 ಗಂಟೆಗೆ  ಗೇಟ್​ಗಳು ತೆರೆಯಲಾಗಿದೆ, ಮಧ್ಯಾಹ್ನ 1 ಗಂಟೆಗೆ ಇಂಟರ್​ನಲ್​ ಗೇಟ್​ಗಳು ತೆರೆಯಲಿವೆ, 2 ಗಂಟೆಯವರೆಗೆ ಇಂಟರ್​ನಲ್ ಗೇಟ್​ಗಳು ತೆರೆದಿರಲಿವೆ. ಮಧ್ಯಾಹ್ನ 2.45ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 4.30ಕ್ಕೆ ಗೇಟ್​ ಮುಚ್ಚಲಾಗುತ್ತದೆ. 6 ಗಂಟೆಗೆ ಗಣ್ಯರು ಆಗಮಿಸುತ್ತಾರೆ. ಬಳಿಕ ಪ್ರಧಾನಿ ಮೋದಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Tue, 23 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್