PM Modi in US: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮಾತು; ಅಮೆರಿಕ ಅಧ್ಯಕ್ಷರನ್ನ ಹಾಡಿ ಹೊಗಳಿದ ಮೋದಿ

ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸಗೈದ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ನಿನ್ನೆ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೀಗನ್ ಸೆಂಟರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಅಮೆರಿಕದ ಮೂಲೆ ಮೂಲೆಗಳಲ್ಲೂ ಭಾರತೀಯರನ್ನು ನೋಡುತ್ತಿದ್ದೇನೆ. ಇಲ್ಲಿ ಮಿನಿ ಭಾರತ ಹೊರಹೊಮ್ಮಿದೆ ಎಂದು ನನಗೆ ಕಾಣುತ್ತಿದೆ ಎಂದರು.

PM Modi in US: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮಾತು; ಅಮೆರಿಕ ಅಧ್ಯಕ್ಷರನ್ನ ಹಾಡಿ ಹೊಗಳಿದ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
|

Updated on:Jun 24, 2023 | 10:20 AM

ವಾಷಿಂಗ್ಟನ್​​: ಅಮೆರಿಕದ (America) ಮೂಲೆ ಮೂಲೆಗಳಲ್ಲೂ ಭಾರತೀಯರನ್ನು ನೋಡುತ್ತಿದ್ದೇನೆ. ಇಲ್ಲಿ ಮಿನಿ ಭಾರತ (India) ಹೊರಹೊಮ್ಮಿದೆ ಎಂದು ನನಗೆ ಕಾಣುತ್ತಿದೆ. ಅಮೆರಿಕದಲ್ಲಿ ನನಗೆ ಸಿಗುತ್ತಿರುವ ಪ್ರೀತಿ ಅದ್ಭುತವಾಗಿದೆ. ಕಳೆದ 3 ದಿನಗಳಿಂದ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರ ಜೊತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್​ (Joe Biden) ಅನುಭವಿ ರಾಜಕಾರಣಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಡಿ ಹೊಗಳಿದರು.

ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೀಗನ್ ಸೆಂಟರ್‌ನಲ್ಲಿ ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತಮ ಭವಿಷ್ಯದತ್ತ ಎರಡೂ ರಾಷ್ಟ್ರಗಳು ಬಲವಾದ ಹೆಜ್ಜೆ ಇಡುತ್ತಿವೆ. ಭಾರತದಲ್ಲಿ ಹೂಡಿಕೆ ಮಾಡಲು ಹಲವು ಕಂಪನಿಗಳು ಘೋಷಿಸಿವೆ. ಇದು ಭಾರತದಲ್ಲಿ ಉದ್ಯೋಗ ಸೃಷ್ಟಿಸಲು ತುಂಬಾ ಸಹಾಯವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಭಾರತೀಯ ಪ್ರತಿಭೆ ಮತ್ತು ಅಮೆರಿಕದ ತಂತ್ರಜ್ಞಾನ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ: ಪ್ರಧಾನಿ ಮೋದಿ

ಭಾರತದಲ್ಲಿ ಹೂಡಿಕೆ ಮಾಡಲು ಇದು ಉತ್ತಮ ಸಮಯವಾಗಿದೆ. ಭಾರತದ ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಅಮೆರಿಕ ನಿರ್ಧರಿಸಿದೆ. ಈ ಪುರಾತನ ವಸ್ತುಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ತಲುಪಿವೆ. ಅಮೆರಿಕ ಸರ್ಕಾರದ ನಿರ್ಧಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಭಾರತ ಮತ್ತು ಅಮೆರಿಕ ನಡುವೆ ಆರ್ಟೆಮಿಸ್ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಹಲವು ಅವಕಾಶ ಒದಗಿಸುತ್ತೆ. 9 ವರ್ಷಗಳಲ್ಲಿ ತಂತ್ರಜ್ಞಾನ, ವ್ಯಾಪಾರ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾದ ಸಹಕಾರ ಅನನ್ಯವಾದದ್ದು. ಭಾರತ, ಅಮೆರಿಕ ನಡುವೆ ಉತ್ತಮ ಸಂಬಂಧವಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಭಾರತ ಮತ್ತು ಅಮೆರಿಕ ನಡುವಿನ ಪಾಲುದಾರಿಕೆಯು 21ನೇ ಶತಮಾನದಲ್ಲಿ ಜಗತ್ತನ್ನು ಉತ್ತಮಗೊಳಿಸುತ್ತದೆ. ಇದು ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಪಯಣ. ತಂತ್ರಜ್ಞಾನ ವರ್ಗಾವಣೆ, ಉತ್ಪಾದನಾ ಸಹಕಾರವನ್ನು ಆಳವಾಗಿಸುವುದು, ಕೈಗಾರಿಕಾ ಪೂರೈಕೆ ಸರಪಳಿಯಲ್ಲಿ ಸಮನ್ವಯವನ್ನು ಹೆಚ್ಚಿಸುವ ಕ್ಷೇತ್ರದಲ್ಲಿ ಎರಡೂ ರಾಷ್ಟ್ರಗಳು ಉತ್ತಮ ಭವಿಷ್ಯದತ್ತ ಬಲವಾದ ಹೆಜ್ಜೆ ಇಡುತ್ತಿವೆ ಎಂದು ತಿಳಿಸಿದರು.

ಜನರಲ್ ಎಲೆಕ್ಟ್ರಿಕ್‌ನಿಂದ ಫೈಟರ್ ಜೆಟ್ ಎಂಜಿನ್‌ಗಳನ್ನು ತಯಾರಿಸುವ ನಿರ್ಧಾರವು ಭಾರತದ ರಕ್ಷಣಾ ಕ್ಷೇತ್ರದ ಪ್ರಯಾಣದಲ್ಲಿ ಒಂದು ಮೈಲಿಗಲ್ಲು. ಹಾಗೇ ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ USA ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲಾಗುವುದು. ಮತ್ತು H1B ವೀಸಾ ನವೀಕರಣವನ್ನು ಯುಎಸ್‌ನಲ್ಲಿಯೇ ಮಾಡಿಕೊಳ್ಳಬಹುದು. H1B ವೀಸಾವನ್ನು ನವೀಕರಿಸಲು ಭಾರತೀಯರು ಇನ್ಮುಂದೆ ಯುಎಸ್ ಹೊರಗೆ ಹೋಗಬೇಕಾಗಿಲ್ಲ, ಇದು ಮುಖ್ಯವಾಗಿ ಟೆಕ್ಕಿಗಳಿಗೆ  ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 7:59 am, Sat, 24 June 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ