PM Modi Speech: ‘ಭಾರತ ಪ್ರಜಾಪ್ರಭುತ್ವದ ತಾಯಿ’, ಮ್ಯೂನಿಚ್​ನಲ್ಲಿ ಭಾರತದ ಪ್ರಜಾಪ್ರಭುತ್ವ ಬಗ್ಗೆ ಮೋದಿ ಭಾಷಣ

PM Modi Speech in Munich, Germany: ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮ್ಯೂನಿಚ್​ನಲ್ಲಿ ಎನ್​ಆರ್​ಐಗಳನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ಭಾಷಣದಲ್ಲಿ 1975ರ ತುರ್ತುಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ.

PM Modi Speech: ‘ಭಾರತ ಪ್ರಜಾಪ್ರಭುತ್ವದ ತಾಯಿ’, ಮ್ಯೂನಿಚ್​ನಲ್ಲಿ ಭಾರತದ ಪ್ರಜಾಪ್ರಭುತ್ವ ಬಗ್ಗೆ ಮೋದಿ ಭಾಷಣ
ಪ್ರಧಾನಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: ಆಯೇಷಾ ಬಾನು

Updated on:Jun 26, 2022 | 7:52 PM

ನವದೆಹಲಿ: ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರು ಮ್ಯೂನಿಚ್​ನಲ್ಲಿ ಎನ್​ಆರ್​ಐಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಭಾಷಣದಲ್ಲಿ 1975ರ ತುರ್ತುಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ಭಾರತ ಪ್ರಜಾಪ್ರಭುತ್ವದ ತಾಯಿ’, ಪ್ರಜಾಪ್ರಭುತ್ವ ವಿರೋಧಿಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಜರ್ಮನಿಯ ಮ್ಯೂನಿಚ್​ನಲ್ಲೂ ಕಾಂಗ್ರೆಸ್(Congress)​ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಭಾರತ ಇಂದು ಕೈಗಾರಿಕೆ, ಡಿಜಿಟಲ್​ ಎಕಾನಮಿಯಲ್ಲಿ ಅಗ್ರಸ್ಥಾನದಲ್ಲಿದೆ. ಕೈಗಾರಿಕಾ ಕ್ಷೇತ್ರವನ್ನು ಭಾರತ ಮುನ್ನಡೆಸುತ್ತಿದೆ. ಭಾರತ ದೇಶ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದುತ್ತಿದೆ. ಭಾರತ ಸಂಪೂರ್ಣ ಡಿಜಿಟಲ್​ ಆಗಿದೆ. ಭಾರತದ ಶಕ್ತಿಯನ್ನು ವಿಶ್ವ ಅರ್ಥಮಾಡಿಕೊಂಡಿದೆ. ಭಾರತ ಪ್ರತಿದಿನವೂ ಹೊಸ ದಾಖಲೆ ಬರೆಯುತ್ತಿದೆ ಎಂದರು. ಇದನ್ನೂ ಓದಿ: Mann Ki Baat: ಮನ್​ ಕಿ ಬಾತ್​ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ಮ್ಯೂನಿಚ್‌ಗೆ ಆಗಮಿಸಿದ್ದು ಮ್ಯೂನಿಚ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. “ಜೂನ್ 26 ಎನ್ನುವುದು ಪ್ರಜಾಪ್ರಭುತ್ವವನ್ನು ತುಳಿದು ದಮನ ಮಾಡಿದ ದಿನವನ್ನು ನೆನಪಿಸುತ್ತದೆ” ನಾವು ಭಾರತೀಯರು ನಮ್ಮ ಪ್ರಜಾಪ್ರಭುತ್ವದ ಬಗ್ಗೆ ಹೆಮ್ಮೆಪಡುತ್ತೇವೆ. ಇಂದು ಭಾರತ ಪ್ರಜಾಪ್ರಭುತ್ವದ ತಾಯಿ ಎಂದು ಹೆಮ್ಮೆಯಿಂದ ಹೇಳಬಹುದು. ಸಂಸ್ಕೃತಿ, ಆಹಾರ, ಬಟ್ಟೆ, ಸಂಗೀತ ಮತ್ತು ಸಂಪ್ರದಾಯಗಳ ವೈವಿಧ್ಯತೆಯು ನಮ್ಮ ಪ್ರಜಾಪ್ರಭುತ್ವವನ್ನು ರೋಮಾಂಚಕಗೊಳಿಸುತ್ತದೆ”

4ನೇ ಕೈಗಾರಿಕಾ ಕ್ರಾಂತಿಯನ್ನು ಭಾರತ ಮುನ್ನಡೆಸುವುದು. ಕಳೆದ ಶತಮಾನದಲ್ಲಿ, ಜರ್ಮನಿ ಮತ್ತು ಇತರ ದೇಶಗಳು ಕೈಗಾರಿಕಾ ಕ್ರಾಂತಿಯ ಲಾಭವನ್ನು ಪಡೆದುಕೊಂಡವು. ಆಗ ಭಾರತವು ಗುಲಾಮವಾಗಿತ್ತು, ಅದಕ್ಕಾಗಿಯೇ ಅದು ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ಈಗ ಭಾರತವು 4ನೇ ಕೈಗಾರಿಕಾ ಕ್ರಾಂತಿಯಲ್ಲಿ ಹಿಂದೆ ಉಳಿಯುವುದಿಲ್ಲ, ಅದು ಈಗ ಜಗತ್ತನ್ನು ಮುನ್ನಡೆಸುತ್ತಿದೆ ಎಂದು ನರೇಂದ್ರ ಮೋದಿಯವರು ಹೇಳಿದ್ದಾರೆ.

Published On - 7:31 pm, Sun, 26 June 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್