AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಿದ್ದಾರೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಧಾನಿ ಮೋದಿ

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಇತರ ವಿಶ್ವ ನಾಯಕರೊಂದಿಗೆ ಶ್ವೇತಭವನದ ಪತ್ರಿಕಾಗೋಷ್ಠಿಗಳನ್ನು ನಿಯಂತ್ರಿಸಲಾಗಿದೆ. ಯುಎಸ್ ಅಧಿಕಾರಿಗಳು ಬೈಡನ್ ಮತ್ತು ಅವರ ಅತಿಥಿಗಳಲ್ಲಿ ಪ್ರಶ್ನೆಗಳನ್ನು ಕೇಳಲು ಅಮೆರಿಕನ್ ಮತ್ತು ವಿದೇಶಿ ಮಾಧ್ಯಮಗಳಿಂದ ವರದಿಗಾರರನ್ನು ಮೊದಲೇ ಗೊತ್ತುಪಡಿಸುತ್ತಾರೆ.

ಅಮೆರಿಕದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಿದ್ದಾರೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಧಾನಿ ಮೋದಿ
ಬೈಡನ್ ದಂಪತಿ ಜತೆ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Jun 22, 2023 | 1:03 PM

Share

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಿದ್ದಾರೆ ಎಂದು ಶ್ವೇತ ಭವನ (White House) ಹೇಳಿದ್ದು, ಇದು ದೊಡ್ಡ ಸಂಗತಿ ಎಂದಿದೆ. ಈ ಬಗ್ಗೆ ಮಾತನಾಡಿದ ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ, ಪ್ರಧಾನಿ ಮೋದಿ ಅವರು ಭೇಟಿಯ ಕೊನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಅದು ಮುಖ್ಯವಾಗಿದೆ ಎಂದು ನಾವು ಭಾವಿಸುತ್ತೇವೆ. ಇದು ಮುಖ್ಯವೆಂದು ಅವರೂ ಭಾವಿಸಿದ್ದು ನಮಗೆ ಸಂತೋಷವಾಗಿದೆ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನಾಯಕರಿಬ್ಬರು ಅಮೆರಿಕದ ಮಾಧ್ಯಮದಿಂದ ಒಂದು ಪ್ರಶ್ನೆ ಮತ್ತು ಭಾರತೀಯ ಪತ್ರಕರ್ತರಿಂದ ಒಂದು ಪ್ರಶ್ನೆಗೆ ಉತ್ತರಿಸಲಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಯಾವುದೇ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿಲ್ಲ. ಅವರು ಹೆಚ್ಚಾಗಿ ಮಾಧ್ಯಮದವರಿಗೆ ನೇರಾ ನೇರಾ ಸಂದರ್ಶನಗಳನ್ನಷ್ಟೇ ಕೊಟ್ಟಿರುವುದು,

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಇತರ ವಿಶ್ವ ನಾಯಕರೊಂದಿಗೆ ಶ್ವೇತಭವನದ ಪತ್ರಿಕಾಗೋಷ್ಠಿಗಳನ್ನು ನಿಯಂತ್ರಿಸಲಾಗಿದೆ. ಯುಎಸ್ ಅಧಿಕಾರಿಗಳು ಬೈಡನ್ ಮತ್ತು ಅವರ ಅತಿಥಿಗಳಲ್ಲಿ ಪ್ರಶ್ನೆಗಳನ್ನು ಕೇಳಲು ಅಮೆರಿಕನ್ ಮತ್ತು ವಿದೇಶಿ ಮಾಧ್ಯಮಗಳಿಂದ ವರದಿಗಾರರನ್ನು ಮೊದಲೇ ಗೊತ್ತುಪಡಿಸುತ್ತಾರೆ. ಇಲ್ಲಿ ಬಹಳ ಸೀಮಿತ ಸಂಖ್ಯೆಯ ಪ್ರಶ್ನೆಗಳನ್ನು ಅನುಮತಿಸಲಾಗಿದೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ.

ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ರಾಜ್ಯ ಪ್ರವಾಸದಲ್ಲಿದ್ದಾರೆ. ಪ್ರಧಾನಮಂತ್ರಿಯವರು ನಿನ್ನೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ನಂತರ ವಾಷಿಂಗ್ಟನ್ ಡಿಸಿಗೆ ತೆರಳಿದರು. ಅಲ್ಲಿ ಅವರು ಯುಎಸ್ ಅಧ್ಯಕ್ಷ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್

ಇಂದು ಸಂಜೆ ಅವರು ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರ ಎರಡನೇ ಭಾಷಣವಾಗಿದೆ. ಹೀಗೆ ಎರಡು ಬಾರಿ ಮಾತನಾಡುತ್ತಿರುವ ಮೊದಲನೇ ಭಾರತೀಯ ಪಿಎಂ ಮೋದಿ ಆಗಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Thu, 22 June 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​