PM Modi at White House: ಅಮೆರಿಕ, ಭಾರತದ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ; ಶ್ವೇತಭವನದಲ್ಲಿ ಪ್ರಧಾನಿ ಮೋದಿ
ಮೋದಿ ಅವರು ಶ್ವೇತಭವನದಲ್ಲಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಜಾಗತಿಕ ಶಾಂತಿಗಾಗಿ ಜತೆಯಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧವಾಗಿವೆ ಎಂದು ಮೋದಿ ಹೇಳಿದರು.
ವಾಷಿಂಗ್ಟನ್: ಅಮೆರಿಕ ಹಾಗೂ ಭಾರತದ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹೇಳಿದರು. ಅಮೆರಿಕದ ಶ್ವೇತಭವನದ (White House) ಆವರಣದಲ್ಲಿ ಭಾರತೀಯ ಸಮುದಾಯದವರು ಮತ್ತು ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಭಯ ರಾಷ್ಟ್ರಗಳು ಗೌರವಿಸುತ್ತವೆ. ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ, ಪರಸ್ಪರ ನೆರವು ನೀಡಲಾಗುತ್ತಿದೆ. ಅಮೆರಿಕದ ಜನತೆಗೆ ದೇವರ ಆಶೀರ್ವಾದ ಸದಾ ಇರಲಿದೆ ಎಂದು ಹೇಳಿದರು. ಜತೆಗೆ, ತಮಗೆ ಆತ್ಮೀಯ ಸ್ವಾಗತ ಕೋರಿದ ಅಧ್ಯಕ್ಷ ಜೋ ಬೈಡನ್ ಹಾಗೂ ಅಮೆರಿಕದ ಜನತೆಗೆ ಧನ್ಯವಾದ ಸಮರ್ಪಿಸಿದರು.
ಮೋದಿ ಅವರು ಶ್ವೇತಭವನದಲ್ಲಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಜಾಗತಿಕ ಶಾಂತಿಗಾಗಿ ಜತೆಯಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧವಾಗಿವೆ ಎಂದು ಮೋದಿ ಹೇಳಿದರು. ಭಾರತೀಯ ಸಮುದಾಯದವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ಅವರನ್ನುದ್ದೇಶಿಸಿ ‘ನೀವು ಭಾರತ ನಿಜವಾದ ಶಕ್ತಿ’ ಎಂದು ಬಣ್ಣಿಸಿದರು.
ಮೂರು ದಶಕದ ಹಿಂದೆ ನಾನು ಸಾಮಾನ್ಯ ವ್ಯಕ್ತಿಯಾಗಿ ಅಮೇರಿಕಾ ಪ್ರವಾಸಕ್ಕೆ ಬಂದಿದ್ದೆ. ಆಗ ವೈಟ್ ಹೌಸ್ ಅನ್ನು ಹೊರಗಡೆಯಿಂದ ನೋಡಿದ್ದೆ. ಈಗ ಪ್ರಧಾನಿಯಾಗಿ ಇಲ್ಲಿಗೆ ಬಂದಿದ್ದೇನೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ಭಾರತೀಯರನ್ನು ನೋಡುತ್ತಿದ್ದೇನೆ. ಭಾರತೀಯ ಸಮುದಾಯದ ಜನರು ತಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯ, ನಿಷ್ಠೆಯಿಂದ ಅಮೇರಿಕಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದೇಶಗಳ ನಡುವೆ ಸಂಬಂಧ ಹೆಚ್ಚಿಸುತ್ತಿದ್ದಾರೆ ಎಂದು ಮೋದಿ ಹೇಳಿದರು.
ಇದನ್ನೂ ಓದಿ: ಅಮೆರಿಕ ವೀಸಾಕ್ಕಾಗಿ ಇನ್ನು ಚೆನ್ನೈಗೆ ಹೋಗಬೇಕಿಲ್ಲ; ಬೆಂಗಳೂರಲ್ಲೇ ಆರಂಭವಾಗಲಿದೆ ಕಾನ್ಸುಲೇಟ್ ಕಚೇರಿ
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಶ್ವೇತಭವನಕ್ಕೆ ಕರೆದೊಯ್ದ ಜೋ ಬೈಡನ್ ಅವರು, ಅಮೆರಿಕ ಹಾಗೂ ಭಾರತದ ನಡುವೆ ಉತ್ತಮ ಬಾಂಧವ್ಯ ಇದೆ. ಉಭಯ ರಾಷ್ಟ್ರಗಳು 3 ಪದಗಳ ‘ವಿ ದ ಪೀಪಲ್’ ಬಾಂಧವ್ಯ ಹೊಂದಿದ್ದೇವೆ. ಹಲವು ವಿಚಾರಗಳಲ್ಲಿ ಅಮೆರಿಕ-ಭಾರತ ನಡುವೆ ಸಾಮ್ಯತೆ ಇದೆ. ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಎರಡೂ ರಾಷ್ಟ್ರಗಳ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. 21ನೇ ಶತಮಾನದ ಅತ್ಯಂತ ನಿರ್ಣಾಯಕ ಸಂಬಂಧಗಳಲ್ಲಿ ಇದು ಒಂದಾಗಿದೆ. ಇಂಡೋ-ಪೆಸಿಫಿಕ್ ಸಂಬಂಧ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.
ಫೋಟೊ ನೋಡಿ: PM Modi at White House; ಶ್ವೇತಭವನದಲ್ಲಿ ಮೋದಿ ಮೋಡಿ; ಚಿತ್ರಗಳು ಇಲ್ಲಿವೆ ನೋಡಿ
ಮೋದಿ ಅವರನ್ನು ಶ್ವೇತಭವನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಭಾರತೀಯ ಸಮುದಾಯದ ಜನರು ಮತ್ತು ಇತರ ಅತಿಥಿಗಳು ಸ್ವಾಗತಿಸಿದರು.
ಶ್ವೇತಭವನದಲ್ಲಿ ಮೊಳಗಿದ ಮೋದಿ ಘೋಷಣೆ
ಶ್ವೇತಭವನದ ಆವರಣಕ್ಕೆ ಆಗಮಿಸಿದ ಮೋದಿ ಅವರಿಗೆ ಅಮೆರಿಕದ ಸೇನಾ ಪಡೆಗಳು ಗೌರವ ಸಲ್ಲಿಸಿದರು. ಮೋದಿ ಅವರು ಸೇನಾಪಡೆಗಳ ಗೌರವ ವಂದನೆ ಸ್ವೀಕರಿಸಿದ ನಂತರ ‘ಮೋದಿ ಮೋದಿ’ ಘೋಷಣೆ ಕೇಳಿಬಂತು.
#WATCH | At the bilateral meeting with PM Narendra Modi, US President Joe Biden says, “…Thank you Prime Minister for your decision to host the G20 this year…I look forward to discussing how we can strengthen our partnership…” pic.twitter.com/b3qmkOtTgo
— ANI (@ANI) June 22, 2023
ಮೋದಿ – ಬೈಡನ್ ದ್ವಿಪಕ್ಷೀಯ ಮಾತುಕತೆ
ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು. ರಕ್ಷಣೆ, ವ್ಯಾಪಾರ, ವಿಜ್ಞಾನ ತಂತ್ರಜ್ಞಾನ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ಮಹತ್ವದ ಜಾಗತಿಕ ವಿದ್ಯಮಾನಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಅನೇಕ ಒಪ್ಪಂದಹಗಳಿಗೆ ಉಭಯ ನಾಯಕರು ಸಹಿ ಹಾಕಿದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:51 pm, Thu, 22 June 23