ಇರಾನ್ ಹೊಸ ಅಧ್ಯಕ್ಷ ಇಬ್ರಾಹಿಂ ರೈಸಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ, ಆಯ್ಕೆ ವಿಧಾನದ ಬಗ್ಗೆ ಅಮೆರಿಕ ಅಪಸ್ವರ

ಇರಾನ್​ನಲ್ಲಿ ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಟ್ಟರ್ ಇಸ್ಲಾಮಿಕ್ ನಾಯಕ, ನ್ಯಾಯಾಂಗದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಇಬ್ರಾಹಿಂ ರೈಸಿ ಆಯ್ಕೆಯಾಗಿದ್ದರು. ಇರಾನ್​ನ ಸರ್ವೋಚ್ಛ ನಾಯಕ ಅಲಿ ಖಮೇನಿ ಬೆಂಬಲ ರೈಸಿ ಅವರಿಗಿತ್ತು.

ಇರಾನ್ ಹೊಸ ಅಧ್ಯಕ್ಷ ಇಬ್ರಾಹಿಂ ರೈಸಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ, ಆಯ್ಕೆ ವಿಧಾನದ ಬಗ್ಗೆ ಅಮೆರಿಕ ಅಪಸ್ವರ
ಇರಾನ್ ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 20, 2021 | 9:17 PM

ದೆಹಲಿ: ಇರಾನ್​ನ ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಭಿನಂದಿಸಿದರು. ಭಾರತ ಮತ್ತು ಇರಾನ್ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ದೃಢಗೊಳಿಸುವ ಹೊಸ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ ಹೇಳಿದರು. ಇರಾನ್​ನಲ್ಲಿ ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಟ್ಟರ್ ಇಸ್ಲಾಮಿಕ್ ನಾಯಕ, ನ್ಯಾಯಾಂಗದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಇಬ್ರಾಹಿಂ ರೈಸಿ ಆಯ್ಕೆಯಾಗಿದ್ದರು. ಇರಾನ್​ನ ಸರ್ವೋಚ್ಛ ನಾಯಕ ಅಲಿ ಖಮೇನಿ ಬೆಂಬಲ ರೈಸಿ ಅವರಿಗಿತ್ತು. ಆದರೆ ಈ ಬಾರಿ ನಡೆದ ಚುನಾವಣೆಯಲ್ಲಿ ನಡೆದಿರುವ ಮತದಾನದ ಪ್ರಮಾಣ ಇರಾನ್​ನ ಇತಿಹಾಸದಲ್ಲಿಯೇ ಅತ್ಯಂತ ಕನಿಷ್ಠಮಟ್ಟದ್ದಾಗಿದೆ.

ಇರಾನ್​ನ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ‘ಭಾರತ ಮತ್ತು ಇರಾನ್ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ನಿಕಟಗೊಳಿಸುವ ಅವಕಾಶಗಳನ್ನು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಇರಾನ್ ನೂತನ ಅಧ್ಯಕ್ಷರ ಆಯ್ಕೆಯ ಬಗ್ಗೆ ಅಮೆರಿಕ ಅಪಸ್ವರ ಎತ್ತಿದೆ. ಇರಾನ್​ನ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಪಾಲ್ಗೊಳ್ಳಲು ಅಲ್ಲಿನ ಜನಸಾಮಾನ್ಯರಿಗೆ ಸಾಧ್ಯವಾಗಿಲ್ಲ ಎಂದು ಅಮೆರಿಕ ವಿಷಾದಿಸಿದೆ. ಇರಾನ್​ನ ಕಟ್ಟರ್ ಮೂಲಭೂತವಾದಿ ಇಬ್ರಾಹಿಂ ರೈಸಿ ಆಯ್ಕೆ ಕುರಿತು ಮೊದಲು ಪ್ರತಿಕ್ರಿಯಿಸಿದ ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರರು, ತಮ್ಮ ಸ್ವಂತ ನಾಯಕರನ್ನು ನ್ಯಾಯಸಮ್ಮತ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳಲು ಇರಾನ್ ಜನರಿಗೆ ಅವಕಾಶ ಸಿಗಲಿಲ್ಲ’ ಎಂದು ಹೇಳಿದರು.

ಅಮೆರಿಕದ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್ ಅಧಿಕಾರ ಅವಧಿಯಲ್ಲಿ ಇರಾನ್​ ಜೊತಗಿನ ಮಾತುಕತೆಯನ್ನು ಮುಂದುವರಿಸುವುದಿಲ್ಲ ಎಂದು ಅಮೆರಿಕ ಹೇಳಿತ್ತು. ನೂತನ ಅಧ್ಯಕ್ಷರು ಆಯ್ಕೆಯಾದ ರೀತಿಯ ಬಗ್ಗೆ ಅಮೆರಿಕ ಅಪಸ್ವರ ಎತ್ತಿದ್ದರೂ ಪರೋಕ್ಷ ಮಾತುಕತೆಗಳನ್ನು ಮುಂದುವರಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಆಗುವುದಿಲ್ಲ ಎಂದು ಹೇಳಿದೆ.

(PM Narendra Modi Congratulates Irans Newly Elected President Ebrahim Raisi)

ಇದನ್ನೂ ಓದಿ: International Yoga Day: ಯೋಗ ದಿನದ ಪ್ರಯುಕ್ತ ನಾಳೆ ಬೆಳಗ್ಗೆ 6.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ

ಇದನ್ನೂ ಓದಿ: ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ; ಏನದು ಮಹತ್ವದ ವಿಷಯ?

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?