ಕೀರ್ ಸ್ಟಾರ್ಮರ್‌ ಗೆಲುವಿಗೆ ನರೇಂದ್ರ ಮೋದಿ ಅಭಿನಂದನೆ; ರಿಷಿ ಸುನಕ್‌ಗೆ ಥ್ಯಾಂಕ್ಸ್​ ಎಂದ ಪ್ರಧಾನಿ

ಇಂಗ್ಲೆಂಡ್ ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಜಯ ಗಳಿಸಿದ ಕೀರ್ ಸ್ಟಾರ್ಮರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹಾಗೇ, ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರ ನಾಯಕತ್ವ ಮತ್ತು ಭಾರತ-ಯುಕೆ ಬಾಂಧವ್ಯವನ್ನು ಗಾಢಗೊಳಿಸುವ ಪ್ರಯತ್ನಗಳಿಗಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕೀರ್ ಸ್ಟಾರ್ಮರ್‌ ಗೆಲುವಿಗೆ ನರೇಂದ್ರ ಮೋದಿ ಅಭಿನಂದನೆ; ರಿಷಿ ಸುನಕ್‌ಗೆ ಥ್ಯಾಂಕ್ಸ್​ ಎಂದ ಪ್ರಧಾನಿ
ರಿಷಿ ಸುನಕ್‌- ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: Jul 05, 2024 | 4:14 PM

ನವದೆಹಲಿ: ಗುರುವಾರ ನಡೆದ ಚುನಾವಣೆಯಲ್ಲಿ ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ 14 ವರ್ಷಗಳ ನಂತರ ಬಹಳ ಹೀನಾಯ ಸೋಲನ್ನು ಅನುಭವಿಸಿದೆ. ಲೇಬರ್ ಪಕ್ಷವು ಕನ್ಸರ್ವೇಟಿವ್‌ ಪಕ್ಷವನ್ನು ಸೋಲಿಸಿದ ನಂತರ ರಿಷಿ ಸುನಕ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಇಂಗ್ಲೆಂಡ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕೀರ್ ಸ್ಟಾರ್ಮರ್ ಸಿದ್ಧರಾಗಿದ್ದಾರೆ.

ಯುಕೆ ಚುನಾವಣೆಯಲ್ಲಿ ಜಯ ಗಳಿಸಿದ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್ ಜೊತೆ ಪಾಸಿಟಿವ್ ಸಹಯೋಗವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಹಾಗೇ, ಅವರು ನಿರ್ಗಮಿಸುವ ಪ್ರಧಾನ ಮಂತ್ರಿ ರಿಷಿ ಸುನಕ್ ಅವರಿಗೆ ಧನ್ಯವಾದಗಳನ್ನು ಕೂಡ ತಿಳಿಸಿದ್ದಾರೆ.

“UK ಸಾರ್ವತ್ರಿಕ ಚುನಾವಣೆಯಲ್ಲಿ ಗಮನಾರ್ಹ ವಿಜಯಕ್ಕಾಗಿ ಕೀರ್ ಸ್ಟಾರ್ಮರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಎಲ್ಲಾ ಕ್ಷೇತ್ರಗಳಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಮ್ಮ ಸಕಾರಾತ್ಮಕ ಸಹಯೋಗವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಖಲಿಸ್ತಾನಿ ಬೆಂಬಲಿಗರ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ವಶಪಡಿಸಿಕೊಂಡ ರಿಷಿ ಸುನಕ್ ಸರ್ಕಾರ

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮತ್ತು ಕಾರ್ಯತಂತ್ರದ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಯುಕೆ ಹೊಸ ಸರ್ಕಾರದೊಂದಿಗೆ ಸಹಕರಿಸಲು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಿಷಿ ಸುನಕ್ ಅವರ “ಶ್ಲಾಘನೀಯ ನಾಯಕತ್ವ” ಮತ್ತು ಭಾರತ-ಯುಕೆ ಸಂಬಂಧಗಳನ್ನು ಗಾಢವಾಗಿಸುವಲ್ಲಿ ಅವರು ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ಬ್ರಿಟನ್‌ನ ನಿಮ್ಮ ಶ್ಲಾಘನೀಯ ನಾಯಕತ್ವಕ್ಕಾಗಿ ರಿಷಿ ಸುನಕ್ ಅವರಿಗೆ ಧನ್ಯವಾದಗಳು. ನಿಮ್ಮ ಅಧಿಕಾರಾವಧಿಯಲ್ಲಿ ಭಾರತ ಮತ್ತು ಯುಕೆ ನಡುವಿನ ಸಂಬಂಧವನ್ನು ಗಾಢವಾಗಿಸಲು ನಿಮ್ಮ ಸಕ್ರಿಯ ಕೊಡುಗೆ ಅಪಾರ. ಭವಿಷ್ಯಕ್ಕಾಗಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಮೋದಿ ಮಾಡಿದ ಭಾಷಣದಲ್ಲಿರುವ ತಪ್ಪುಗಳನ್ನು ಉಲ್ಲೇಖಿಸಿ ಸ್ಪೀಕರ್​​ಗೆ ಪತ್ರ ಬರೆದ ಕಾಂಗ್ರೆಸ್

ಒಂದು ದಶಕದಿಂದ ಅಧಿಕಾರದಿಂದ ಹೊರಗುಳಿದಿದ್ದ ಲೇಬರ್ ಪಕ್ಷವು ಹೌಸ್ ಆಫ್ ಕಾಮನ್ಸ್‌ನಲ್ಲಿ ಮ್ಯಾಜಿಕ್ ನಂಬರ್ 326 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಸರ್ಕಾರ ಬದಲಾವಣೆಯನ್ನು ಖಚಿತಪಡಿಸಿದೆ. ಗುರುವಾರ ನಡೆದ ಪಾರ್ಲಿಮೆಂಟರಿ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಕ್ಷವು 650 ಸ್ಥಾನಗಳ ಹೌಸ್ ಆಫ್ ಕಾಮನ್ಸ್‌ನಲ್ಲಿ 412 ಸ್ಥಾನಗಳನ್ನು ಪಡೆದುಕೊಂಡು 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್