ನವದೆಹಲಿ: ಗುರುವಾರ ನಡೆದ ಚುನಾವಣೆಯಲ್ಲಿ ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ 14 ವರ್ಷಗಳ ನಂತರ ಬಹಳ ಹೀನಾಯ ಸೋಲನ್ನು ಅನುಭವಿಸಿದೆ. ಲೇಬರ್ ಪಕ್ಷವು ಕನ್ಸರ್ವೇಟಿವ್ ಪಕ್ಷವನ್ನು ಸೋಲಿಸಿದ ನಂತರ ರಿಷಿ ಸುನಕ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಇಂಗ್ಲೆಂಡ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕೀರ್ ಸ್ಟಾರ್ಮರ್ ಸಿದ್ಧರಾಗಿದ್ದಾರೆ.
ಯುಕೆ ಚುನಾವಣೆಯಲ್ಲಿ ಜಯ ಗಳಿಸಿದ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್ ಜೊತೆ ಪಾಸಿಟಿವ್ ಸಹಯೋಗವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಹಾಗೇ, ಅವರು ನಿರ್ಗಮಿಸುವ ಪ್ರಧಾನ ಮಂತ್ರಿ ರಿಷಿ ಸುನಕ್ ಅವರಿಗೆ ಧನ್ಯವಾದಗಳನ್ನು ಕೂಡ ತಿಳಿಸಿದ್ದಾರೆ.
Heartiest congratulations and best wishes to @Keir_Starmer on the remarkable victory in the UK general elections. I look forward to our positive and constructive collaboration to further strengthen the India-UK Comprehensive Strategic Partnership in all areas, fostering mutual…
— Narendra Modi (@narendramodi) July 5, 2024
“UK ಸಾರ್ವತ್ರಿಕ ಚುನಾವಣೆಯಲ್ಲಿ ಗಮನಾರ್ಹ ವಿಜಯಕ್ಕಾಗಿ ಕೀರ್ ಸ್ಟಾರ್ಮರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಎಲ್ಲಾ ಕ್ಷೇತ್ರಗಳಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಮ್ಮ ಸಕಾರಾತ್ಮಕ ಸಹಯೋಗವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಕ್ಸ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಖಲಿಸ್ತಾನಿ ಬೆಂಬಲಿಗರ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ವಶಪಡಿಸಿಕೊಂಡ ರಿಷಿ ಸುನಕ್ ಸರ್ಕಾರ
ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮತ್ತು ಕಾರ್ಯತಂತ್ರದ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಯುಕೆ ಹೊಸ ಸರ್ಕಾರದೊಂದಿಗೆ ಸಹಕರಿಸಲು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ರಿಷಿ ಸುನಕ್ ಅವರ “ಶ್ಲಾಘನೀಯ ನಾಯಕತ್ವ” ಮತ್ತು ಭಾರತ-ಯುಕೆ ಸಂಬಂಧಗಳನ್ನು ಗಾಢವಾಗಿಸುವಲ್ಲಿ ಅವರು ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಎಕ್ಸ್ನಲ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
Thank you @RishiSunak for your admirable leadership of the UK, and your active contribution to deepen the ties between India and the UK during your term in office. Best wishes to you and your family for the future.
— Narendra Modi (@narendramodi) July 5, 2024
“ಬ್ರಿಟನ್‌ನ ನಿಮ್ಮ ಶ್ಲಾಘನೀಯ ನಾಯಕತ್ವಕ್ಕಾಗಿ ರಿಷಿ ಸುನಕ್ ಅವರಿಗೆ ಧನ್ಯವಾದಗಳು. ನಿಮ್ಮ ಅಧಿಕಾರಾವಧಿಯಲ್ಲಿ ಭಾರತ ಮತ್ತು ಯುಕೆ ನಡುವಿನ ಸಂಬಂಧವನ್ನು ಗಾಢವಾಗಿಸಲು ನಿಮ್ಮ ಸಕ್ರಿಯ ಕೊಡುಗೆ ಅಪಾರ. ಭವಿಷ್ಯಕ್ಕಾಗಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ಲೋಕಸಭೆಯಲ್ಲಿ ಮೋದಿ ಮಾಡಿದ ಭಾಷಣದಲ್ಲಿರುವ ತಪ್ಪುಗಳನ್ನು ಉಲ್ಲೇಖಿಸಿ ಸ್ಪೀಕರ್ಗೆ ಪತ್ರ ಬರೆದ ಕಾಂಗ್ರೆಸ್
ಒಂದು ದಶಕದಿಂದ ಅಧಿಕಾರದಿಂದ ಹೊರಗುಳಿದಿದ್ದ ಲೇಬರ್ ಪಕ್ಷವು ಹೌಸ್ ಆಫ್ ಕಾಮನ್ಸ್‌ನಲ್ಲಿ ಮ್ಯಾಜಿಕ್ ನಂಬರ್ 326 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಸರ್ಕಾರ ಬದಲಾವಣೆಯನ್ನು ಖಚಿತಪಡಿಸಿದೆ. ಗುರುವಾರ ನಡೆದ ಪಾರ್ಲಿಮೆಂಟರಿ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಕ್ಷವು 650 ಸ್ಥಾನಗಳ ಹೌಸ್ ಆಫ್ ಕಾಮನ್ಸ್‌ನಲ್ಲಿ 412 ಸ್ಥಾನಗಳನ್ನು ಪಡೆದುಕೊಂಡು 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸಿತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ