ಕ್ವಾಡ್ ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದ ಪ್ರಧಾನಿ ಮೋದಿ

ಅಮೆರಿಕದಲ್ಲಿ ನಡೆದ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಕ್ವಾಡ್ ಒಕ್ಕೂಟವನ್ನು ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದರು. ಹಾಗೆಯೇ ಈ ಸಂಬಂಧವು ಬಹುದೀರ್ಘಕಾಲದವರೆಗೆ ಇರಲಿದೆ ಹಾಗೂ ವಿಶಿಷ್ಟವಾಗಿರಲಿದೆ ಎಂದು ಮೋದಿ ಹೇಳಿದ್ದಾರೆ. ಭಾರತವು ಮುಂದಿನ ಕ್ವಾಡ್ ಶೃಂಗಸಭೆಯನ್ನು 2025 ರಲ್ಲಿ ಆಯೋಜಿಸಲು ಒಪ್ಪಿಕೊಂಡಿದೆ.

ಕ್ವಾಡ್ ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
|

Updated on: Sep 22, 2024 | 2:20 PM

ಅಮೆರಿಕದಲ್ಲಿ ನಡೆದ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಕ್ವಾಡ್ ಒಕ್ಕೂಟವನ್ನು ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದರು. ಹಾಗೆಯೇ ಈ ಸಂಬಂಧವು ಬಹುದೀರ್ಘಕಾಲದವರೆಗೆ ಇರಲಿದೆ ಹಾಗೂ ವಿಶಿಷ್ಟವಾಗಿರಲಿದೆ ಎಂದು ಮೋದಿ ಹೇಳಿದ್ದಾರೆ. ಭಾರತವು ಮುಂದಿನ ಕ್ವಾಡ್ ಶೃಂಗಸಭೆಯನ್ನು 2025 ರಲ್ಲಿ ಆಯೋಜಿಸಲು ಒಪ್ಪಿಕೊಂಡಿದೆ.

ಕ್ವಾಡ್ ಭಾರತ, ಯುಎಸ್, ಜಪಾನ್ ಮತ್ತು ಆಸ್ಟ್ರೇಲಿಯಾದಿಂದ ರಚಿಸಲ್ಪಟ್ಟ ಒಂದು ಗುಂಪಾಗಿದ್ದು ಅದು ಈ ದೇಶಗಳ ನಡುವಿನ ಅನೌಪಚಾರಿಕ ಕಾರ್ಯತಂತ್ರದ ಸಂವಾದಕ್ಕೆ ವೇದಿಕೆಯನ್ನು ಒದಗಿಸುತ್ತದೆ. ಭಾರತದ ಸಶಸ್ತ್ರ ಪಡೆಗಳ ಗುಪ್ತಚರ, ಕಣ್ಗಾವಲು ಮತ್ತು ವಿಚಕ್ಷಣ ಸಾಮರ್ಥ್ಯಗಳನ್ನು ಹೆಚ್ಚಿಸುವ 31 ಜನರಲ್‌ ಅಟಾಮಿಕ್ಸ್​ ಎಂಕ್ಯೂ-9ಬಿ ಡ್ರೋನ್​ಗಳ ಖರೀದಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಬೈಡನ್‌ ಅವರಿಂದ ಗ್ರೀನ್‌ ಸಿಗ್ನಲ್‌ ಸಹ ಸಿಕ್ಕಿದೆ ಎಂದು ಹೇಳಲಾಗಿದೆ.

ಆರೋಗ್ಯ, ಭದ್ರತೆ, ನಿರ್ಣಾಯಕ ಉದಯೋನ್ಮುಖ ತಂತ್ರಜ್ಞಾನಗಳು, ಹವಾಮಾನ ಬದಲಾವಣೆ ಮತ್ತು ಸಾಮರ್ಥ್ಯ ನಿರ್ಮಾಣದಂತಹ ಕ್ಷೇತ್ರಗಳಲ್ಲಿ ಕ್ವಾಡ್ ದೇಶಗಳು ಅನೇಕ ಸಕಾರಾತ್ಮಕ ಮತ್ತು ಅಂತರ್ಗತ ಉಪಕ್ರಮಗಳನ್ನು ತೆಗೆದುಕೊಂಡಿವೆ ಎಂದರು. ಅಂತೆಯೇ 2025 ರಲ್ಲಿ ಭಾರತದಲ್ಲಿ ಕ್ವಾಡ್ ಶೃಂಗಸಭೆಯನ್ನು ಆಯೋಜಿಸುವ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ಮತ್ತಷ್ಟು ಓದಿ: ಪುರಾತನ ಬೆಳ್ಳಿಯಿಂದ ಮಾಡಿದ ರೈಲು ಮಾದರಿಯನ್ನು ಜೋ ಬೈಡನ್​ಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

ಇದೇ ವೇಳೆ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಚೀನಾ ಕ್ವಾಡ್‌ ಸದಸ್ಯ ರಾಷ್ಟ್ರಗಳನ್ನು ಪರೀಕ್ಷಿಸುತ್ತಿದೆ. ಷಿ ಜಿನ್‌ಪಿಂಗ್‌ (ಚೀನಾ ಅಧ್ಯಕ್ಷ) ದೇಶೀಯ ಆರ್ಥಿಕ ಸವಾಲುಗಳು ಹಾಗೂ ಪ್ರಕ್ಷುಬ್ಧತೆಯನ್ನು ನಿಯಂತ್ರಿಸುವುದರ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ ಎಂದು ಭಾವಿಸಿದ್ದೇವೆ.

ದೇಶದ ಹಿತದೃಷ್ಟಿಯಿಂದ ಅವರು ಆಕ್ರಮಣಕಾರಿಯಾಗಿ ಸಾಗುತ್ತಿದ್ದಾರೆ ಎಂದು ನನಗನಿಸುತ್ತಿದೆ ಎಂದರು. ಅಮೆರಿಕದ ಡೆಲವೇರ್​ನಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಮೂರು ದಿನಗಳ ಅಮೆರಿಕ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ಅಮೆರಿಕದ ಫಿಲಡೆಲ್ಫಿಯಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೊದಲು, ಅವರು ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಪ್ರದೇಶಗಳಲ್ಲಿ ಪ್ರಾದೇಶಿಕ ವಿವಾದಗಳನ್ನು ಚೀನಾ ಸೃಷ್ಟಿಸಿದೆ. ದಕ್ಷಿಣ ಚೀನಾ ಸಮುದ್ರದ ಮೇಲೆ ಸಾರ್ವಭೌಮತ್ವ ಪ್ರತಿಪಾದಿಸುತ್ತಿರುವ ಚೀನಾ ನಡೆಯನ್ನು ವಿಯೆಟ್ನಾಂ, ಮಲೇಷ್ಯಾ, ಫಿಲಿಪ್ಪೀನ್ಸ್‌, ಬ್ರೂನೈ ಮತ್ತು ತೈವಾನ್ ತೀವ್ರವಾಗಿ ವಿರೋಧಿಸುತ್ತಿವೆ.

ಭಾಷಣಕಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಮತ್ತು ಪ್ರಸಾರ ಮಾಡಲು ಹಾಟ್ ಮೈಕ್‌ ಅಥವಾ ಮೈಕ್ರೊಫೋನ್‌ ಬಳಸಲಾಗುತ್ತದೆ. ಭಾಷಣಕಾರರು ಇಲ್ಲದ ಸಂದರ್ಭದಲ್ಲಿಯೂ ಅವುಗಳನ್ನು ಬಳಸಬಹುದು. ದಾಖಲಿಸಲಾಗಿರುವ ಧ್ವನಿ ಕೆಲವೊಮ್ಮೆ ಭಾಷಣಕಾರರ ಅರಿವಿಗೆ ಬಾರದೆ ಪ್ರಸಾರವಾಗುತ್ತವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್