PM Modi Gift To Biden: ಬೈಡನ್ ದಂಪತಿಗೆ ಕರ್ನಾಟಕದ ಶ್ರೀಗಂಧದ ಪೆಟ್ಟಿಗೆಯೊಂದಿಗೆ ದಶದಾನ ರೂಪದಲ್ಲಿ ಪ್ರಧಾನಿ ಮೋದಿ ನೀಡಿರುವ ಉಡುಗೊರೆಗಳೇನು? ಇಲ್ಲಿದೆ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಅವರು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ 10 ವಸ್ತುಗಳನ್ನು ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ.

PM Modi Gift To Biden: ಬೈಡನ್ ದಂಪತಿಗೆ ಕರ್ನಾಟಕದ ಶ್ರೀಗಂಧದ ಪೆಟ್ಟಿಗೆಯೊಂದಿಗೆ ದಶದಾನ ರೂಪದಲ್ಲಿ ಪ್ರಧಾನಿ ಮೋದಿ ನೀಡಿರುವ ಉಡುಗೊರೆಗಳೇನು? ಇಲ್ಲಿದೆ ಮಾಹಿತಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Jun 22, 2023 | 10:05 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಅವರು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ 10 ವಸ್ತುಗಳನ್ನು ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ. ರಾಜಸ್ಥಾನದ ಜೈಪುರದ ಕುಶಲಕರ್ಮಿಯೊಬ್ಬರು ಮೈಸೂರಿನಿಂದ ತಂದ ಶ್ರೀಗಂಧ ಮರದ ಕಟ್ಟಿಗೆಯಿಂದ ತಯಾರಿಸಿದ ಶ್ರೀಗಂಧದ ಪೆಟ್ಟಿಗೆಯನ್ನು ಜೋ ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ. ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್​ಗೆ ಮೋದಿ ಅವರು 7.5 ಕ್ಯಾರೆಟ್ ಹಸಿರು ವಜ್ರವನ್ನು ಉಡುಗೊರೆಯಾಗಿ ನೀಡಿದರು. ಈ ವಜ್ರವು ರಾಸಾಯನಿಕ ಹಾಗೂ ಆಪ್ಟಿಕಲ್ ಗುಣಲಕ್ಷಣಗಳನ್ನು ಪ್ರತಿಬಿಂಬಿಸುತ್ತದೆ.

ಸೌರ ಮತ್ತು ಪವನ ಶಕ್ತಿಯಂತಹ ಪರಿಸರ -ವೈವಿಧ್ಯ ಸಂಪನ್ಮೂಲಗಳನ್ನು ಅದರ ತಯಾರಿಕೆಯಲ್ಲಿ ಬಳಸಲಾಗಿದೆ. ಬೈಡನ್ ದಂಪತಿಗೆ ನೀಡಲಾಗಿರುವ ಗಂಧದ ಪೆಟ್ಟಿಗೆಯಲ್ಲಿ ಬೆಳ್ಳಿಯಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹವನ್ನು ಇರಿಸಿಲಾಗಿದೆ. ಅದರಲ್ಲಿ ದೀಪವೂ ಕೂಡ ಇದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ನೀಡಲಾದ ಪೆಟ್ಟಿಗೆಯು 10 ವಸ್ತುಗಳನ್ನು ಒಳಗೊಂಡಿದೆ. ಪಶ್ಚಿಮ ಬಂಗಾಳದ ಕುಶಲಕರ್ಮಿ ತಯಾರಿಸಿದ ಬೆಳ್ಳಿಯ ತೆಂಗಿನಕಾಯಿಯನ್ನು ಕೂಡ ನೀಡಲಾಗಿದೆ.

ಮತ್ತಷ್ಟು ಓದಿ: PM Modi Dinner: ಬೈಡನ್ ಆಯೋಜಿಸಿರುವ ಔತಣಕೂಟದಲ್ಲಿ ಪ್ರಧಾನಿ ಮೋದಿಗೆ ನೀಡಲಾಗುವ ಭಕ್ಷ್ಯಗಳೇನು ಇಲ್ಲಿದೆ ಮಾಹಿತಿ

ಭೂದಾನಕ್ಕಾಗಿ ಭೂಮಿಯ ಬದಲು ಶ್ರೀಗಂಧದ ತುಂಡನ್ನು ಕೊಡಲಾಗಿದೆ. ತಮಿಳುನಾಡಿನಿಂದ ತಂದಿರುವ ಬಿಳಿ ಎಳ್ಳನ್ನು ಈ ಪೆಟ್ಟಿಗೆಯಲ್ಲಿ ಇರಿಸಲಾಗಿದೆ. ರಾಜಸ್ಥಾನದಲ್ಲಿ ಸಿದ್ಧಪಡಿಸಲಾದ 24ಕೆ ಶುದ್ಧ ಹಾಗೂ ಹಾಲ್ಮಾರ್ಕ್​ ಇರುವ ಚಿನ್ನದ ನಾಣ್ಯವನ್ನು ಹಿರಣ್ಯದಾನ ರೂಪದಲ್ಲಿ ನೀಡಲಾಗಿದೆ. ಪೆಟ್ಟಿಗೆಯು ಶೇ.99.5ರಷ್ಟು ಶುದ್ಧ ಮತ್ತು ಹಾಲ್​ಮಾರ್ಕ್​ ಬೆಳ್ಳಿಯ ನಾಣ್ಯವನ್ನು ಹೊಂದಿದೆ.

ಪ್ರಧಾನಿ ಮೋದಿಗೆ ಜೋ ಬೈಡನ್ ನೀಡಲಿರುವ ಉಡುಗೊರೆ ಏನು? ಅಮೆರಿಕದ ಪ್ರಥಮ ಪ್ರಜೆ ಭಾರತದ ಪ್ರಧಾನಿಗೆ 20ನೇ ಶತಮಾನದ ಆರಂಭದಲ್ಲಿ ಮಾಡಿದ ಅಮೆರಿಕನ್ ಬುಕ್ ಗ್ಯಾಲರಿ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ.

ಬೈಡನ್ ಅವರು ಮೋದಿಗೆ ಪ್ರಾಚೀನ ಅಮೆರಿಕನ್ ಕ್ಯಾಮರಾ ಹಾಗೂ ಜಾರ್ಜ್​ ಈಸ್ಟ್​ಮನ್ ಅವರ ಮೊದಲ ಪೇಟೆಂಟ್ ಹೊಂದಿದ ಕೊಡ್ಯಾಕ್ ಕ್ಯಾಮರಾದ ಫೆಸಿಮೈನ್ ಪ್ರಿಂಟ್ ಪ್ರತಿಯನ್ನೂ ನೀಡಲಿದ್ದಾರೆ. ಜತೆಗೆ ಹಾರ್ಡ್​ ಕವರ್ ಹೊಂದಿದ ಅಮೆರಿಕದ ವನ್ಯಜೀವಿ ಫೋಟೊಗಳ ಪುಸ್ತಕವನ್ನು ಉಡುಗೊರೆ ನೀಡಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:40 am, Thu, 22 June 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್