Video: ಶಹಬ್ಬಾಸ್ ಹುಡುಗ; ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ನರೇಂದ್ರ ಮೋದಿ

ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜನದ ಪ್ಲೆಕಾರ್ಡ್​ ಹಿಡಿದು, ಮೋದಿ ಅವರೊಂದಿಗೆ ಹಿಂದಿಯಲ್ಲಿ ಮೂರು ವಾಕ್ಯ ಮಾತನಾಡಿದ.

Video: ಶಹಬ್ಬಾಸ್ ಹುಡುಗ; ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಿಂದಿಯಲ್ಲಿ ಮಾತನಾಡಿದ ಬಾಲಕ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 23, 2022 | 12:12 PM

ಟೊಕಿಯೊ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ಭೇಟಿಗಾಗಿ ಜಪಾನ್​ಗೆ ಭೇಟಿ ನೀಡಿದ್ದಾರೆ. ಜಪಾನ್ ರಾಜಧಾನಿ ಟೋಕಿಯೊದಲ್ಲಿ ಮೋದಿ ಅವರಿಗೆ ಭಾರತೀಯರು ಸಂಭ್ರಮದ ಸ್ವಾಗತ ನೀಡಿದರು. ಈ ವೇಳೆ ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜನದ ಪ್ಲೆಕಾರ್ಡ್​ ಹಿಡಿದು, ಮೋದಿ ಅವರೊಂದಿಗೆ ಹಿಂದಿಯಲ್ಲಿ ಮೂರು ವಾಕ್ಯ ಮಾತನಾಡಿದ. ಇದನ್ನು ಕೇಳಿ ಮೋದಿ ಖುಷಿಯಿಂದ ಹಸ್ತಾಕ್ಷರ ಹಾಕಿದ್ದಷ್ಟೇ ಅಲ್ಲದೆ, ಬಾಲಕನ ತಲೆ ನೇವರಿಸಿದರು. ‘ವಾವ್, ನೀನು ಹಿಂದಿ ಎಲ್ಲಿ ಕಲಿತೆ? ನಿನಗೆ ಹಿಂದೆ ಚೆನ್ನಾಗಿ ಬರುತ್ತಾ?’ ಎಂದು ಮೋದಿ ಪ್ರಶ್ನಿಸಿದರು.

‘ನನಗೆ ಹಿಂದಿ ಹೆಚ್ಚು ಮಾತನಾಡೋಕೆ ಬರುವುದಿಲ್ಲ. ಆದರೆ ಅರ್ಥವಾಗುತ್ತೆ. ಮುಂದೆ ಇನ್ನೂ ಚೆನ್ನಾಗಿ ಕಲೀತೀನಿ. ಮೋದಿ ಅವರೊಂದಿಗೆ ಮಾತನಾಡೋಕೆ ಅಂತ ಮೂರು ವಾಕ್ಯ ಅಭ್ಯಾಸ ಮಾಡಿಕೊಂಡು ಬಂದಿದ್ದೆ’ ಎಂದು ಮೋದಿ ಅವರ ಮೆಚ್ಚುಗೆಗೆ ಪಾತ್ರನಾದ ಜಪಾನಿ ಬಾಲಕ ವಿಝುಕಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮುಂಜಾನೆ ಜಪಾನ್​ಗೆ ಬಂದಿಳಿದಿದ್ದು, ಕ್ವಾಡ್ ಸಮಾವೇಶ ಮತ್ತು ಹಲವು ದ್ವಿಪಕ್ಷೀಯ ಮಾತುಕತೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ, ಅಭಿವೃದ್ಧಿ ಸಂಬಂಧ ಹಲವು ಮಹತ್ವದ ಮಾತುಕತೆಗಳು ಈ ಸಂದರ್ಭದಲ್ಲಿ ನಡೆಯಲಿವೆ. ‘ಟೋಕಿಯೊದಲ್ಲಿ ಲ್ಯಾಂಡ್ ಆದೆ. ಕ್ವಾಡ್ ಸಮಾವೇಶವೂ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೇನೆ. ಕ್ವಾಡ್​ ದೇಶಗಳ ನಾಯಕರನ್ನು ಭೇಟಿಯಾಗುವುದರೊಂದಿಗೆ ಜಪಾನ್ ಪ್ರಧಾನಿ, ಉದ್ಯಮಿಗಳು ಮತ್ತು ಜಪಾನ್​ನಲ್ಲಿ ನೆಲೆಸಿರುವ ಭಾರತೀಯರೊಂದಿಗೂ ಮಾತನಾಡುತ್ತೇನೆ’ ಎಂದು ಮೋದಿ (PM Narendra Modi) ಜಪಾನೀಸ್ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟ್ವೀಟ್ ಮಾಡಿದ್ದಾರೆ.

‘ಕ್ವಾಡ್​ ನಾಯಕರೊಂದಿಗೆ ಎರಡನೇ ಬಾರಿಗೆ ಮುಖತಃ ಮಾತುಕತೆ ನಡೆಯುತ್ತಿದೆ. ಕ್ವಾಡ್​ ಉಪಕ್ರಮಗಳ ಪ್ರಗತಿ ಬಗ್ಗೆ ವಿವಿಧ ದೇಶಗಳು ಸಾಧಿಸಿರುವ ಪ್ರಗತಿ ಕುರಿತು ಈ ವೇಳೆ ಪರಿಶೀಲನೆ ನಡೆಯಲಿದೆ’ ಎಂದು ಮೋದಿ ಅವರು ತಮ್ಮ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದರು. ‘ಇಂಡೋ-ಪೆಸಿಫಿಕ್ ವಲಯದ ಬೆಳವಣಿಗೆಗಳ ಜೊತೆಗೆ ಪರಸ್ಪರ ಆಸಕ್ತಿಯಿರುವ ಜಾಗತಿಕ ವಿದ್ಯಮಾನಗಳ ಬಗ್ಗೆಯೂ ವಿವಿಧ ದೇಶಗಳ ನಾಯಕರು ಈ ಸಂದರ್ಭದಲ್ಲಿ ವಿಚಾರ ವಿನಿಮಯ ನಡೆಸಲಿದ್ದಾರೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿಯ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Published On - 8:56 am, Mon, 23 May 22

ತಾಜಾ ಸುದ್ದಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ