AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi UAE Visit: ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಪಿಎಂ ನರೇಂದ್ರ ಮೋದಿ

ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ, ಆರತಿ ಮಾಡಿದ್ದಾರೆ.ಯುಎಇ ಪ್ರವಾಸದಲ್ಲಿರುವ ಮೋದಿ ಬುಧವಾರ ಸಂಜೆ BAPS ಮಂದಿರಕ್ಕೆ ತಲುಪಿದ್ದು ಅಲ್ಲಿ ಅವರನ್ನು ಈಶ್ವರಚರಣದಾಸ್ ಸ್ವಾಮಿಯವರು ಸ್ವಾಗತಿಸಿದ್ದಾರೆ.

PM Modi UAE Visit: ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಪಿಎಂ ನರೇಂದ್ರ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Feb 14, 2024 | 8:09 PM

Share

ಅಬುಧಾಬಿ ಫೆಬ್ರುವರಿ 14: ಪ್ರಧಾನಮಂತ್ರಿ ನರೇಂದ್ರ ಮೋದಿಯವರು(Narendra Modi) ಬುಧವಾರ ಅಬುಧಾಬಿಯ (Abudabhi) ಮೊದಲ ಹಿಂದೂ ದೇವಾಲಯವನ್ನು ಭಕ್ತಿ ಪಠಣಗಳ ನಡುವೆ ಮತ್ತು ಸ್ವಾಮಿನಾರಾಯಣ ಪಂಥದ ಆಧ್ಯಾತ್ಮಿಕ ನಾಯಕರ ಸಮ್ಮುಖದಲ್ಲಿ ಉದ್ಘಾಟಿಸಿದರು. ತಿಳಿ ಗುಲಾಬಿ ಬಣ್ಣದ ರೇಷ್ಮೆ ಧೋತಿ ಮತ್ತು ಕುರ್ತಾ, ತೋಳಿಲ್ಲದ ಜಾಕೆಟ್‌ ಧರಿಸಿದ್ದ ಪ್ರಧಾನಿ, ದೇವಾಲಯವನ್ನು ಜನರಿಗೆ ಅರ್ಪಿಸುವ ಸಮಾರಂಭದ ಆಚರಣೆಗಳಲ್ಲಿ ಭಾಗವಹಿಸಿದರು. ಬೋಚಸನ್‌ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ನಿರ್ಮಿಸಿದ ಸ್ವಾಮಿನಾರಾಯಣ ಪಂಥದ 1,200 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶಿಸಲಾದ “ಗ್ಲೋಬಲ್ ಆರತಿ” ಯಲ್ಲಿಯೂ ಪ್ರಧಾನಿ ಭಾಗವಹಿಸಿದರು.

ಇದಕ್ಕೂ ಮೊದಲು, ಇಲ್ಲಿ ಕಲ್ಲಿನಿಂದ ನಿರ್ಮಿಸಿದ ಮೊದಲ ಹಿಂದೂ ದೇವಾಲಯದ ನಿರ್ಮಾಣಕ್ಕೆ ಕೊಡುಗೆ ನೀಡಿದ ವಿವಿಧ ಧರ್ಮಗಳ ಜನರನ್ನು ಮೋದಿ ಭೇಟಿ ಮಾಡಿದರು. ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮ್ರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ದೇವಾಲಯವನ್ನು ಉದ್ಘಾಟಿಸುವ ಮೊದಲು ಪ್ರಧಾನಿ ಅವರು ದೇವಾಲಯದಲ್ಲಿ ವರ್ಚುವಲ್ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರನ್ನು ಅರ್ಪಿಸಿದರು.

ದೇವಾಲಯದ ಅಧಿಕಾರಿಗಳ ಪ್ರಕಾರ, ಮಂದಿರದ ವಿನ್ಯಾಸ ಮತ್ತು ನಿರ್ಮಾಣದ ಕಲೆಯನ್ನು ವಿವರಿಸುವ ಹಿಂದೂ ಧರ್ಮಗ್ರಂಥಗಳಾದ ಶಿಲ್ಪ ಮತ್ತು ಸ್ಥಾಪತ್ಯ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾದ ಪ್ರಾಚೀನ ಶೈಲಿಯ ನಿರ್ಮಾಣ ಮತ್ತು ರಚನೆಯ ಪ್ರಕಾರ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ:  ಜಗತ್ತಿಗೆ ಸ್ವಚ್ಛ, ಪಾರದರ್ಶಕ, ತಂತ್ರಜ್ಞಾನದ ಅರಿವಿರುವ ಸರ್ಕಾರಗಳ ಅಗತ್ಯವಿದೆ: ಯುಎಇಯಲ್ಲಿ ಪ್ರಧಾನಿ ಮೋದಿ

“ವಾಸ್ತುಶಾಸ್ತ್ರದ ವಿಧಾನಗಳನ್ನು ಇಲ್ಲಿ ವೈಜ್ಞಾನಿಕ ತಂತ್ರಗಳೊಂದಿಗೆ ಸಂಯೋಜಿಸಲಾಗಿದೆ. ತಾಪಮಾನ, ಒತ್ತಡ ಮತ್ತು ಚಲನೆಯನ್ನು (ಭೂಕಂಪನ ಚಟುವಟಿಕೆ) ಅಳೆಯಲು ದೇವಾಲಯದ ಪ್ರತಿ ಹಂತದಲ್ಲಿ 300 ಕ್ಕೂ ಹೆಚ್ಚು ಹೈಟೆಕ್ ಸಂವೇದಕಗಳನ್ನು ಸ್ಥಾಪಿಸಲಾಗಿದೆ. ಸಂವೇದಕಗಳು ಸಂಶೋಧನೆಗಾಗಿ ಲೈವ್ ಡೇಟಾವನ್ನು ಒದಗಿಸುತ್ತವೆ. ಈ ಪ್ರದೇಶದಲ್ಲಿ ಯಾವುದೇ ಭೂಕಂಪ ಸಂಭವಿಸಿದರೆ, ದೇವಾಲಯವು ಅದನ್ನು ಪತ್ತೆ ಮಾಡುತ್ತದೆ ಮತ್ತು ನಾವು ಅಧ್ಯಯನ ಮಾಡಲು ಸಾಧ್ಯವಾಗುತ್ತದೆ ”ಎಂದು BAPS ನ ಅಂತರರಾಷ್ಟ್ರೀಯ ಸಂಬಂಧಗಳ ಮುಖ್ಯಸ್ಥ ಸ್ವಾಮಿ ಬ್ರಹ್ಮವಿಹಾರಿದಾಸ್ ಪಿಟಿಐಗೆ ತಿಳಿಸಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Wed, 14 February 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ