AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Kyrgystan Visit: ಕಿರ್ಗಿಸ್ತಾನದಲ್ಲಿ ಇರಾನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ; ಹಾರ್ಮುಜ್ ಜಲಸಂಧಿಯ ಭದ್ರತೆ ಬಗ್ಗೆ ಚರ್ಚೆ

ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ (SCO Summit) ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಅವರನ್ನು ಭೇಟಿಯಾದರು. ಇರಾನ್ ಯುದ್ಧ ಆರಂಭವಾದ ಬಳಿಕ ಪ್ರಧಾನಿ ಮೋದಿ ಇರಾನಿನ ಅಧ್ಯಕ್ಷರನ್ನು ಭೇಟಿಯಾಗಿದ್ದು ಇದೇ ಮೊದಲು. ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಲವು ನಾವಿಕರ ಮೇಲೂ ದಾಳಿಗಳು ನಡೆದಿರುವ ಹಿನ್ನೆಲೆಯಲ್ಲಿ ಈ ಮಾತುಕತೆ ಬಹಳ ಪ್ರಾಮುಖ್ಯತೆ ಪಡೆದಿದೆ.

PM Modi Kyrgystan Visit: ಕಿರ್ಗಿಸ್ತಾನದಲ್ಲಿ ಇರಾನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ; ಹಾರ್ಮುಜ್ ಜಲಸಂಧಿಯ ಭದ್ರತೆ ಬಗ್ಗೆ ಚರ್ಚೆ
Pm Modi Meets Iran PresidentImage Credit source: x
ಸುಷ್ಮಾ ಚಕ್ರೆ
|

Updated on:Aug 31, 2026 | 3:27 PM

Share

ಬಿಷ್ಕೆಕ್, ಆಗಸ್ಟ್ 31: ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ ಎಸ್‌ಸಿಒ (SCO Summit) ಶೃಂಗಸಭೆಯ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in Kyrgystan) ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು. ಈ ವರ್ಷದ ಫೆಬ್ರವರಿಯಲ್ಲಿ ಇರಾನ್ ಮತ್ತು ಅಮೆರಿಕದ ನಡುವೆ ಯುದ್ಧ ಆರಂಭವಾದ ನಂತರ ಉಭಯ ನಾಯಕರ ನಡುವೆ ನಡೆದ ಮೊದಲ ಮುಖಾಮುಖಿ ಸಭೆ ಇದಾಗಿದೆ. ಈ ಸಭೆಯಲ್ಲಿ ಇಬ್ಬರೂ ನಾಯಕರು ಏನನ್ನು ಚರ್ಚಿಸಿದ್ದಾರೆ ಎಂಬ ಕುರಿತು ಎರಡೂ ದೇಶಗಳ ಕಡೆಯಿಂದ ಅಧಿಕೃತ ಹೇಳಿಕೆ ಇನ್ನೂ ಬಿಡುಗಡೆಯಾಗಿಲ್ಲ. ಆದರೂ ಮೂಲಗಳ ಪ್ರಕಾರ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸಂಚಾರದ ಬಗ್ಗೆ ಮತ್ತು ನಾವಿಕರ ಮೇಲಿನ ದಾಳಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಫೆಬ್ರವರಿಯಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಇರಾನ್ ನಾಯಕರೊಂದಿಗೆ ಸತತ ಸಂಪರ್ಕದಲ್ಲಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು, ಹಾರ್ಮುಜ್ ಜಲಸಂಧಿಯ ಭದ್ರತೆಯನ್ನು ಹೆಚ್ಚಿಸುವುದು ಸೇರಿದಂತೆ ಹಲವು ವಿಚಾರಗಳನ್ನು ನೋಡಿಕೊಳ್ಳುವುದು ಹಾಗೂ ಎಲ್ಲಾ ಸಂಘರ್ಷಗಳನ್ನು ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸತತವಾಗಿ ಪ್ರತಿಪಾದಿಸುತ್ತಾ ಬಂದಿದ್ದಾರೆ.

ಇದನ್ನೂ ಓದಿ: PM Modi Uzbekistan Visit: ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ

ಜೂನ್ 30ರಂದು ಇರಾನ್ ಅಧ್ಯಕ್ಷರೊಂದಿಗೆ ನಡೆಸಿದ್ದ ಕೊನೆಯ ದೂರವಾಣಿ ಕರೆಯಲ್ಲಿ, ಪ್ರಧಾನಿ ಮೋದಿಯವರು ಆ ಭಾಗದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಕಳವಳ ವ್ಯಕ್ತಪಡಿಸಿದ್ದರು ಮತ್ತು ಶಾಂತಿ ಹಾಗೂ ಸ್ಥಿರತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದರು. ಜೊತೆಗೆ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಭದ್ರತೆ ಮತ್ತು ಸುರಕ್ಷತೆಗೆ ಆದ್ಯತೆ ನೀಡಿದ್ದಕ್ಕಾಗಿ ಪೆಜೆಶ್ಕಿಯನ್ ಅವರಿಗೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: ಇರಾನ್​ನೊಂದಿಗೆ ವ್ಯಾಪಾರ: 4 ಭಾರತೀಯ ಕಂಪನಿಗಳು ಹಾಗು 3 ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ

ವಿಶ್ವದ ಒಟ್ಟು ಕಚ್ಚಾ ತೈಲ ಸಾಗಣೆಯ ಗಣನೀಯ ಭಾಗವು ಹಾದುಹೋಗುವ ಹೊರ್ಮುಜ್ ಜಲಸಂಧಿಯಲ್ಲಿ ಕಡಲ ಭದ್ರತೆ ಮತ್ತು ನೌಕಾಯಾನದ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ ಎನ್ನಲಾಗಿದೆ. ಹಾಗೇ, ಮಧ್ಯ ಏಷ್ಯಾ ದೇಶಗಳಿಗೆ ವ್ಯಾಪಾರ ಮಾರ್ಗವನ್ನು ಸುಗಮಗೊಳಿಸುವ ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (INSTC) ಯೋಜನೆಗೆ ಮತ್ತಷ್ಟು ವೇಗ ನೀಡುವ ಬಗ್ಗೆಯೂ ಚರ್ಚಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:11 pm, Mon, 31 August 26

Follow Us
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ