ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ; ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಿದ ಪಿಎಂ

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಮಂಗಳವಾರ) ಅಧಿಕೃತವಾಗಿ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್-ಕಾಲ್ಡ್ ಗೌರವವನ್ನು ಸ್ವೀಕರಿಸಿದ್ದಾರೆ. ಈ ಪ್ರಶಸ್ತಿಯು ಭಾರತ-ರಷ್ಯಾ ಪಾಲುದಾರಿಕೆಯ ಕಾರ್ಯತಂತ್ರವನ್ನು ಮುನ್ನಡೆಸುವಲ್ಲಿ ಪ್ರಧಾನಿ ಮೋದಿಯವರ ಮಹತ್ವದ ಪಾತ್ರವನ್ನು ಗುರುತಿಸುತ್ತದೆ.

Follow us
|

Updated on: Jul 09, 2024 | 7:36 PM

ಮಾಸ್ಕೋ: ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇಂದು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ 2019ರಲ್ಲಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್-ಕಾಲ್ಡ್ ಅನ್ನು ಅಧಿಕೃತವಾಗಿ ನೀಡಲಾಯಿತು. ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ರಷ್ಯಾ ಮತ್ತು ಭಾರತದ ನಡುವಿನ ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸೌಹಾರ್ದ ಸಂಬಂಧಗಳ ಅಭಿವೃದ್ಧಿಗೆ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ಪ್ರಧಾನ ಮಂತ್ರಿ ಮೋದಿಗೆ ಈ ಗೌರವವನ್ನು ನೀಡಲಾಯಿತು. ಅಭಿನಂದನಾ ಸಮಾರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ಪ್ರಶಸ್ತಿಯನ್ನು ತಮಗೆ ನೀಡಿದ್ದಕ್ಕಾಗಿ ವ್ಲಾಡಿಮಿರ್ ಪುಟಿನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಪ್ರಶಸ್ತಿಯನ್ನು ಭಾರತದ ಜನರಿಗೆ ಅರ್ಪಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವದ ದೊಡ್ಡ ಕ್ರಿಮಿನಲ್​ನನ್ನು ಅಪ್ಪಿಕೊಂಡಿದ್ದು ನಿರಾಸೆ ತಂದಿದೆ; ಮೋದಿ ರಷ್ಯಾ ಭೇಟಿಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಟೀಕೆ

ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿಯನ್ನು 1698ರಲ್ಲಿ ತ್ಸಾರ್ ಪೀಟರ್ ದಿ ಗ್ರೇಟ್ ಸ್ಥಾಪಿಸಿದರು. ಸೇಂಟ್ ಆಂಡ್ರ್ಯೂ ಅವರ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. ಇವರು ಯೇಸುವಿನ ಮೊದಲ ಧರ್ಮ ಪ್ರಚಾರಕ ಮತ್ತು ರಷ್ಯಾದ ಸಂತ. ಇದನ್ನು ಅತ್ಯಂತ ಮಹೋನ್ನತ ನಾಗರಿಕ ಅಥವಾ ಮಿಲಿಟರಿ ಅರ್ಹತೆಗಾಗಿ ಮಾತ್ರ ನೀಡಲಾಗುತ್ತದೆ.

ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇಂದು ಅಧಿಕೃತವಾಗಿ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್’ ಪ್ರಶಸ್ತಿ ಪ್ರದಾನ ಮಾಡಿದರು.

ಇದನ್ನೂ ಓದಿ: ರಷ್ಯಾದ ಇಂಧನ ಸಹಕಾರವು ಭಾರತದಲ್ಲಿ ಹಣದುಬ್ಬರವನ್ನು ನಿಯಂತ್ರಿಸಲು ಸಹಾಯ ಮಾಡಿತು; ಪುಟಿನ್​ಗೆ ಪ್ರಧಾನಿ ಮೋದಿ ಶ್ಲಾಘನೆ

ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ಮಧ್ಯೆ ಪಾಶ್ಚಿಮಾತ್ಯ ದೇಶಗಳೊಂದಿಗೆ ದೀರ್ಘಾವಧಿಯ ಸಂಬಂಧವನ್ನು ಕಾಪಾಡಿಕೊಳ್ಳುವ ಸಲುವಾಗಿ ಎರಡು ದಿನಗಳ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಮಾಸ್ಕೋಗೆ ತೆರಳಿದ್ದಾರೆ. ಕಳೆದ ತಿಂಗಳು ಪ್ರಧಾನಿಯಾಗಿ ಅಧಿಕಾರಕ್ಕೆ ಮರಳಿದ ನಂತರ ನರೇಂದ್ರ ಮೋದಿಯವರ ಮೊದಲ ಭೇಟಿ ಇದಾಗಿದೆ. ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಇದು ರಷ್ಯಾಕ್ಕೆ ಅವರ ಮೊದಲನೆಯ ಭೇಟಿಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ