AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿಗೆ ‘ಸಾಂಪ್ರದಾಯಿಕ ಸ್ವಾಗತ’

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾಕ್ಕೆ ಆಗಮಿಸಿದರು.ಅಲ್ಲಿ ಅವರು  ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿಗೆ 'ಸಾಂಪ್ರದಾಯಿಕ ಸ್ವಾಗತ'
ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 23, 2023 | 3:24 PM

Share

ಮುಖ್ಯಾಂಶಗಳು

  • ಭಾರತದ ಆಸ್ಟ್ರೇಲಿಯನ್ ಹೈ ಕಮಿಷನರ್ ಬೇರಿ ಓ'ಫಾರೆಲ್ ಮತ್ತು ಇತರ ಅಧಿಕಾರಿಗಳು ಮೋದಿಯವರನ್ನು ಬರ ಮಾಡಿಕೊಂಡರು
  • ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆ ಕೂಗಿ ಭಾರತೀಯ ವಲಸೆಗಾರರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು
  • ಪ್ರಧಾನಿ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಕ್ಯುಡೋಸ್ ಬ್ಯಾಂಕ್ ಅರೇನಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಪುವಾ ನ್ಯೂಗಿನಿಯಾ ಪ್ರವಾಸವನ್ನು ಮುಗಿಸಿದ ನಂತರ ಮೂರು ರಾಷ್ಟ್ರಗಳ ಭೇಟಿಯ ಮೂರನೇ ಮತ್ತು ಅಂತಿಮ ಹಂತದ ಭಾಗವಾಗಿ ಆಸ್ಟ್ರೇಲಿಯಾಕ್ಕೆ ಆಗಮಿಸಿದರು. ಸಿಡ್ನಿಗೆ(Sydney) ಆಗಮಿಸಿದ ಅವರನ್ನು ಭಾರತದ ಆಸ್ಟ್ರೇಲಿಯನ್ ಹೈ ಕಮಿಷನರ್ ಬೇರಿ ಓ’ಫಾರೆಲ್ ಮತ್ತು ಇತರ ಅಧಿಕಾರಿಗಳು ಬರಮಾಡಿಕೊಂಡರು. ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆ ಕೂಗಿ ಭಾರತೀಯ ವಲಸೆಗಾರರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ತಮ್ಮ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್( Anthony Albanese) ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಇಂದು ನಂತರ, ಪ್ರಧಾನ ಮಂತ್ರಿಗಳು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕ್ಯುಡೋಸ್ ಬ್ಯಾಂಕ್ ಅರೆನಾಗೆ ಆಗಮಿಸಿದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾಕ್ಕೆ ಆಗಮಿಸಿದರು.ಅಲ್ಲಿ ಅವರು  ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ.ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಅವರೊಂದಿಗೆ ಇದ್ದಾರೆ. ಪ್ರಧಾನಿ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಕ್ಯುಡೋಸ್ ಬ್ಯಾಂಕ್ ಅರೇನಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಪ್ರಧಾನಿ ಮೋದಿಯವರ ಆಗಮನಕ್ಕಾಗಿ ನಾವೆಲ್ಲರೂ ಉತ್ಸುಕರಾಗಿದ್ದೇವೆ. ಸದ್ಯಕ್ಕೆ ಅದು ನಮಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ” ಎಂದು ಶಶಿಪ್ರಭಾ ಎಂಬವರು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Tue, 23 May 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!