ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿಗೆ ‘ಸಾಂಪ್ರದಾಯಿಕ ಸ್ವಾಗತ’

|

Updated on: May 23, 2023 | 3:24 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾಕ್ಕೆ ಆಗಮಿಸಿದರು.ಅಲ್ಲಿ ಅವರು  ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿ
Follow us on

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಪುವಾ ನ್ಯೂಗಿನಿಯಾ ಪ್ರವಾಸವನ್ನು ಮುಗಿಸಿದ ನಂತರ ಮೂರು ರಾಷ್ಟ್ರಗಳ ಭೇಟಿಯ ಮೂರನೇ ಮತ್ತು ಅಂತಿಮ ಹಂತದ ಭಾಗವಾಗಿ ಆಸ್ಟ್ರೇಲಿಯಾಕ್ಕೆ ಆಗಮಿಸಿದರು. ಸಿಡ್ನಿಗೆ(Sydney) ಆಗಮಿಸಿದ ಅವರನ್ನು ಭಾರತದ ಆಸ್ಟ್ರೇಲಿಯನ್ ಹೈ ಕಮಿಷನರ್ ಬೇರಿ ಓ’ಫಾರೆಲ್ ಮತ್ತು ಇತರ ಅಧಿಕಾರಿಗಳು ಬರಮಾಡಿಕೊಂಡರು. ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆ ಕೂಗಿ ಭಾರತೀಯ ವಲಸೆಗಾರರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ತಮ್ಮ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್( Anthony Albanese) ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಇಂದು ನಂತರ, ಪ್ರಧಾನ ಮಂತ್ರಿಗಳು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕ್ಯುಡೋಸ್ ಬ್ಯಾಂಕ್ ಅರೆನಾಗೆ ಆಗಮಿಸಿದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾಕ್ಕೆ ಆಗಮಿಸಿದರು.ಅಲ್ಲಿ ಅವರು  ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ.ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಅವರೊಂದಿಗೆ ಇದ್ದಾರೆ.
ಪ್ರಧಾನಿ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಕ್ಯುಡೋಸ್ ಬ್ಯಾಂಕ್ ಅರೇನಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.


ಪ್ರಧಾನಿ ಮೋದಿಯವರ ಆಗಮನಕ್ಕಾಗಿ ನಾವೆಲ್ಲರೂ ಉತ್ಸುಕರಾಗಿದ್ದೇವೆ. ಸದ್ಯಕ್ಕೆ ಅದು ನಮಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ” ಎಂದು ಶಶಿಪ್ರಭಾ ಎಂಬವರು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Tue, 23 May 23