PM Modi Speech: ಭಾರತ, ಅಮೆರಿಕ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳು; ಅಮೆರಿಕ ಸಂಸತ್ ಜಂಟಿ ಅಧಿವೇಶನದಲ್ಲಿ ಮೋದಿ ಮಾತು

PM Narendra Modi Speech Joint Session US Congress; ಅಮೆರಿಕ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಎರಡನೇ ಬಾರಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಎರಡು ಮಹಾನ್ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯವನ್ನು ಆಚರಿಸಲು ನೀವು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಬಹಳ ಸಂತೋಷವಾಗಿದೆ ಎಂದರು.

PM Modi Speech: ಭಾರತ, ಅಮೆರಿಕ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳು; ಅಮೆರಿಕ ಸಂಸತ್ ಜಂಟಿ ಅಧಿವೇಶನದಲ್ಲಿ ಮೋದಿ ಮಾತು
ಅಮೆರಿಕ ಸಂಸತ್​​ನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರುImage Credit source: ANI
Follow us
Ganapathi Sharma
|

Updated on:Jun 23, 2023 | 2:29 AM

ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳು. ಅಮೆರಿಕದ (America) ಕನಸುಗಳಲ್ಲಿ ಭಾರತೀಯರ (India) ಕೊಡುಗೆಯೂ ಇದೆ. ಪ್ರಜಾಪ್ರಭುತ್ವಕ್ಕೆ ನಮ್ಮ ಸಹಭಾಗಿತ್ವ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಅಮೆರಿಕ ಸಂಸತ್ತಿನ ಜಂಟಿ ಅಧಿವೇಶನ (Joint Session US Congress) ಉದ್ದೇಶಿಸಿ ಎರಡನೇ ಬಾರಿಗೆ ಮಾತನಾಡಿದ ಅವರು, ನಾನು ತಾಳ್ಮೆ, ಮನವೊಲಿಕೆ ಮತ್ತು ನೀತಿಯ ಬಗ್ಗೆ ಹೇಳಬಲ್ಲೆ. ವಿಚಾರಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ಎರಡು ಮಹಾನ್ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯವನ್ನು ಆಚರಿಸಲು ನೀವು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಬಹಳ ಸಂತೋಷವಾಗಿದೆ ಎಂದರು.

ಸರಿಯಾಗಿ 7 ಜೂನ್​ಗಳ ಹಿಂದೆ (ಏಳು ವರ್ಷಗಳ ಹಿಂದೆ) ಹ್ಯಾಮಿಲ್ಟನ್ ಎಲ್ಲ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ಸಂದರ್ಭದಲ್ಲಿ ನಾನು ಇಲ್ಲಿ ಮಾತನಾಡಿದ್ದೆ. ಇತಿಹಾಸದ ಹಿಂಜರಿಕೆಗಳು ನಮ್ಮ ಹಿಂದೆ ಇವೆ ಎಂದು ನಾನು ಹೇಳಿದ್ದೆ. ಈಗ, ನಮ್ಮ ಯುಗವು ಒಂದು ಕವಲುದಾರಿಯಲ್ಲಿರುವಾಗ, ಈ ಶತಮಾನದ ನಮ್ಮ ಕರೆಯ ಬಗ್ಗೆ ಮಾತನಾಡಲು ನಾನು ಇಲ್ಲಿದ್ದೇನೆ ಎಂದು ಮೋದಿ ಹೇಳಿದರು.

‘ಭಾರತ – ಅಮೆರಿಕ ಬಾಂಧವ್ಯ ಎಐಯಂತೆ!’

ಕಳೆದ ಕೆಲವು ವರ್ಷಗಳಲ್ಲಿ, ಎಐ ಅಥವಾ ಕೃತಕ ಬುದ್ಧಿಮತ್ತೆಯಲ್ಲಿ ಹಲವು ಪ್ರಗತಿಗಳಾಗಿವೆ. ಅದೇ ಸಮಯದಲ್ಲಿ, ಮತ್ತೊಂದು ಎಐ, ಅಂದರೆ ಅಮೇರಿಕಾ ಮತ್ತು ಇಂಡಿಯಾ ಮಧ್ಯೆ ಇನ್ನೂ ಹೆಚ್ಚು ಮಹತ್ವದ ಬೆಳವಣಿಗೆ ಕಂಡುಬಂದಿದೆ ಎಂದು ಮೋದಿ ಹೇಳಿದರು. ಅಷ್ಟರಲ್ಲಿ ಅಮೆರಿಕ ಕಾಂಗ್ರೆಸ್​​ನ ಎಲ್ಲ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದು ಗಮನ ಸೆಳೆಯಿತು.

ಅಮೆರಿಕದ ಸಂಸತ್ತಿನಲ್ಲಿ ಎರಡು ಬಾರಿ ಭಾಷಣ ಮಾಡಿರುವುದು ನನಗೆ ಹೆಮ್ಮೆಯ ಸಂಗತಿ. ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ. ಈ ಗೌರವಕ್ಕಾಗಿ ಭಾರತೀಯರ ಪರವಾಗಿ ನಾನು ಕೃತಜ್ಞತೆ ಸಲ್ಲಿಸುತ್ತೇನೆ.

ಇದಕ್ಕೂ ಮುನ್ನ ಅಮೆರಿಕ ಸಂಸತ್ತಿಗೆ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಸದರು ಚಪ್ಪಾಳೆ ತಟ್ಟಿ ಪ್ರಧಾನಿಯವರನ್ನು ಸ್ವಾಗತಿಸಿದರು.

‘ಭಾರತದಲ್ಲಿ ಬೇರು ಹೊಂದಿರುವವರು ಇಲ್ಲಿದ್ದಾರೆ’

ಸಮಾನ ದೃಷ್ಟಿಕೋನದ ಜನರಿಂದ ಪ್ರೇರಿತವಾಗಿ ಅಮೆರಿಕದ ಅಡಿಪಾಯ ರೂಪುಗೊಂಡಿದೆ. ಭಾರತದಲ್ಲಿ ಬೇರುಗಳನ್ನು ಹೊಂದಿರುವ ಲಕ್ಷಾಂತರ ಜನರು ಇಲ್ಲಿದ್ದಾರೆ. ಅವರಲ್ಲಿ ಕೆಲವರು ಈ ಚೇಂಬರ್‌ನಲ್ಲಿ ಹೆಮ್ಮೆಯಿಂದ ಕುಳಿತುಕೊಳ್ಳುತ್ತಿದ್ದಾರೆ ಮತ್ತು ಒಬ್ಬರು ನನ್ನ ಹಿಂದೆ ಇದ್ದಾರೆ ಎಂದು ಕಮಲಾ ಹ್ಯಾರಿಸ್ ಅವರನ್ನು ಉದ್ದೇಶಿಸಿ ಮೋದಿ ಹೇಳಿದರು.

ಪ್ರಜಾಪ್ರಭುತ್ವವು ನಮ್ಮ ಪವಿತ್ರ ಮತ್ತು ಹಂಚಿಕೆಯ ಮೌಲ್ಯಗಳಲ್ಲಿ ಒಂದಾಗಿದೆ. ಇತಿಹಾಸದುದ್ದಕ್ಕೂ, ಪ್ರಜಾಪ್ರಭುತ್ವವು ಸಮಾನತೆ ಮತ್ತು ಘನತೆಯನ್ನು ಬೆಂಬಲಿಸುವ ಮನೋಭಾವವಾಗಿದೆ ಎಂಬುದು ಸ್ಪಷ್ಟ. ಚರ್ಚೆ ಮತ್ತು ಪ್ರವಚನವನ್ನು ಸ್ವಾಗತಿಸುವ ವಿಚಾರವೇ ಪ್ರಜಾಪ್ರಭುತ್ವ. ಇದು ಚಿಂತನೆ ಮತ್ತು ಅಭಿವ್ಯಕ್ತಿಗೆ ರೆಕ್ಕೆಗಳನ್ನು ನೀಡುವ ಸಂಸ್ಕೃತಿಯಾಗಿದೆ. ಭಾರತವು ಅನಾದಿ ಕಾಲದಿಂದಲೂ ಇಂತಹ ಮೌಲ್ಯಗಳನ್ನು ಹೊಂದಿದ್ದು ಧನ್ಯವಾಗಿದೆ. ಭಾರತ ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಪ್ರಧಾನಿ ಬಣ್ಣಿಸಿದರು.

ಇದನ್ನೂ ಓದಿ: ಅಮೆರಿಕ ವೀಸಾಕ್ಕಾಗಿ ಇನ್ನು ಚೆನ್ನೈಗೆ ಹೋಗಬೇಕಿಲ್ಲ; ಬೆಂಗಳೂರಲ್ಲೇ ಆರಂಭವಾಗಲಿದೆ ಕಾನ್ಸುಲೇಟ್ ಕಚೇರಿ

ಕಳೆದ ವರ್ಷ ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಿತು. ಪ್ರತಿ ಮೈಲಿಗಲ್ಲು ಮುಖ್ಯವೇ. ಆದರೆ ಇದು ವಿಶೇಷವಾಗಿತ್ತು. ಸಾವಿರಾರು ವರ್ಷಗಳ ವಿದೇಶಿ ಆಳ್ವಿಕೆಯ ನಂತರ ನಾವು ನಮ್ಮ 75 ವರ್ಷಗಳ ಸ್ವಾತಂತ್ರ್ಯದ ಗಮನಾರ್ಹ ಪ್ರಯಾಣವನ್ನು ಒಂದಲ್ಲ ಒಂದು ರೂಪದಲ್ಲಿ ಆಚರಿಸಿದ್ದೇವೆ. ಇದು ಕೇವಲ ಪ್ರಜಾಪ್ರಭುತ್ವದ ಆಚರಣೆಯಾಗದೆ ವೈವಿಧ್ಯತೆಯ ಆಚರಣೆಯೂ ಆಗಿತ್ತು ಎಂದು ಅವರು ಹೇಳಿದರು.

ಭಾರತವು ಪ್ರಪಂಚದ ಎಲ್ಲಾ ನಂಬಿಕೆಗಳಿಗೆ ನೆಲೆಯಾಗಿದೆ ಮತ್ತು ನಾವು ಎಲ್ಲವನ್ನೂ ಆಚರಿಸುತ್ತೇವೆ. ಭಾರತದಲ್ಲಿ, ವೈವಿಧ್ಯತೆಯು ನೈಸರ್ಗಿಕ ಜೀವನ ವಿಧಾನವಾಗಿದೆ. ಇಂದು ಜಗತ್ತು ಭಾರತದ ಬಗ್ಗೆ ಹೆಚ್ಚೆಚ್ಚು ತಿಳಿಯಲು ಬಯಸುತ್ತದೆ ಎಂದು ಮೋದಿ ಹೇಳಿದರು.

ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ; ಮೋದಿ

ನಾನು ಪ್ರಧಾನಿಯಾಗಿ ಮೊದಲ ಬಾರಿಗೆ ಅಮೇರಿಕಾಕ್ಕೆ ಭೇಟಿ ನೀಡಿದಾಗ, ಭಾರತವು ವಿಶ್ವದ 10 ನೇ ಅತಿದೊಡ್ಡ ಆರ್ಥಿಕತೆಯಾಗಿತ್ತು. ಇಂದು ಭಾರತವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಭಾರತವು ಶೀಘ್ರದಲ್ಲೇ 3 ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ನಾವು ದೊಡ್ಡದಾಗಿ ಬೆಳೆಯುವುದು ಮಾತ್ರವಲ್ಲದೆ ವೇಗವಾಗಿ ಬೆಳೆಯುತ್ತಿದ್ದೇವೆ. ಭಾರತ ಬೆಳೆದರೆ ಇಡೀ ಜಗತ್ತು ಬೆಳೆಯುತ್ತದೆ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ, ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ; ಪಾಕ್​ಗೆ ಪ್ರಧಾನಿ ಮೋದಿ ಪರೋಕ್ಷ ಚಾಟಿ

ನಮ್ಮಲ್ಲಿ 2,500 ರಾಜಕೀಯ ಪಕ್ಷಗಳಿವೆ. ಸುಮಾರು 20 ವಿವಿಧ ಪಕ್ಷಗಳು ಭಾರತದ ವಿವಿಧ ರಾಜ್ಯಗಳನ್ನು ಆಳುತ್ತಿವೆ. ನಮ್ಮಲ್ಲಿ 22 ಅಧಿಕೃತ ಭಾಷೆಗಳು ಮತ್ತು ಸಾವಿರಾರು ಉಪಭಾಷೆಗಳಿವೆ, ಆದರೂ ನಾವು ಒಂದೇ ಧ್ವನಿಯಲ್ಲಿ ಮಾತನಾಡುತ್ತೇವೆ ಎಂದು ಮೋದಿ ಹೆಮ್ಮೆಯಿಂದ ಹೇಳಿದರು. ಇದೇ ವೇಳೆ ‘ಮೋದಿ ಮೋದಿ’ ಎಂಬ ಘೋಷಣೆ ಸದಸ್ಯರಿಂದ ಕೇಳಿಬಂತು.

ಮಹಾತ್ಮ ಗಾಂಧಿ ಮತ್ತು ಮಾರ್ಟಿನ್ ಲೂಥರ್ ಕಿಂಗ್ ಅವರನ್ನು ಭಾಷಣದಲ್ಲಿ ಪ್ರಸ್ತಾಪಿಸಿದ ಮೋದಿ, ಇವರಿಬ್ಬರೂ ಎರಡೂ ದೇಶಗಳ ಆದರ್ಶಗಳಾಗಿದ್ದಾರೆ. ಎರಡು ಶತಮಾನಗಳ ಕಾಲ ಪರಸ್ಪರರ ಸ್ಪೂರ್ತಿಯಾಗಿದ್ದಾರೆ ಎಂದು ಬಣ್ಣಿಸಿದರು.

‘ಸಬ್​ ಕಾ ಸಾಥ್ ಸಬ್​ ಕಾ ವಿಶ್ವಾಸ್’

ನಮ್ಮ ದೃಷ್ಟಿ ‘ಸಬ್​ ಕಾ ಸಾಥ್, ಸಬ್​​​ ಕಾ ವಿಶ್ವಾಸ್, ಸಬ್​ ಕಾ ಪ್ರಯಾಸ್’. ನಾವು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇವೆ. 150 ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ಆಶ್ರಯ ನೀಡಲು ನಾವು ಸುಮಾರು 14 ಮಿಲಿಯನ್ ಮನೆಗಳನ್ನು ನೀಡಿದ್ದೇವೆ. ಇದು ಆಸ್ಟ್ರೇಲಿಯಾದ ಜನಸಂಖ್ಯೆಯ ಸುಮಾರು 6 ಪಟ್ಟು ಹೆಚ್ಚು ಎಂದು ಮೋದಿ ಹೇಳಿದರು.

ಇಂದು ಆಧುನಿಕ ಭಾರತದಲ್ಲಿ ಮಹಿಳೆಯರು ನಮ್ಮನ್ನು ಉತ್ತಮ ಭವಿಷ್ಯದತ್ತ ಕೊಂಡೊಯ್ಯುತ್ತಿದ್ದಾರೆ. ಭಾರತದ ದೃಷ್ಟಿ ಕೇವಲ ಮಹಿಳೆಯರಿಗೆ ಅನುಕೂಲವಾಗುವ ಅಭಿವೃದ್ಧಿಯಲ್ಲ. ಇದು ಮಹಿಳಾ ನೇತೃತ್ವದ ಅಭಿವೃದ್ಧಿಯಾಗಿದ್ದು, ಅಲ್ಲಿ ಮಹಿಳೆಯರು ಪ್ರಗತಿಯ ಪಯಣವನ್ನು ಮುನ್ನಡೆಸುತ್ತಾರೆ. ಬುಡಕಟ್ಟು ಹಿನ್ನೆಲೆಯಿಂದ ಬಂದ ಒಬ್ಬ ಮಹಿಳೆ ನಮ್ಮ ದೇಶದ ರಾಷ್ಟ್ರಪತಿಯಾಗಿದ್ದಾರೆ ಎಂದು ಮೋದಿ ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:28 am, Fri, 23 June 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ