PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ

ಜೂನ್ 22ರಂದು ಅವರು ಅಮೆರಿಕದ ಸಂಸತ್​ನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Jun 02, 2023 | 8:35 PM

ನವದೆಹಲಿ: ಇತ್ತೀಚೆಗಷ್ಟೇ ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 22ರಂದು ಅವರು ಅಮೆರಿಕದ ಸಂಸತ್​ನ (United States Congress) ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೆನೆಟ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿಮ್ಮನ್ನು (ಮೋದಿ) ಆಹ್ವಾನಿಸುತ್ತಿರುವುದು ನಮಗೆ ಗೌರವದ ವಿಚಾರವಾಗಿದೆ ಎಂದು ಅಮೆರಿಕ್ ಕಾಂಗ್ರೆಸ್​ನ ಪ್ರಕಟಣೆ ತಿಳಿಸಿದೆ. ಈ ಪ್ರಕಟಣೆಗೆ ಅಮೆರಿಕ ಸಂಸತ್​ನ ಸ್ಪೀಕರ್ ಕೆವಿನ್ ಮೆಕ್​ಕಾರ್ತಿ, ಸೆನೆಟ್ ಬಹುಮತದ ನಾಯಕ ಚಕ್ ಶುಮರ್, ಸೆನೆಟ್​ನ ರಿಪಬ್ಲಿಕನ್​ ನಾಯಕ ಮಿಚ್ ಮೆಕ್‌ಕಾನ್ನೆಲ್ ಹಾಗೂ ಡೆಮಾಕ್ರಟಿಕ್ ಹಕೀಮ್ ಜೆಫ್ರೀಸ್ ಅವರ ಸಹಿ ಇದೆ.

ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಮಾತನಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ.

ಜೂನ್​ 22ರಂದು ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಔತಣಕೂಟವನ್ನೂ ಆಯೋಜಿಸಿದ್ದಾರೆ.

ಇದನ್ನೂ ಓದಿ: Narendra Modi: 3 ರಾಷ್ಟ್ರಗಳ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಇತ್ತೀಚೆಗಷ್ಟೇ ಮೋದಿ ಅವರು ಜಪಾನ್‌, ಪಪುವಾ ನ್ಯೂಗಿನಿ ಹಾಗೂ ಆಸ್ಟ್ರೇಲಿಯಾಕ್ಕೆ ಆರು ದಿನಗಳ ಐತಿಹಾಸಿಕ ಪ್ರವಾಸ ಕೈಗೊಂಡಿದ್ದರು. ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದರ ಜತೆಗೆ ಅನೇಕ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಿದ್ದರು. ಪ್ರವಾಸ ಮುಗಿಸಿ ಬಂದ ಬಳಿಕ ಅನುಭವ ಹಂಚಿಕೊಂಡಿದ್ದ ಅವರು, ಈ ಪ್ರವಾಸದಲ್ಲಿ ನನಗೆ ಲಭ್ಯವಾದ ಸಮಯವನ್ನು ನಾನು ದೇಶದ ಬಗ್ಗೆ ಮಾತನಾಡಲು ಹಾಗೂ ದೇಶದ ಒಳಿತಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಂಪೂರ್ಣವಾಗಿ ಬಳಸಿದ್ದೇನೆ. ಈಗ ಸವಾಲುಗಳು ದೊಡ್ಡದಾಗಿವೆ, ಈ ಸವಾಲುಗಳಿಗೆ ಸವಾಲು ಹಾಕುವುದು ನನ್ನ ಸ್ವಭಾವ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ