SCO Summit 2022: ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ 2022ರಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗಿ
Shanghai Cooperation Organisation Summit 2022 : ಪ್ರಧಾನಿ ನರೇಂದ್ರ ಮೋದಿ ಅವರು ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ 2022 ರಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗುರುವಾರ ಮಧ್ಯ ಏಷ್ಯಾದ ಉಜ್ಬೇಕಿಸ್ತಾನ್ನ ಸಮರ್ಕಂಡ್ಗೆ ತಲುಪಿಸಿದ್ದಾರೆ. ಅದರಂತೆ ಇಂದಿನಿಂದ ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ 2022 (SCO Shanghai Cooperation Organisation Summit 2022) ರಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗುರುವಾರ ಮಧ್ಯ ಏಷ್ಯಾದ ಉಜ್ಬೇಕಿಸ್ತಾನ್ನ ಸಮರ್ಕಂಡ್ಗೆ ತಲುಪಿಸಿದ್ದಾರೆ. ಅದರಂತೆ ಶೃಂಗಸಭೆಯ ಎರಡನೇ ದಿನವಾದ ಇಂದು ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
ಇಲ್ಲಿಗೆ ಆಗಮಿಸಿದ ಎಂಟು SCO ಸದಸ್ಯರ ನಾಯಕರು ಮತ್ತು ಏಳು ಆಹ್ವಾನಿತರಲ್ಲಿ ಮೋದಿಯವರು ಒಬ್ಬರು. ಉಜ್ಬೇಕಿಸ್ತಾನ್ ಅಧ್ಯಕ್ಷ ಶೊವ್ಕತ್ ಮಿರ್ಜಿಯೋವ್ ಅವರು ಆಯೋಜಿಸಿದ್ದ ಶೃಂಗಸಭೆಯ ಪೂರ್ವ ಭೋಜನ ಮತ್ತು ಅಧ್ಯಕ್ಷ ಕ್ಸಿ ಹೊರತುಪಡಿಸಿ ಎಲ್ಲಾ ನಾಯಕರು ಕೈಗೊಂಡ ಮರ ನೆಡುವ ಸಮಾರಂಭದಲ್ಲಿ ಭಾಗಿಯಾಗಲು ಮೋದಿಯವರಿಗೆ ಸಾಧ್ಯವಾಗಿಲ್ಲ. ಚೀನಾ ಮತ್ತು ಪಾಕಿಸ್ತಾನದೊಂದಿಗಿನ ಸಂಬಂಧಗಳು ಉದ್ವಿಗ್ನವಾಗಿರುವಾಗ ಯಾವುದೇ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತಡವಾಗಿ ಅಲ್ಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಮೊದಲ ಬಾರಿಗೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಬಹು ನಿರೀಕ್ಷಿತ ಸಭೆ ಸೇರಿದಂತೆ ಇತರ ನಾಯಕರು ಗುರುವಾರ ಹಲವಾರು ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದಾರೆ. ಆದರೆ ಮೋದಿಯವರು ಅನುಪಸ್ಥಿತಿ ಹೊಂದಿದ್ದರು. ಅದಾಗ್ಯೂ ಶುಕ್ರವಾರ, ಮೋದಿ ಅವರು ಪುಟಿನ್, ಮಿರ್ಜಿಯೋವ್ ಮತ್ತು ರೈಸಿ ಅವರೊಂದಿಗೆ ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ.
ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:50 am, Fri, 16 September 22