PM Modi Japan Visit Schedule: ಪ್ರಧಾನಿ ಮೋದಿ ಇಂದು ಜಪಾನ್, ಆಸ್ಟ್ರೇಲಿಯಾ ಮತ್ತು ಪಪುವಾ ನ್ಯೂಗಿನಿಯಾಗೆ ಭೇಟಿ, ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಮೂರು ದೇಶಗಳಿಗೆ ಭೇಟಿ ನೀಡಲಿದ್ದಾರೆ. ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಗೆ ಮೋದಿ ತೆರಳಲಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಈ ಮಾಹಿತಿ ನೀಡಿದ್ದಾರೆ.

PM Modi Japan Visit Schedule: ಪ್ರಧಾನಿ ಮೋದಿ ಇಂದು ಜಪಾನ್, ಆಸ್ಟ್ರೇಲಿಯಾ ಮತ್ತು ಪಪುವಾ ನ್ಯೂಗಿನಿಯಾಗೆ ಭೇಟಿ, ಸಂಪೂರ್ಣ ವೇಳಾಪಟ್ಟಿ ಹೀಗಿದೆ
ನರೇಂದ್ರ ಮೋದಿImage Credit source: The Hindu
Follow us
ನಯನಾ ರಾಜೀವ್
|

Updated on: May 19, 2023 | 10:06 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಮೂರು ದೇಶಗಳಿಗೆ ಭೇಟಿ ನೀಡಲಿದ್ದಾರೆ. ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಗೆ ಮೋದಿ ತೆರಳಲಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಈ ಮಾಹಿತಿ ನೀಡಿದ್ದಾರೆ. ಮೇ 19 ರಿಂದ 21 ರವರೆಗೆ ಜಪಾನ್‌ನಲ್ಲಿ ನಡೆಯಲಿರುವ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಹಿರೋಷಿಮಾದಲ್ಲಿ ನಡೆಯಲಿರುವ ಈ ಸಭೆಗೆ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರು ತಮ್ಮ ಸಹವರ್ತಿಗಳಿಗೆ ಆಹ್ವಾನವನ್ನು ಕಳುಹಿಸಿದ್ದರು. ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ, ಪ್ರಧಾನಿ ಮೋದಿ ಶುಕ್ರವಾರ ಬೆಳಗ್ಗೆ ಜಪಾನ್‌ಗೆ ತೆರಳಲಿದ್ದಾರೆ. ಹಿರೋಷಿಮಾದಲ್ಲಿ ಅವರು ಜಪಾನ್ ಪ್ರಧಾನಿ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಾವು ಜಪಾನ್‌ನಲ್ಲಿ ಕ್ವಾಡ್ ನಾಯಕರ ಸಭೆಯನ್ನು ಯೋಜಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ, ಪ್ರಧಾನಮಂತ್ರಿಯವರು G-7 ಅಧಿವೇಶನಗಳಲ್ಲಿ ಭಾಗವಹಿಸುವ ದೇಶಗಳೊಂದಿಗೆ ಶಾಂತಿ, ಸ್ಥಿರತೆ ಮತ್ತು ಆಹಾರ, ರಸಗೊಬ್ಬರಗಳು ಮತ್ತು ಇಂಧನ ಭದ್ರತೆಯಂತಹ ವಿಷಯಗಳನ್ನು ಚರ್ಚಿಸಲಿದ್ದಾರೆ. ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಯನ್ನೂ ನಡೆಸಲಿದ್ದಾರೆ.

ಪ್ರಧಾನಿ ಮೋದಿ ಮೇ 22 ರಂದು ಪಪುವಾ ನ್ಯೂಗಿನಿಯಾದಲ್ಲಿ ಇರಲಿದ್ದಾರೆ ಇದಾದ ಬಳಿಕ ಪ್ರಧಾನಿ ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್ಬಿಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇಲ್ಲಿ ಅವರು ಮೇ 22 ರಂದು ಪಪುವಾ ನ್ಯೂಗಿನಿಯಾದೊಂದಿಗೆ ಇಂಡೋ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯ ಮೂರನೇ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ. ಇಂಡೋ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯು ಭಾರತ ಮತ್ತು 14 ಪೆಸಿಫಿಕ್ ದ್ವೀಪಗಳ ದೇಶಗಳನ್ನು ಒಳಗೊಂಡಿದೆ.

ಈ ದೇಶಗಳೆಂದರೆ ಫಿಜಿ, ಪಪುವಾ ನ್ಯೂ ಗಿನಿಯಾ, ಟೊಂಗಾ, ಟುವಾಲು, ಕ್ರಿಬಾಟಿ, ಸಮೋವಾ, ವನವಾಟು, ನಿಯು, ಮೈಕ್ರೋನೇಷಿಯಾ, ಮಾರ್ಷಲ್ ದ್ವೀಪಗಳು, ಕುಕ್ ದ್ವೀಪಗಳು, ಪಲಾವ್, ನೌರು ಮತ್ತು ಸೊಲೊಮನ್ ದ್ವೀಪಗಳು. ಪಪುವಾ ನ್ಯೂಗಿನಿಯಾದಲ್ಲಿ ಪ್ರಧಾನಿ ಮೋದಿ ಅವರು ನ್ಯೂಜಿಲೆಂಡ್ ಪ್ರಧಾನಿಯನ್ನು ಭೇಟಿಯಾಗಲಿದ್ದಾರೆ.

ಮತ್ತಷ್ಟು ಓದಿ: PM Modi Foreign Visit: 6 ದಿನ, 3 ದೇಶ, 20ಕ್ಕೂ ಹೆಚ್ಚು ನಾಯಕರ ಭೇಟಿ; ಪ್ರಧಾನಿ ಮೋದಿ ಐತಿಹಾಸಿಕ ವಿದೇಶ ಪ್ರವಾಸದ ವಿವರ ಇಲ್ಲಿದೆ

ಪ್ರಧಾನಿ ಮೋದಿ ಕೂಡ ಇಲ್ಲಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಇವುಗಳಲ್ಲಿ ಗವರ್ನರ್ ಜನರಲ್ ಬಾಬ್ ದಾಡೈ ಮತ್ತು ಪ್ರಧಾನ ಮಂತ್ರಿ ಜೇಮ್ಸ್ ಮರಾಪೆ ಅವರೊಂದಿಗಿನ ಸಭೆಗಳು ಸೇರಿವೆ. ಇದು ಪಪುವಾ ನ್ಯೂಗಿನಿಯಾಗೆ ಭಾರತದ ಪ್ರಧಾನಿಯ ಮೊದಲ ಭೇಟಿಯಾಗಿದೆ.

ಪ್ರಧಾನಿ ಮೋದಿ ಮೇ 22 ರಿಂದ 24 ರವರೆಗೆ ಆಸ್ಟ್ರೇಲಿಯಾದಲ್ಲಿ ಇರಲಿದ್ದಾರೆ ಮೋದಿ

ಇದಾದ ಬಳಿಕ ಪ್ರಧಾನಿ ಮೋದಿ ಅವರು ಮೇ 22ರಿಂದ 24ರವರೆಗೆ ಆಸ್ಟ್ರೇಲಿಯಾದ ಸಿಡ್ನಿಗೆ ತೆರಳಲಿದ್ದಾರೆ. ಅವರು ಮೇ 24 ರಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರು ಇಲ್ಲಿ ಆಸ್ಟ್ರೇಲಿಯಾದ ಸಿಇಒ ಮತ್ತು ವ್ಯಾಪಾರ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ.

ಅವರು ಮೇ 23 ರಂದು ಸಿಡ್ನಿಯಲ್ಲಿ ಭಾರತದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿಯವರೊಂದಿಗೆ ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು