ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನೆಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಬ್ರೂನೆಯ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿದ್ದಾರೆ.

ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
Follow us
|

Updated on: Sep 03, 2024 | 9:31 PM

ಬಂದರ್‌ಸೇರಿ ಬೇಗವಾನ್‌: ಪ್ರಸ್ತುತ 2 ದಿನಗಳ ಬ್ರೂನೆ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಐತಿಹಾಸಿಕ ಸುಲ್ತಾನ್‌ ಒಮರ್‌ ಅಲಿ ಸೈಫುದ್ದೀನ್‌ ಮಸೀದಿಗೆ ಭೇಟಿ ನೀಡಿದ್ದಾರೆ. ಅವರು ಮಸೀದಿಯಲ್ಲಿ ಸ್ವಲ್ಪ ಸಮಯ ಕಾಲ ಕಳೆದಿದ್ದಾರೆ. ಪ್ರಸ್ತುತ ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನಿಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರಕಾರ, ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅಲ್ಲಿಗೆ ಆಗಮಿಸುವ ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿರುವ ಭಾರತದ ಎರಡನೇ ನಾಯಕ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: ಬ್ರೂನೆಯಲ್ಲಿ ಮೊಳಗಿದ ಮೋದಿ, ಮೋದಿ ಘೋಷಣೆ; ಭಾರತೀಯ ವಲಸಿಗರನ್ನು ಭೇಟಿಯಾದ ಪ್ರಧಾನಿ

ಈ ಹಿಂದೆ 2016ರಲ್ಲಿ ಅಂದಿನ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಈ ಐತಿಹಾಸಿಕ ಮಸೀದಿಗೆ ಭೇಟಿ ನೀಡಿದ್ದರು. ಸುಮಾರು 15 ನಿಮಿಷಗಳ ಕಾಲ ಮಸೀದಿಯಲ್ಲಿ ತಂಗಿದ್ದ ಮೋದಿ ಆ ಮಸೀದಿಯೊಳಗೆ ಓಡಾಡಿ, ವಿಡಿಯೋ ವೀಕ್ಷಿಸಿದರು. ನಂತರ ಇಮಾಮ್ ಅವರೊಂದಿಗೆ ಸಂತಸ ಹಂಚಿಕೊಂಡರು.

ಮೋದಿ ಅವರ ಭೇಟಿಯು ಮೇ 1984ರಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ಭಾರತದಿಂದ ಮೊದಲ ಉನ್ನತ ಮಟ್ಟದ ಪ್ರವಾಸವಾಗಿದೆ. ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಯು ಆಗ್ನೇಯ ಏಷ್ಯಾದ ಅತ್ಯಂತ ಸುಂದರವಾದ ಮಸೀದಿಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಈ ಮಸೀದಿಯ ನಿರ್ಮಾಣವು ಸುಮಾರು 5 ವರ್ಷಗಳ ಕಾಲ ನಡೆಯಿತು.

ಪ್ರಧಾನಿ ಮೋದಿ ಅವರು ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಸೆಪ್ಟೆಂಬರ್ 4 ಮತ್ತು 5ರಂದು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?