Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್

’ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯಲ್ ಮ್ಯಾಕ್ರೋನ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 21, 2022 | 8:54 AM

ದೆಹಲಿ: ‘ಇದು ಯುದ್ಧಕ್ಕೆ ಸಮಯವಲ್ಲ’ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ’ ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮಹಾಧಿವೇಶನದಲ್ಲಿ ಹೇಳಿದರು. ‘ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದ ಸಮಯವಲ್ಲ ಎಂದು ಹೇಳಿದ್ದು ಸರಿಯಾಗಿದೆ. ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಲೀ ಅಥವಾ ಪೂರ್ವದ ವಿರುದ್ಧ ಪಶ್ಚಿಮವನ್ನು ಎತ್ತಿಕಟ್ಟುವುದಕ್ಕಾಗಲೀ ಅಲ್ಲ. ಇದು ವಿಶ್ವದ ಎಲ್ಲ ದೇಶಗಳಿಗೆ ಅನ್ವಯಿಸುವ ಸಮಾನ ಸಂಗತಿಯಾಗಿದೆ. ನಾವೆಲ್ಲರೂ ಜೊತೆಗೂಡಿ ಸವಾಲುಗಳನ್ನು ನಿಭಾಯಿಸಬೇಕು’ ಎಂದು ಹೇಳಿದರು.

ಕಳೆದ ವಾರ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation (SCO) Summit) ಶೃಂಗಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಉಕ್ರೇನ್ ಮೇಲಿನ ಆಕ್ರಮಣ ಕೊನೆಗೊಳಿಸಿ, ಶಾಂತಿ ಮತ್ತು ಮಾತುಕತೆಯ ಹಾದಿಗೆ ಮರಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ಮೋದಿ ಅವರು ಸಲಹೆ ಮಾಡಿದ್ದರು. ಇದೇ ಹೇಳಿಕೆಯನ್ನು ಉಲ್ಲೇಖಿಸಿ ಇದೇ ಮ್ಯಾಕ್ರೋನ್ ಸಹ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸಂಘರ್ಷದ ಹಿನ್ನೆಲೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಆಹಾರ ಮತ್ತು ಇಂಧನ ಭದ್ರತೆಯ ಸಮಸ್ಯೆಗಳನ್ನು ರಷ್ಯಾದ ಅಧ್ಯಕ್ಷರು ಪರಿಗಣಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದ್ದ ನರೇಂದ್ರ ಮೋದಿ, ಸಂಘರ್ಷವನ್ನು ಶೀಘ್ರ ನಿಲ್ಲಿಸಬೇಕು ಎಂದು ಕರೆ ನೀಡಿದ್ದರು. ‘ಇದು ಯುದ್ಧದ ಯುಗವಲ್ಲ. ಅದರ ಬಗ್ಗೆ ನಾನು ನಿಮ್ಮೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಮಾತನಾಡಿದ್ದೇನೆ. ಇಂದು ನಾವು ಶಾಂತಿಯ ಹಾದಿಯಲ್ಲಿ ಹೇಗೆ ಪ್ರಗತಿ ಸಾಧಿಸಬಹುದು ಎಂಬುದರ ಬಗ್ಗೆ ಮಾತನಾಡಲು ಅವಕಾಶ ಪಡೆಯುತ್ತೇವೆ. ಭಾರತ ಮತ್ತು ರಷ್ಯಾ ಹಲವಾರು ದಶಕಗಳಿಂದ ಪರಸ್ಪರ ಸೌಹಾರ್ದ ಮತ್ತು ಸಹಕಾರ ಸಂಬಂಧ ಹೊಂದಿವೆ’ ಎಂದು ಮೋದಿ ಹೇಳಿದ್ದರು.

ಯುದ್ಧವನ್ನು ಕೊನೆಗೊಳಿಸುವಂತೆ ಮೋದಿ ಪುಟಿನ್​ಗೆ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಕರೆ ನೀಡಿದ್ದು ಇದೇ ಮೊದಲು. ‘ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವಿನ ಬಗ್ಗೆ ನಮಗೆ ತಿಳಿದಿದೆ. ಈ ಸಂಘರ್ಷ ಸಾಧ್ಯವಾದಷ್ಟೂ ಬೇಗ ಕೊನೆಗೊಳ್ಳಬೆಕೆಂದು ನಾವು ಬಯಸುತ್ತೇವೆ. ಆದರೆ ಉಕ್ರೇನ್ ನಾಯಕತ್ವವು ಮಾತುಕತೆಗೆ ನಿರಾಕರಿಸುತ್ತಿದೆ. ಅವರು ಸೇನಾ ಕಾರ್ಯಾಚರಣೆಳ ಮೂಲಕ ಯುದ್ಧಭೂಮಿಯಲ್ಲಿ ತಮ್ಮ ಉದ್ದೇಶ ಈಡೇರಿಸಿಕೊಳ್ಳಲು ಬಯಸುತ್ತಿದ್ದಾರೆ’ ಎಂದು ಪುಟಿನ್ ದೂರಿದ್ದರು.

ಫ್ಯಾನ್ಸ್​ ಅಧ್ಯಕ್ಷ ಮ್ಯಾಕ್ರೋನ್ ಸಹ ಇದೀಗ ಬಹಿರಂಗವಾಗಿ ರಷ್ಯಾ-ಉಕ್ರೇನ್​ ಯುದ್ಧವನ್ನು ವಿರೋಧಿಸಿ ಮಾತನಾಡಿದ್ದಾರೆ. ಮಾಸ್ಕೋ ಮೇಲೆ ಹೆಚ್ಚಿನ ಒತ್ತಡ ಹೇರುವಂತೆ ತಟಸ್ಥ ರಾಷ್ಟ್ರಗಳ ಮನವೊಲಿಸಲು ಅವರು ಮಹಾಧಿವೇಶನವನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ‘ಸಂಘರ್ಷ ನಿಲ್ಲಿಸಲು ಶೀಘ್ರ ಕಾರ್ಯತತ್ಪರರಾಗಿ. ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್