ಕೊರೊನಾದಿಂದ ಚೇತರಿಸಿಕೊಂಡ ಬ್ರಿಟನ್ ಪ್ರಧಾನಿಗೆ ಗಂಡು ಮಗು

|

Updated on: Apr 29, 2020 | 6:20 PM

ಲಂಡನ್: ಇತ್ತೀಚೆಗಷ್ಟೇ ಕೊರೊನಾ ವೈರಸ್​ನಿಂದ ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳಿರುವ 55 ವರ್ಷದ ಬ್ರಿಟನ್ ಪ್ರಧಾನಿ ಜಾನ್ಸನ್ ಬೋರಿಸ್, ಮುದ್ದಾದ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಬೋರಿಸ್ ಅವರ ಪ್ರೇಯಸಿ ಕ್ಯಾರಿ ಸೈಮಂಡ್ಸ್​ ಲಂಡನ್​ನ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಬೋರಿಸ್ ಅವರ ಕಚೇರಿ ಮಾಹಿತಿ ನೀಡಿದೆ. ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ […]

ಕೊರೊನಾದಿಂದ ಚೇತರಿಸಿಕೊಂಡ ಬ್ರಿಟನ್ ಪ್ರಧಾನಿಗೆ ಗಂಡು ಮಗು
Follow us on

ಲಂಡನ್: ಇತ್ತೀಚೆಗಷ್ಟೇ ಕೊರೊನಾ ವೈರಸ್​ನಿಂದ ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳಿರುವ 55 ವರ್ಷದ ಬ್ರಿಟನ್ ಪ್ರಧಾನಿ ಜಾನ್ಸನ್ ಬೋರಿಸ್, ಮುದ್ದಾದ ಗಂಡು ಮಗುವಿಗೆ ತಂದೆಯಾಗಿದ್ದಾರೆ.

ಬೋರಿಸ್ ಅವರ ಪ್ರೇಯಸಿ ಕ್ಯಾರಿ ಸೈಮಂಡ್ಸ್​ ಲಂಡನ್​ನ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಬೋರಿಸ್ ಅವರ ಕಚೇರಿ ಮಾಹಿತಿ ನೀಡಿದೆ.

ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ ಬಂದಿದ್ದರು.