AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಒಕೆ ಚುನಾವಣೆ ವೇಳೆ ಹಿಂಸಾಚಾರ: ಮತಪೆಟ್ಟಿಗೆಗೆ ಬೆಂಕಿ, ಪಿಪಿಪಿ ಕಾರ್ಯಕರ್ತನ ಹತ್ಯೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಚುನಾವಣೆಗಳು ತೀವ್ರ ಹಿಂಸಾಚಾರ ಮತ್ತು ಅಕ್ರಮಗಳಿಂದ ಕೂಡಿತ್ತು. ಮತಪೆಟ್ಟಿಗೆಗೆ ಬೆಂಕಿ ಹಚ್ಚಿ, ಪಿಪಿಪಿ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಭ್ರಷ್ಟಾಚಾರ ಮತ್ತು ಹಣದುಬ್ಬರ ವಿರೋಧಿ ಪ್ರತಿಭಟನೆಗಳ ನಡುವೆ ಮತದಾನ ನಡೆದಿದ್ದು, ಭದ್ರತಾ ಪಡೆಗಳಿಂದ ಗುಂಡಿನ ದಾಳಿ ನಡೆದಿದೆ. ಭಾರತವು ಪಿಒಕೆ ತನ್ನ ಅವಿಭಾಜ್ಯ ಅಂಗ ಎಂದು ಪುನರುಚ್ಚರಿಸಿದ್ದು, ಈ ಹಿಂಸಾಚಾರವು ಪಾಕಿಸ್ತಾನದ ದಶಕಗಳ ಶೋಷಣೆಯ ನೇರ ಪರಿಣಾಮ ಎಂದು ಖಂಡಿಸಿದೆ.

ಪಿಒಕೆ ಚುನಾವಣೆ ವೇಳೆ ಹಿಂಸಾಚಾರ: ಮತಪೆಟ್ಟಿಗೆಗೆ ಬೆಂಕಿ, ಪಿಪಿಪಿ ಕಾರ್ಯಕರ್ತನ ಹತ್ಯೆ
ಪಿಒಕೆ
ನಯನಾ ರಾಜೀವ್
|

Updated on: Jul 28, 2026 | 8:23 AM

Share

ಮುಜಫರಾಬಾದ್,ಜುಲೈ 28: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಸೋಮವಾರ ನಡೆದ ಶಾಸಕಾಂಗ ಸಭೆಯ ಮೊದಲ ಹಂತದ ಚುನಾವಣೆ(Election)ಯು ತೀವ್ರ ಹಿಂಸಾಚಾರ, ಅಕ್ರಮಗಳ ಆರೋಪ ಹಾಗೂ ಭದ್ರತಾ ಪಡೆಗಳ ಬಲಪ್ರಯೋಗದ ನಡುವೆ ಮುಕ್ತಾಯಗೊಂಡಿದೆ. ಸುಮಾರು 38 ಲಕ್ಷ ಮತದಾರರನ್ನು ಹೊಂದಿರುವ ಈ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟ ವಾತಾವರಣದಿಂದಾಗಿ ಆಡಳಿತವು ಇತಿಹಾಸದಲ್ಲೇ ಮೊದಲ ಬಾರಿಗೆ ಮತದಾನವನ್ನು ಮೂರು ಹಂತಗಳಾಗಿ ವಿಂಗಡಿಸಿದೆ.

ಭಿಂಬರ್‌ನಲ್ಲಿರುವ ಮತದಾನ ಕೇಂದ್ರವೊಂದರಲ್ಲಿ ರಾಜಕೀಯ ಗುಂಪುಗಳ ನಡುವೆ ಭೀಕರ ಘರ್ಷಣೆ ಸಂಭವಿಸಿದ್ದು, ಶಸ್ತ್ರಸಜ್ಜಿತ ಕಿಡಿಗೇಡಿಗಳು ಮತಪೆಟ್ಟಿಗೆಯನ್ನು ವಶಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಒಳಗಿದ್ದ ಮತಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಕೋಟ್ಲಿ ಜಿಲ್ಲೆಯ ನಕ್ಯಾಲ್‌ನಲ್ಲಿ ನಡೆದ ರಾಜಕೀಯ ಘರ್ಷಣೆಯಲ್ಲಿ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (PPP) ಕಾರ್ಯಕರ್ತ ಮುಕ್ತಾರ್ ಯೂನಸ್ ಕೊಲ್ಲಲ್ಪಟ್ಟಿದ್ದಾರೆ. ರಾಜಕೀಯ ಪ್ರತಿಸ್ಪರ್ಧಿಗಳೇ ಈ ಕೊಲೆಗೆ ಕಾರಣ ಎಂದು ಪಿಪಿಪಿ ಆರೋಪಿಸಿದೆ.

LA-1 ಮಿರ್ಪುರ್ ಸೇರಿದಂತೆ ಹಲವು ಮತದಾನ ಕೇಂದ್ರಗಳಿಗೆ ಶಸ್ತ್ರಸಜ್ಜಿತ ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಾರೆ ಎಂದು ದೂರು ನೀಡಲಾಗಿದೆ.ರಾವಲಕೋಟ್‌ನಲ್ಲಿ ಪ್ರತಿಭಟನಾ ನಿರತ ನಾಗರಿಕರ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು, ಹಲವು ಜನರು ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ ಎಂದು ನಾಗರಿಕ ಹಕ್ಕುಗಳ ಸಂಘಟನೆ ‘ಜಮ್ಮು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ’ (JAAC) ಆರೋಪಿಸಿದೆ.

ಮತ್ತಷ್ಟು ಓದಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು

ಪಿಒಕೆಯಲ್ಲಿ ಸತತ ಎರಡು ತಿಂಗಳುಗಳಿಂದ ಭ್ರಷ್ಟಾಚಾರ, ಹಣದುಬ್ಬರ ಹಾಗೂ ಶೋಷಣೆಯ ವಿರುದ್ಧ ‘ಜೆಎಎಸಿ’ ನೇತೃತ್ವದಲ್ಲಿ ವ್ಯಾಪಕ ಸಾರ್ವಜನಿಕ ಪ್ರತಿಭಟನೆಗಳು ನಡೆಯುತ್ತಿದ್ದವು. 1947 ರ ನಂತರ ಬಂದು ನೆಲೆಸಿದ ನಿರಾಶ್ರಿತರಿಗೆ ಮೀಸಲಾಗಿರುವ 12 ಶಾಸಕಾಂಗ ಸ್ಥಾನಗಳನ್ನು ರದ್ದುಗೊಳಿಸುವುದು ಇವರ ಮುಖ್ಯ ಬೇಡಿಕೆಯಾಗಿತ್ತು. ಈ ಪ್ರತಿಭಟನೆಗಳನ್ನು ಹತೋಟಿಗೆ ತರಲಾಗದೆ ಪಾಕಿಸ್ತಾನ ಸರ್ಕಾರವು ಕಳೆದ ತಿಂಗಳು ಈ ಸಂಘಟನೆಯನ್ನು ನಿಷೇಧಿಸಿತ್ತು.

ತೀವ್ರ ಅಶಾಂತಿಯ ಹಿನ್ನೆಲೆಯಲ್ಲಿ ಮತದಾನದ ವೇಳಾಪಟ್ಟಿಯನ್ನು ಬದಲಾಯಿಸಲಾಗಿದ್ದು, ಅತಿ ಹೆಚ್ಚು ಪ್ರತಿಭಟನೆಗಳು ನಡೆದ ಪೂಂಚ್ ಜಿಲ್ಲೆಯಲ್ಲಿ ಆಗಸ್ಟ್ 10 ರಂದು ಅಂತಿಮ ಹಂತದ ಮತದಾನ ನಡೆಯಲಿದೆ.

ಜಮ್ಮು-ಕಾಶ್ಮೀರ ಮತ್ತು ಲಡಾಖ್ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನವು ಪಿಒಕೆಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಪಿಒಕೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಹಿಂಸಾಚಾರವು ಇಸ್ಲಾಮಾಬಾದ್ ನೆರವೇರಿಸುತ್ತಿರುವ ದಶಕಗಳ ಶೋಷಣೆ ಹಾಗೂ ದಬ್ಬಾಳಿಕೆಯ ನೇರ ಪರಿಣಾಮವಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಇತ್ತೀಚೆಗೆ ಕಟುವಾಗಿ ಟೀಕಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ