AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀಚ ಕೃತ್ಯ: ಸೂಪರ್​ ಮಾರ್ಕೆಟ್​ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಪ್ಯಾಂಟ್ ಸಡಿಲಿಸಿ ಗುಪ್ತಾಂಗ ತಾಗಿಸಿದ ವ್ಯಕ್ತಿ

ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್​ನ ಸೂಪರ್ ಮಾರ್ಕೆಟ್​ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Video: ನೀಚ ಕೃತ್ಯ: ಸೂಪರ್​ ಮಾರ್ಕೆಟ್​ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಪ್ಯಾಂಟ್ ಸಡಿಲಿಸಿ ಗುಪ್ತಾಂಗ ತಾಗಿಸಿದ ವ್ಯಕ್ತಿ
ಆರೋಪಿ
TV9 Web
| Edited By: |

Updated on:Mar 31, 2026 | 10:10 AM

Share

ಲಾಸ್ ಏಂಜಲೀಸ್, ಮಾರ್ಚ್​ 31: ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್​ನ ಸೂಪರ್ ಮಾರ್ಕೆಟ್​ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸೂಪರ್ ಮಾರ್ಕೆಟ್​​ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಯುವತಿಯೊಬ್ಬಳು ಮಾರ್ಕೆಟ್​ನಲ್ಲಿ ಮನೆಗೆ ಬೇಕಾದ ವಸ್ತುಗಳನ್ನು ಹುಡುಕುತ್ತಿದ್ದಾಗ ಆ ವ್ಯಕ್ತಿ ಆಕೆಯ ಹಿಂದೆ ಬಂದು ನಿಂತು ಅನುಚಿತವಾಗಿ ವರ್ತಿಸಿದ್ದಾನೆ.

ಮತ್ತಷ್ಟು ಓದಿ: ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಅಷ್ಟೇ ಅಲ್ಲದೆ ಪ್ಯಾಂಟ್ ಜಿಪ್ ತೆರೆದು ಆಕೆಯ ಕಿವಿಗೆ ಗುಪ್ತಾಂಗವನ್ನು ತಾಕಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಯುವತಿ ಅಲ್ಲಿಂದ ಓಡಿ ಹೋಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಅಧಿಕಾರಿಗಳು ಬರುವಷ್ಟರಲ್ಲಿ ಆತ ಅಲ್ಲಿಂದ ಕಾಲ್ಕಿತ್ತಿದ್ದ. ಆ ಕೃತ್ಯ ಆತ ಎಸಗುವ ಸಮಯದಲ್ಲಿ ಆತನ ಕೈಯಲ್ಲಿ ಫೋನ್ ಕೂಡ ಇತ್ತು ಎಂದು ಆಕೆ ತಿಳಿಸಿದ್ದಾಳೆ.

ಈ ಘಟನೆ ಮಾರ್ಚ್ 23 ರಂದು ನಡೆದಿದ್ದು, ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದೆ. ಆ ವ್ಯಕ್ತಿಯ ವಯಸ್ಸು 30ರ ಆಸುಪಾಸಿರಬಹುದು ಎಂದು ಅಂದಾಜಿಸಲಾಗಿದೆ. ಗಡ್ಡ, ನೀಲಿ ಬಣ್ಣದ ಶರ್ಟ್​ ಹರಿದ ಜೀನ್ಸ್​ ತೊಟ್ಟಿದ್ದ.ದೃಶ್ಯಾವಳಿಗಳು ಮತ್ತು ಲಭ್ಯವಿರುವ ಇತರ ಸುಳಿವುಗಳನ್ನು ಬಳಸಿಕೊಂಡು ಆರೋಪಿಯನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಅಧಿಕಾರಿಗಳು ಈಗ ಕೆಲಸ ಮಾಡುತ್ತಿದ್ದಾರೆ. ಅಂಗಡಿಯ ಆಡಳಿತ ಮಂಡಳಿಯು ತನಿಖೆಗೆ ಸಹಕರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:09 am, Tue, 31 March 26

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!