ವಾಷಿಂಗ್ಟನ್: ನ್ಯೂಯಾರ್ಕ್‌ನ ರಾಕ್‌ಲ್ಯಾಂಡ್ ಕೌಂಟಿಯಲ್ಲಿ ಸುಮಾರು ಒಂದು ದಶಕದ ಬಳಿಕ ಮೊದಲ ಪೋಲಿಯೊ (Polio) ಪ್ರಕರಣ ದೃಢಪಟ್ಟಿದೆ. ಜೂನ್‌ನಲ್ಲಿ 20 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸಾರ್ವಜನಿಕ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಪೋಲಿಯೊ ಒಂದು ವೈರಲ್ ಕಾಯಿಲೆಯಾಗಿದ್ದು, ಅದು ನರದ ಮೇಲೆ ಪರಿಣಾಮ ಬೀರಬಹುದು. ಇದು ಸ್ನಾಯು ದೌರ್ಬಲ್ಯವನ್ನು ಉಂಟುಮಾಡುತ್ತದೆ. ಕೆಲವು ಸಂದರ್ಭಗಳಲ್ಲಿ ಪಾರ್ಶ್ವವಾಯು ಅಥವಾ ಸಾವಿಗೆ ಕಾರಣವಾಗುತ್ತದೆ.
ನ್ಯೂಯಾರ್ಕ್ ಸ್ಟೇಟ್ ಡಿಪಾರ್ಟ್ಮೆಂಟ್ ಆಫ್ ಹೆಲ್ತ್ ಸಹಭಾಗಿತ್ವದಲ್ಲಿ ರಾಕ್ಲ್ಯಾಂಡ್ ಕೌಂಟಿಯ ನಿವಾಸಿಗಳಲ್ಲಿ ಪೋಲಿಯೊದ ದೃಢಪಡಿಸಿದ ಪ್ರಕರಣವನ್ನು ಇಂದು ಮುಂಜಾನೆ ಘೋಷಿಸಲಾಯಿತು ಎಂದು ಆರೋಗ್ಯ ಇಲಾಖೆ ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: African Swine Fever: ಕೇರಳದ ವಯನಾಡಿನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; 300 ಹಂದಿಗಳನ್ನು ಕೊಲ್ಲಲು ಆದೇಶ
ಪೋಲಿಯೊ ಸೋಂಕಿಗೆ ಒಳಗಾದ ಶೇ. 95ರಷ್ಟು ಜನರು ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಆದರೂ ಅವರಿಂದ ಇನ್ನೂ ಈ ವೈರಸ್ ಹರಡಲು ಕಾರಣವಾಗಬಹುದು ಎಂದು ಕೌಂಟಿ ಹೆಲ್ತ್ ಕಮಿಷನರ್ ಡಾ. ಪೆಟ್ರಿಸಿಯಾ ಸ್ಕ್ನಾಬೆಲ್ ರಪ್ಪರ್ಟ್ ಹೇಳಿದ್ದಾರೆ.
ಪೋಲಿಯೊ ರೋಗಿಯು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ತಮ್ಮ ಹೆಂಡತಿ ಮತ್ತು ಮಕ್ಕಳೊಂದಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಆ ವ್ಯಕ್ತಿಗೆ ನಿಲ್ಲಲು ಸಾಧ್ಯವಾದರೂ ನಡೆಯಲು ಬಹಳ ಕಷ್ಟಪಡುತ್ತಿದ್ದಾರೆ.