ಉಜ್ಬೇಕಿಸ್ತಾನದಲ್ಲಿ ಪ್ರಬಲ ಸ್ಫೋಟ, ಓರ್ವ ಸಾವು, 162 ಮಂದಿಗೆ ಗಾಯ
ಉಜ್ಬೇಕಿಸ್ತಾನದ ತಾಷ್ಕೆಂಟ್ ವಿಮಾನ ನಿಲ್ದಾಣದ ಸಮೀಪವಿರುವ ಗೋದಾಮಿನಲ್ಲಿ ಗುರುವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, 162 ಮಂದಿ ಗಾಯಗೊಂಡಿದ್ದಾರೆ. ಹತ್ತಿರವಿದ್ದ ಕಟ್ಟಡಕ್ಕೆಲ್ಲಾ ಬೆಂಕಿ ತನ್ನ ಕೆನ್ನಾಲಿಗೆ ಚಾಚಿತ್ತು, ಅಪಾರ್ಟ್ಮೆಂಟ್ಗೂ ಬೆಂಕಿ ತಗುಲಿ ಕಿಟಕಿ ಗಾಜುಗಳೆಲ್ಲಾ ಪುಡಿಪುಡಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಟಕಿಯ ಚೌಕಟ್ಟು ಓರ್ವನ ಮೇಲೆ ಬಿದ್ದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ, 24 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ, 138 ಜನರು ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ.
ರಾಜಧಾನಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಆಡಳಿತ ತಿಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಮತ್ತು ಚಿತ್ರಗಳಲ್ಲಿ, ಗೋದಾಮಿನ ಮೇಲೆ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಯನ್ನು ನೊಡಬಹುದು, ಸ್ಫೋಟಕ್ಕೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.
ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಸ್ಫೋಟದ ತನಿಖೆಗಾಗಿ ಘಟನಾ ಸ್ಥಳದಲ್ಲಿ ವಿಶೇಷ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದೆ ಎಂದು ತುರ್ತು ಸಚಿವಾಲಯ ತಿಳಿಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ.
16 ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿಯನ್ನು ವಿಮಾನ ನಿಲ್ದಾಣದ ಸಮೀಪವಿರುವ ನಗರದ ಸೆರ್ಗೆಲಿ ಜಿಲ್ಲೆಯ ಗೋದಾಮಿನಲ್ಲಿ ಬೆಂಕಿಯ ವಿರುದ್ಧ ಹೋರಾಡಲು ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ