ಗಲ್ಲು ಶಿಕ್ಷೆಗೆ ಗುರಿಯಾದವ, ಸಂಸತ್ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಿದ! ಎಲ್ಲಿ?

ಕೊಲೆ ಆರೋಪದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಶ್ರೀಲಂಕಾದ ರಾಜಕಾರಣಿ ಜೈಲಿನಿಂದಲೇ ಸಂಸತ್ತಿಗೆ ಬಂದು ಸಂಸತ್ತಿನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಅಪರಾಧಿ ಎನಿಸಿಕೊಂಡಿದ್ದಾರೆ. 2015 ರಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರತಿಪಕ್ಷದ ಕಾರ್ಯಕರ್ತನನ್ನು ಗುಂಡು ಹಾರಿಸಿ ಕೊಲೆ ಮಾಡಿದ ಆಡಳಿತಾರೂಡ ಶ್ರೀಲಂಕಾ ಪೊಡುಜಾನ ಪಕ್ಷದ (ಎಸ್‌ಎಲ್‌ಪಿಪಿ) ಪ್ರೇಮಲಾಲ್ ಜಯಶೇಖರಗೆ ಜುಲೈನಲ್ಲಿ ನ್ಯಾಯಾಲಯ ಮರಣ ದಂಡನೆ ವಿಧಿಸಿತ್ತು. ಆದರೆ ಪ್ರೇಮಲಾಲ್ ಜಯಶೇಖರ ಆಗಸ್ಟ್ 5 ರ ಮತದಾನಕ್ಕೆ ನಾಮನಿರ್ದೇಶನಗೊಂಡ ನಂತರ ನ್ಯಾಯಾಲಯ ಅವರಿಗೆ ಮರಣ ದಂಡನೆ ವಿಧಿಸಿತ್ತು. ಆದರಿಂದ […]

ಗಲ್ಲು ಶಿಕ್ಷೆಗೆ ಗುರಿಯಾದವ, ಸಂಸತ್ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಿದ! ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:Sep 09, 2020 | 1:47 PM

ಕೊಲೆ ಆರೋಪದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಶ್ರೀಲಂಕಾದ ರಾಜಕಾರಣಿ ಜೈಲಿನಿಂದಲೇ ಸಂಸತ್ತಿಗೆ ಬಂದು ಸಂಸತ್ತಿನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಅಪರಾಧಿ ಎನಿಸಿಕೊಂಡಿದ್ದಾರೆ.

2015 ರಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರತಿಪಕ್ಷದ ಕಾರ್ಯಕರ್ತನನ್ನು ಗುಂಡು ಹಾರಿಸಿ ಕೊಲೆ ಮಾಡಿದ ಆಡಳಿತಾರೂಡ ಶ್ರೀಲಂಕಾ ಪೊಡುಜಾನ ಪಕ್ಷದ (ಎಸ್‌ಎಲ್‌ಪಿಪಿ) ಪ್ರೇಮಲಾಲ್ ಜಯಶೇಖರಗೆ ಜುಲೈನಲ್ಲಿ ನ್ಯಾಯಾಲಯ ಮರಣ ದಂಡನೆ ವಿಧಿಸಿತ್ತು.

ಆದರೆ ಪ್ರೇಮಲಾಲ್ ಜಯಶೇಖರ ಆಗಸ್ಟ್ 5 ರ ಮತದಾನಕ್ಕೆ ನಾಮನಿರ್ದೇಶನಗೊಂಡ ನಂತರ ನ್ಯಾಯಾಲಯ ಅವರಿಗೆ ಮರಣ ದಂಡನೆ ವಿಧಿಸಿತ್ತು. ಆದರಿಂದ ಜಯಶೇಖರ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಶೀಲರಾಗಿದ್ದರು.

ಆಗಸ್ಟ್ 20 ರಂದು ನಡೆದ ಸಂಸತ್ತಿನ ಮೊದಲ ಅಧಿವೇಶನಕ್ಕೆ ಜೈಲಿನ ಅಧಿಕಾರಿಗಳು ಜಯಶೇಖರ ಅವರನ್ನು ಹೊರಗೆ ಬಿಡಲು ನಿರಾಕರಿಸಿದರು. ಇದರಿಂದ ಜೈಲಿನ ಅಧಿಕಾರಿಗಳ ಈ ನಡೆಯ ವಿರುದ್ಧ ನ್ಯಾಯಾಲಯದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಸಂಸದರಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಅವರನ್ನು ಜೈಲಿನಿಂದ ಕರೆದೊಯ್ಯಬೇಕು ಹಾಗೂ ಅಧಿವೇಶನದ ನಂತರ ಅವರನ್ನು ಮತ್ತೆ ಜೈಲಿಗೆ ಕರೆದೊಯ್ಯಬೇಕೆಂದು ಎಂದು ಸೋಮವಾರ ಮಧ್ಯಂತರ ಆದೇಶ ಹೊರಡಿಸಿದೆ.

ಕುತ್ತಿಗೆಗೆ ಕಪ್ಪು ವಸ್ತ್ರ ಧರಿಸಿ ಪ್ರತಿಭಟನೆ ಈ ಹಿನ್ನೆಲೆಯಲ್ಲಿ.. ಜಯಶೇಖರ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷದ ಸಂಸದರು ಕುತ್ತಿಗೆಗೆ ಕಪ್ಪು ವಸ್ತ್ರ ಧರಿಸಿ ಪ್ರತಿಭಟನೆ ನಡೆಸಿದಲ್ಲದೆ ಹಲವರು ಸಭಾತ್ಯಾಗ ಮಾಡಿದರು.

Published On - 1:42 pm, Wed, 9 September 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ