Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ, ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಮಧ್ಯೆ ನವರಾತ್ರಿ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಜಸ್ಟಿನ್ ಟ್ರುಡೋ

ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಭಾನುವಾರ ಟ್ವೀಟ್​ ಮಾಡುವ ಮೂಲಕ ತಮ್ಮ ದೇಶದ ಹಿಂದೂ ಸಮುದಾಯದವರಿಗೆ ನವರಾತ್ರಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಭಾರತ, ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಮಧ್ಯೆ ನವರಾತ್ರಿ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಜಸ್ಟಿನ್ ಟ್ರುಡೋ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ
Follow us
ಗಂಗಾಧರ​ ಬ. ಸಾಬೋಜಿ
|

Updated on:Oct 15, 2023 | 10:05 PM

ನವದೆಹಲಿ, ಅಕ್ಟೋಬರ್​​ 15: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಅವರು ಭಾನುವಾರ ತಮ್ಮ ದೇಶದ ಹಿಂದೂ ಸಮುದಾಯದವರಿಗೆ ನವರಾತ್ರಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಅವರು, ‘ನವರಾತ್ರಿಯ ಶುಭಾಶಯಗಳು’! ಹಿಂದೂ ಸಮುದಾಯದ ಸದಸ್ಯರಿಗೆ ಮತ್ತು ಈ ಹಬ್ಬವನ್ನು ಆಚರಿಸುತ್ತಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯವನ್ನು ತಿಳಿಸುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಈ ನವರಾತ್ರಿ ಹಬ್ಬದಂದು ದುರ್ಗಾ ದೇವಿಯನ್ನು ಪೂಜಿಸಲಾಗುತ್ತದೆ. ಈ ನವರಾತ್ರಿಯೂ ಒಂಬತ್ತು ದಿನಗಳ ವರೆಗೂ ನಡೆಯುತ್ತದೆ. ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ ಮತ್ತು ನಂತರ ದಸರಾ ಹಬ್ಬವನ್ನು ಆಚರಿಸಲಾಗುತ್ತದೆ.

ಹಳಸಿದ ಭಾರತ-ಕೆನಡಾ ಸಂಬಂಧ

ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತವೇ ಕಾರಣ, ಈ ಹತ್ಯೆಯಲ್ಲಿ ಭಾರತದ ಏಜೆಂಟ್​​ಗಳ ಕೈವಾಡ ಇದೆ ಎಂದು ಹೇಳಿದ್ದರು. ಭಾರತದ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ನಿಜ್ಜರ್​ನನ್ನು ಜೂನ್ 18 ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದರು.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಟ್ವೀಟ್​​

ಅವರ ಹತ್ಯೆಯ ಮೂರು ತಿಂಗಳ ಬಳಿಕ, ಜಸ್ಟಿನ್ ಟ್ರುಡೋ ಅವರು ಭಾರತದ ವಿರುದ್ಧ ಸಾರ್ವಜನಿಕವಾಗಿ ಗಂಭೀರ ಆರೋಪಗಳನ್ನು ಮಾಡಿದ್ದರು. ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ  ಕೈವಾಡವಿದೆ ಎಂದು ಹೇಳಿದ್ದರು. ಆದರೆ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಗಳನ್ನು ಭಾರತ ತಳ್ಳಿ ಹಾಕಿತ್ತು. ಟ್ರುಡೋ ಅವರ ಆರೋಪಗಳ ನಂತರ, ಭಾರತವು ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದ್ದು, ಕೆನಡಿಯನ್ನರಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಯೂ ಟರ್ನ್​​​ ಹೊಡೆದ ಪ್ರಧಾನಿ ಜಸ್ಟಿನ್ ಟ್ರುಡೋ

ಭಾರತದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಕೆಲವು ದಿನಗಳ ನಂತರ, ಕೆನಡಾ ಪ್ರಧಾನಿ ಯೂ ಟರ್ನ್​​​ ಹೊಡೆದಿದ್ದು, ಭಾರತವನ್ನು ಓಲೈಸಲು ಮುಂದಾಗಿದ್ದರು. ಏಕೆಂದರೆ ಒಟ್ಟಾವಾ ಮತ್ತು ನವದೆಹಲಿಯೊಂದಿಗಿನ ತಮ್ಮ ಸಂಬಂಧವನ್ನು ಹೊಂದಲು ಅವರು ಬದ್ಧರಾಗಿದ್ದರು. ಆ ಮೂಲಕ ತಮ್ಮ ದೇಶವು ಭಾರತದೊಂದಿಗೆ ರಚನಾತ್ಮಕ ಸಂಬಂಧಗಳನ್ನು ಮುಂದುವರಿಸುತ್ತದೆ ಎಂದು ಟ್ರುಡೋ ಹೇಳಿದ್ದರು.

ಇದನ್ನೂ ಓದಿ: ವಿಶ್ವ ನಾಯಕರೊಂದಿಗಿನ ಸಭೆಗಳಲ್ಲಿ ಕೆನಡಾ-ಭಾರತ ವಿವಾದ ಬಗ್ಗೆ ಮಾತನಾಡಿದ ಜಸ್ಟಿನ್ ಟ್ರುಡೊ

ಕೆನಡಾವು ಭಾರತದೊಂದಿಗೆ ಅತ್ಯಂತ ಸವಾಲಿನ ಸಮಯವನ್ನು ಎದುರಿಸುತ್ತಿದೆ. ಆದರೆ ತಮ್ಮ ದೇಶವು ನವದೆಹಲಿಯೊಂದಿಗೆ ಜವಾಬ್ದಾರಿಯುತವಾಗಿ ಮತ್ತು ರಚನಾತ್ಮಕವಾಗಿ ತೊಡಗಿಸಿಕೊಳ್ಳುವುದಾಗಿ ಅವರು ಹೇಳಿದ್ದರು.

ಕಳೆದ ತಿಂಗಳು, ಕೆನಡಾದ ಪ್ರಧಾನಿ ತಮ್ಮ ದೇಶವು ವಿಶ್ವ ಮಟ್ಟದಲ್ಲಿ ಬೆಳೆಯುತ್ತಿರುವ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಭಾರತದೊಂದಿಗೆ ನಿಕಟ ಸಂಬಂಧವನ್ನು ಬೆಳೆಸುವ ಬಗ್ಗೆ ಪ್ರಸ್ತಾಪಿಸಿದ್ದರು. ಭಾರತವು ಬೆಳೆಯುತ್ತಿರುವ ಆರ್ಥಿಕ ಶಕ್ತಿ ಮತ್ತು ಪ್ರಮುಖ ಭೌಗೋಳಿಕ ರಾಜಕೀಯ ಪಾತ್ರ ವಹಿಸುತ್ತದೆ ಎಂದು ಅವರು ಒತ್ತಿಹೇಳಿದ್ದರು.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:04 pm, Sun, 15 October 23

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ