ಪ್ರಧಾನಿ ಮೋದಿಯೇ ಬಾಸ್: ಆಸ್ಟ್ರೇಲಿಯಾದ ಪಿಎಂ ಆಂಥೋನಿ ಅಲ್ಬನೀಸ್ ಮೆಚ್ಚುಗೆ

ಧನ್ಯವಾದಗಳು, ನೀವು ಆಸ್ಟ್ರೇಲಿಯಾಕ್ಕೆ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಚೈತನ್ಯವನ್ನು ತಂದಿದ್ದೀರಿ.ಆಸ್ಟ್ರೇಲಿಯಾವನ್ನು ತಮ್ಮ ನೆಲೆಯನ್ನಾಗಿ ಮಾಡಿಕೊಂಡಿರುವ ಭಾರತೀಯ ಮೂಲದ ಜನರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನೀವು ಆಸ್ಟ್ರೇಲಿಯಾವನ್ನು ಉತ್ತಮಗೊಳಿಸುತ್ತೀರಿ ಎಂದ ಆಸ್ಟ್ರೇಲಿಯಾ ಪಿಎಂ

ಪ್ರಧಾನಿ ಮೋದಿಯೇ ಬಾಸ್: ಆಸ್ಟ್ರೇಲಿಯಾದ ಪಿಎಂ ಆಂಥೋನಿ ಅಲ್ಬನೀಸ್ ಮೆಚ್ಚುಗೆ
ಸಿಡ್ನಿಯಲ್ಲಿ ಮೋದಿ- ಆಸ್ಚ್ರೇಲಿಯಾ ಪಿಎಂ
Follow us
|

Updated on: May 23, 2023 | 5:00 PM

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ (Narendra Modi) ವೇದಿಕೆಯನ್ನು ಏರುತ್ತಿದ್ದಂತೆ ಸಿಡ್ನಿಯ(Sydney) ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ‘ಭಾರತ್ ಮಾತಾ ಕಿ ಜೈ’ ಘೋಷಣೆಗಳು ಕೇಳಿ ಬಂದವು. ಪ್ರಧಾನಿ ಮೋದಿಯವರನ್ನು ಬರ ಮಾಡಿಕೊಂಡ ಆಸ್ಟ್ರೇಲಿಯಾದ ಪ್ರಧಾನಿ,ಈ ವೇದಿಕೆಯಲ್ಲಿ ನಾನು ಕೊನೆಯ ಬಾರಿಗೆ ನೋಡಿದ್ದು ಬ್ರೂಸ್ ಸ್ಪ್ರಿಂಗ್‌ಸ್ಟೀನ್ ಅವರನ್ನು. ಅವರಿಗೆ ಪ್ರಧಾನಿ ಮೋದಿಗೆ ಸಿಕ್ಕಿದ ಸ್ವಾಗತ ಸಿಗಲಿಲ್ಲ. ಪ್ರಧಾನಿ ಮೋದಿಯೇ ಬಾಸ್ ಎಂದು ಹೇಳಿ ಸ್ವಾಗತ ಕೋರಿದ್ದಾರೆ.

ಎಂಥಾ ಗೌರವ! ಎಂದು ಉದ್ಗರಿಸಿದ ಆಂಥೋನಿ ಅಲ್ಬನೀಸ್, ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದಕ್ಕಾಗಿ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿದರು. ಇಷ್ಟು ದೊಡ್ಡ ಕೂಟದಲ್ಲಿ ಅಂತಹ ಆತ್ಮೀಯತೆ ಮತ್ತು ಸಕಾರಾತ್ಮಕತೆಯನ್ನು ನಾನು ನೋಡಿಲ್ಲ ಎಂದು ಅವರು ಹೇಳಿದರು.

ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಳೆದ ಒಂದು ವರ್ಷದಲ್ಲಿ ಆರು ಸಂದರ್ಭಗಳಲ್ಲಿ ಅವರು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದರು ಎಂದ ಹೇಳಿದ ಆಂಥೋನಿ ಅಲ್ಬನೀಸ್, ಹ್ಯಾರಿಸ್ ಪಾರ್ಕ್‌ನಲ್ಲಿ ‘ಮಿನಿ ಇಂಡಿಯಾ’ ಶಂಕುಸ್ಥಾಪನೆ ನೆರವೇರಿಸುವ ಕುರಿತು ಮಾಹಿತಿ ನೀಡಿದರು.

ಧನ್ಯವಾದಗಳು, ನೀವು ಆಸ್ಟ್ರೇಲಿಯಾಕ್ಕೆ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಚೈತನ್ಯವನ್ನು ತಂದಿದ್ದೀರಿ.ಆಸ್ಟ್ರೇಲಿಯಾವನ್ನು ತಮ್ಮ ನೆಲೆಯನ್ನಾಗಿ ಮಾಡಿಕೊಂಡಿರುವ ಭಾರತೀಯ ಮೂಲದ ಜನರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನೀವು ಆಸ್ಟ್ರೇಲಿಯಾವನ್ನು ಉತ್ತಮಗೊಳಿಸುತ್ತೀರಿ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಿಡ್ನಿಯ ಮೋದಿ ಶೋನಲ್ಲಿ ಕರವಾಳಿಯ ನಾದ, ವೇದಿಕೆ ಮೇಲೆ ವರಾಹ ರೂಪಂ

ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ನಡೆದ ಕಾರ್ಯಕ್ರಮವನ್ನು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ