AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Egypt Visit: ಈಜಿಪ್ಟ್​​ನ ಕೈರೋಗೆ ಬಂದಿಳಿದ ಪ್ರಧಾನಿ ಮೋದಿ, 2 ದಿನಗಳ ಪ್ರವಾಸದಲ್ಲಿ ಮಹತ್ವ ವಿಚಾರಗಳ ಕುರಿತು ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಮುಗಿಸಿ, ಮೊದಲೇ ನಿಗದಿಯಾಗಿರುವಂತೆ ಈಜಿಪ್ಟ್ ದೇಶಕ್ಕೆ ಭೇಟಿ ನೀಡಿದ್ದಾರೆ, ಇದೀಗ ಮೋದಿ ಈಜಿಪ್ಟ್​​ನ ರಾಜಧಾನಿ ಕೈರೋಗೆ ಬಂದಿಳಿದಿದ್ದಾರೆ.

Modi Egypt Visit: ಈಜಿಪ್ಟ್​​ನ ಕೈರೋಗೆ ಬಂದಿಳಿದ ಪ್ರಧಾನಿ ಮೋದಿ, 2 ದಿನಗಳ ಪ್ರವಾಸದಲ್ಲಿ ಮಹತ್ವ ವಿಚಾರಗಳ ಕುರಿತು ಚರ್ಚೆ
ಪ್ರಧಾನಿ ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Jun 24, 2023 | 6:30 PM

Share

ಕೈರೋ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಮುಗಿಸಿ, ಮೊದಲೇ  ನಿಗದಿಯಾಗಿರುವಂತೆ ಈಜಿಪ್ಟ್ ದೇಶಕ್ಕೆ ಭೇಟಿ ನೀಡಿದ್ದಾರೆ, ಇದೀಗ ಮೋದಿ ಈಜಿಪ್ಟ್​​ನ ರಾಜಧಾನಿ ಕೈರೋಗೆ ಬಂದಿಳಿದಿದ್ದಾರೆ. ಮೋದಿ ಈಜಿಪ್ಟ್​​ನಲ್ಲಿ ಎರಡು ದಿನಗಳ ಕಾಲ ಪ್ರವಾಸ ಮಾಡಲಿದ್ದು.  26 ವರ್ಷಗಳ ನಂತರ ಈಜಿಪ್ಟ್​​ಗೆ ಭಾರತದ ಪ್ರಧಾನಿ ದ್ವಿಪಕ್ಷೀಯ ಭೇಟಿ ನೀಡುತ್ತಿರುವುದು ಮೊದಲು ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಅವರನ್ನು ಈಜಿಪ್ಟ್ ಅಧ್ಯಕ್ಷ ಅಬ್ದುಲ್​​ ಫತ್ತಾಹ್ ಎಲ್-ಸಿಸಿ ಅವರು ತನ್ನ ದೇಶಕ್ಕೆ ಆಹ್ವಾನಿಸಿದ್ದು, ಅವರೊಂದಿಗೆ ಮೋದಿ ಎರಡು ಪ್ರಮುಖ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಬಗ್ಗೆ ಮತ್ತು ದ್ವಿಪಕ್ಷೀಯ ಸಂಬಂಧಗಳು, ಹಲವು ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ, ಇಬ್ಬರು ನಾಯಕರು ನಾಳೆ (ಜೂ.24) ಮಹತ್ವದ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ:PM Modi in US: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮಾತು; ಅಮೆರಿಕ ಅಧ್ಯಕ್ಷರನ್ನ ಹಾಡಿ ಹೊಗಳಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದ ನಂತರ ಶನಿವಾರ ಈಜಿಪ್ಟ್‌ಗೆ ಬಂದಿದ್ದು,  ಮೋದಿ ಟ್ವಿಟರ್​​ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಈಜಿಪ್ಟ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ,  ಕಾಮನ್‌ವೆಲ್ತ್ ಸ್ಥಾಪಿಸಿದ ಸ್ಮರಣಾರ್ಥ ಸ್ಥಳವಾದ ಹೆಲಿಯೊಪೊಲಿಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಈ ಸ್ಮಾರಕವು ಮೊದಲು ವಿಶ್ವ ಯುದ್ಧದ ಸಮಯದಲ್ಲಿ ಈಜಿಪ್ಟ್‌ನಲ್ಲಿ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ 3,799 ಭಾರತೀಯ ಸೈನಿಕರನ್ನು ಇಲ್ಲಿ ವಿಶೇಷವಾಗಿ ಗೌರವಿಸಲಾಗಿದೆ.

ಪ್ರಧಾನಿ ಮೋದಿ ಅವರು 11ನೇ ಶತಮಾನದ ಐತಿಹಾಸಿಕ ಮಸೀದಿ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ. ದಾವೂದಿ ಬೊಹ್ರಾ ಸಮುದಾಯದ ಬೆಂಬಲದೊಂದಿಗೆ ಈ ಮಸೀದಿಯನ್ನು ಪುನಃಸ್ಥಾಪಿಸಲಾಗಿದೆ. ಇದಲ್ಲದೆ, ಮೋದಿ ಅವರು ತಮ್ಮ ಭೇಟಿಯ ಸಮಯದಲ್ಲಿ ಈಜಿಪ್ಟ್‌ನಲ್ಲಿ ನೆಲೆಸಿರುವ ಭಾರತೀಯರನ್ನು ಭೇಟಿ ಮಾಡಲಿದ್ದು, ಅವರ ಜತೆಗೆ ಮಾತುಕತೆ ನಡೆಸಲಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 6:18 pm, Sat, 24 June 23

Follow Us
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್