PM Narendra Modi | ಅಮೆರಿಕದ ನೂತನ ಅಧ್ಯಕ್ಷರಿಗೆ ದೂರವಾಣಿ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

narendra modi Joe Biden ನೀತಿ ನಿಯಮಗಳಿಗೆ ಅನುಸಾರವಾಗಿ ಜಾಗತಿಕ ಮಟ್ಟದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎರಡೂ ದೇಶಗಳು ಕಾರ್ಯೋನ್ಮುಖವಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

PM Narendra Modi  | ಅಮೆರಿಕದ ನೂತನ ಅಧ್ಯಕ್ಷರಿಗೆ ದೂರವಾಣಿ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Feb 09, 2021 | 4:17 PM

ದೆಹಲಿ: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್ (USA President Joe Biden) ನೇಮಕವಾದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿ ದೂರವಾಣಿ ಮೂಲಕ ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಭಯೋತ್ಪಾದನೆ ನಿಯಂತ್ರಣ, ಹವಾಮಾನ ಬದಲಾವಣೆ, ಪ್ರವಾಸೋದ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಇಬ್ಬರೂ ನಾಯಕರು ಸಮ್ಮತಿ ವ್ಯಕ್ತಪಡಿಸಿದ್ದಾರೆ.

ಇಂಡೋ ಫೆಸಿಫಿಕ್ ವಲಯದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ತೆರನಾಗಿ ಕೆಲಸ ನಿರ್ವಹಿಸಲು ನಾವಿಬ್ಬರೂ ಬದ್ಧರಾಗಿದ್ದೇವೆ. ಇಂಡೋ ಫೆಸಿಫಿಕ್ ವಲಯದಲ್ಲಿ ಮುಕ್ತ ಮತ್ತು ಸ್ವತಂತ್ರ ವಾತಾವರಣದ ನಿರ್ಮಾಣ ನಮ್ಮ ಗುರಿಯಾಗಿರಲಿದೆ. ಎರಡೂ ದೇಶಗಳ ಪ್ರಾದೇಶಿಕ ಸಮಸ್ಯೆಗಳು ಮತ್ತು ಅವುಗಳನ್ನು ಪರಿಹರಿಸುವ ದೃಷ್ಟಿಯಿಂದ ಮಾತುಕತೆ ನಡೆಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಹೇಳಿದ್ದಾರೆ.

ನೀತಿ ನಿಯಮಗಳಿಗೆ ಅನುಸಾರವಾಗಿ ಜಾಗತಿಕ ಮಟ್ಟದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎರಡೂ ದೇಶಗಳು ಕಾರ್ಯೋನ್ಮುಖವಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.