AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಎಲ್ಲ ಧರ್ಮಗಳ ಬಗ್ಗೆ ಗೌರವ, ಸಹಿಷ್ಣುತೆಯನ್ನು ಪ್ರೋತ್ಸಾಹಿಸಿ: ವಿಶ್ವಸಂಸ್ಥೆ

ನಾನು ಸುದ್ದಿ ನೋಡಿದ್ದೇನೆ. ಆದರೆ ನಾನು ಹೇಳಿಕೆಗಳನ್ನು ಸ್ವತಃ ನೋಡಿಲ್ಲ. ಆದರೆ ನನ್ನ ಪ್ರಕಾರ, ನಾವು ಎಲ್ಲ ಧರ್ಮಗಳಿಗೆ ಗೌರವ ಮತ್ತು ಸಹಿಷ್ಣುತೆಯನ್ನು ಬಲವಾಗಿ ಪ್ರೋತ್ಸಾಹಿಸುತ್ತೇವೆ ಎಂದು ನಾನು ನಿಮಗೆ ಹೇಳಬಲ್ಲೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ...

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಎಲ್ಲ ಧರ್ಮಗಳ ಬಗ್ಗೆ ಗೌರವ, ಸಹಿಷ್ಣುತೆಯನ್ನು ಪ್ರೋತ್ಸಾಹಿಸಿ: ವಿಶ್ವಸಂಸ್ಥೆ
ವಿಶ್ವಸಂಸ್ಥೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 07, 2022 | 2:45 PM

Share

ದೆಹಲಿ: ಬಿಜೆಪಿಯ ಮಾಜಿ ವಕ್ತಾರರಾದ ನೂಪುರ್ ಶರ್ಮಾ (Nupur Sharma) ಮತ್ತು ನವೀನ್ ಕುಮಾರ್ ಜಿಂದಾಲ್ (Naveen Kumar Jindal) ಅವರು ಪ್ರವಾದಿ ಮೊಹಮ್ಮದ್ (Prophet Muhammad) ವಿರುದ್ಧ ಮಾಡಿದ ಟೀಕೆಗಳಿಗೆ ವಿವಿಧ ರಾಷ್ಟ್ರಗಳು ಖಂಡನೆ ವ್ಯಕ್ತ ಪಡಿಸುತ್ತಿರುವ ಹೊತ್ತಲ್ಲೇ ಎಲ್ಲ ಧರ್ಮಗಳಿಗೆ ಗೌರವ ಮತ್ತು ಸಹಿಷ್ಣುತೆಯನ್ನು ನಾವು ಪ್ರೋತ್ಸಾಹಿಸಬೇಕು ಎಂದು ವಿಶ್ವಸಂಸ್ಥೆ (United Nations) ಹೇಳಿದೆ. ನಾನು ಸುದ್ದಿ ನೋಡಿದ್ದೇನೆ. ಆದರೆ ನಾನು ಹೇಳಿಕೆಗಳನ್ನು ಸ್ವತಃ ನೋಡಿಲ್ಲ. ಆದರೆ ನನ್ನ ಪ್ರಕಾರ, ನಾವು ಎಲ್ಲ ಧರ್ಮಗಳಿಗೆ ಗೌರವ ಮತ್ತು ಸಹಿಷ್ಣುತೆಯನ್ನು ಬಲವಾಗಿ ಪ್ರೋತ್ಸಾಹಿಸುತ್ತೇವೆ ಎಂದು ನಾನು ನಿಮಗೆ ಹೇಳಬಲ್ಲೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಆಂಟೊನಿಯೊ ಗುಟೆರಸ್ ಅವರ ವಕ್ತಾರ ಸ್ಟೀಫನ್ ಡುರಾಜಿಕ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಶರ್ಮಾ ಮತ್ತು ಜಿಂದಾಲ್ ಅವರ ಹೇಳಿಕೆಯನ್ನು ಹಲವಾರು ಇಸ್ಲಾಮಿಕ್ ದೇಶಗಳು ಖಂಡಿಸಿರುವ ಬಗ್ಗೆ ಪಾಕಿಸ್ತಾನಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸ್ಟೀಫನ್ ಈ ರೀತಿ ಉತ್ತರ ನೀಡಿದ್ದಾರೆ. ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಫ್ಘಾನಿಸ್ತಾನ ಮತ್ತು ಜೋರ್ಡಾನ್ ಮೊದಲಾದ ದೇಶಗಳು ರಾಜತಾಂತ್ರಿಕ ಕಾಳಜಿಗಳ ಮಧ್ಯೆ ಔಪಚಾರಿಕ ಸಂದೇಶಗಳನ್ನು ರವಾನೆ ಮಾಡಿವೆ. “ಪ್ರವಾದಿ ಮುಹಮ್ಮದ್, ಶಾಂತಿ ಮತ್ತು ಆಶೀರ್ವಾದವನ್ನು ಅವಮಾನಿಸುವ ಬಿಜೆಪಿಯ ವಕ್ತಾರೆ ನೀಡಿದ ಹೇಳಿಕೆಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಂಡಿಸುತ್ತದೆ ಎಂದು ಸೌದಿ ಅರೇಬಿಯಾದ ವಿದೇಶಾಂಗ ಸಚಿವಾಲಯ ಸೋಮವಾರ ಟ್ವೀಟ್ ಮಾಡಿದೆ. ಸೋಮವಾರ ಸಂಜೆ ಇರಾಕ್ ಭಾರತದ ರಾಯಭಾರಿಗೆ ಸಮನ್ಸ್ ನೀಡಿತ್ತು.

ದೇಶದ ಸಂಸದೀಯ ದತ್ತಿ ಮತ್ತು ಬುಡಕಟ್ಟು ಸಮಿತಿಯು ಹೊರಡಿಸಿದ ಹೇಳಿಕೆಯಲ್ಲಿ, “ಭಾರತದ ಆಡಳಿತ ಪಕ್ಷವಾದ ಬಿಜೆಪಿಯ ಅಚಾತುರ್ಯವನ್ನು ಸಮಿತಿಯು ಬಲವಾಗಿ ಖಂಡಿಸುತ್ತದೆ, ಏಕೆಂದರೆ ಇದು ಪವಿತ್ರ ಸಂದೇಶವಾಹಕ ಮುಹಮ್ಮದ್ ಅವರನ್ನು ಅವಮಾನಿಸುತ್ತದೆ ಎಂದು ಹೇಳಿರುವುದಾಗಿ ಇರಾಕಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಎರಡು ದಿನಗಳ ಹಿಂದೆ ಕತಾರ್ ವಿದೇಶಾಂಗ ಸಚಿವಾಲಯವು ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ಅವರಿಗೆ ಸಮನ್ಸ್ ಕಳುಹಿಸಿತ್ತು.

ಇದನ್ನೂ ಓದಿ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾಗೆ ಭದ್ರತೆ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ: ಕುವೈತ್​​ನ ಸೂಪರ್ ಮಾರ್ಕೆಟ್​​ಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬಹಿಷ್ಕಾರ
Image
ಬಿಜೆಪಿಯ ಮತಾಂಧತೆ ಜಾಗತಿಕವಾಗಿ ಭಾರತದ ಸ್ಥಾನಮಾನಕ್ಕೆ ಧಕ್ಕೆ ತಂದಿದೆ: ರಾಹುಲ್ ಗಾಂಧಿ
Image
ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು

ಆಕ್ಷೇಪಾರ್ಹ ಹೇಳಿಕೆ ಬಗ್ಗೆ ನೂಪುರ್ ಶರ್ಮಾ ಮತ್ತು ಜಿಂದಾಲ್ ಕ್ಷಮೆ ಕೇಳಿ ಸ್ಪಷ್ಟನೆ ನೀಡಿದ್ದಾರೆ. ನೂಪುರ್ ಶರ್ಮಾ ಮತ್ತು ಅವರಕುಟುಂಬಗಳಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಅವರು ದೂರು ನೀಡಿದ್ದಾರೆ. ಏತನ್ಮಧ್ಯೆ, ನೂಪುರ್ ಶರ್ಮಾ ಮತ್ತು ಅವರ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂಬ ದೂರಿನ ಮೇಲೆ ಎಫ್‌ಐಆರ್ ದಾಖಲಿಸಿದ ನಂತರ ಅವರಿಗೆ ಭದ್ರತೆ ಒದಗಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:43 pm, Tue, 7 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ