ಕಂಡಲ್ಲೆಲ್ಲ ಪ್ರತಿಭಟನಾಕಾರರಿಂದ ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆಗಳ ಧ್ವಂಸ

|

Updated on: Aug 05, 2024 | 5:29 PM

ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ತಲೆದೋರಿದೆ. ಬಾಂಗ್ಲಾದೇಶದ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಸಂಘರ್ಷ ಮಿತಿ ಮೀರಿ ಈಗಾಗಲೇ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ ನೀಡಿದ್ದಾರೆ. ತಮ್ಮ ಅಧಿಕೃತ ನಿವಾಸದಿಂದ ಅವರು ಬೇರೆ ದೇಶಕ್ಕೆ ಪರಾರಿಯಾಗಿದ್ದಾರೆ. ಈ ನಡುವೆ ಬಾಂಗ್ಲಾದಲ್ಲಿ ಕಂಡ ಕಡೆಯೆಲ್ಲ ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗುತ್ತಿದೆ.

ಕಂಡಲ್ಲೆಲ್ಲ ಪ್ರತಿಭಟನಾಕಾರರಿಂದ ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆಗಳ ಧ್ವಂಸ
ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆಗಳ ಧ್ವಂಸ
Follow us on

ಢಾಕಾ: ಭಾನುವಾರ ಬಾಂಗ್ಲಾದೇಶದಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಮಾರಣಾಂತಿಕ ಘರ್ಷಣೆಯಲ್ಲಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಸುಮಾರು 100 ಜನರು ಸಾವನ್ನಪ್ಪಿದರು. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿ ವಿಮಾನದಲ್ಲಿ ಪಲಾಯನ ಮಾಡಿದ್ದಾರೆ.

ಪ್ರತಿಭಟನಾಕಾರರ ಗುಂಪೊಂದು ಇಂದು ದೇಶದ ಮೊದಲ ಅಧ್ಯಕ್ಷ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿತು. ಇಂದು ಪಿಎಂ ಶೇಖ್ ಹಸೀನಾ ರಾಜೀನಾಮೆ ನೀಡಿದ ನಂತರವೂ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಂಡಿದ್ದು, ಪ್ರತಿಭಟನಾಕಾರರ ಗುಂಪೊಂದು ಬೀದಿಗಿಳಿದು, ಢಾಕಾದ ಅರಮನೆಗೆ ನುಗ್ಗಿತು. ಅಲ್ಲಿ ಶೇಖ್ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಉರುಳಿಸುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.

ಇದನ್ನೂ ಓದಿ: Sheikh Hasina: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಪ್ರತಿಭಟನೆ; ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ಭಾರತಕ್ಕೆ ಪಲಾಯನ

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಪುತ್ರಿ ಇಂದು ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಯ ನಂತರ ದೇಶದಿಂದ ಪಲಾಯನ ಮಾಡಿದ ನಂತರ ಕೋಪಗೊಂಡ ಗುಂಪೊಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದೆ.


ಬಾಂಗ್ಲಾದೇಶದ ರಾಜಧಾನಿ ಢಾಕಾದ ಪ್ರಮುಖ ರಸ್ತೆಗಳಲ್ಲಿ ಒಂದಾದ ಢಾಕಾದ ಬಿಜೋಯ್ ಸರನಿಯಲ್ಲಿರುವ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಪ್ರತಿಭಟನಾಕಾರರು ಧ್ವಂಸಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೇ ರೀತಿ ಇತರೆ ಸ್ಥಳಗಳಲ್ಲೂ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ