ಪಂಜಾಬ್‌ನ ಕಾಲೇಜುಗಳಲ್ಲಿ ಬಾಲಿವುಡ್ ಹಾಡುಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡುವುದು ನಿಷೇಧ
ಪಾಕಿಸ್ತಾನದ ಪಂಜಾಬ್‌ನಲ್ಲಿ ವಿದ್ಯಾರ್ಥಿಗಳು ಬಾಲಿವುಡ್ ಹಾಡುಗಳಿಗೆ ನೃತ್ಯ ಮಾಡುವಂತಿಲ್ಲ ಎಂದು ಮರ್ಯಮ್ ನವಾಜ್ ಸರ್ಕಾರ ಆದೇಶ ಹೊರಡಿಸಿದೆ. ಪಾಕಿಸ್ತಾನದ ಪಂಜಾಬ್ ಸರ್ಕಾರವು ಪ್ರಾಂತ್ಯದಾದ್ಯಂತದ ಎಲ್ಲಾ ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಭಾರತೀಯ ಬಾಲಿವುಡ್ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಿದೆ. ನಿಷೇಧದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಪಂಜಾಬ್‌ನ ಸಾರ್ವಜನಿಕ ಶಿಕ್ಷಣ ನಿರ್ದೇಶನಾಲಯ (ಕಾಲೇಜುಗಳು) ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದೆ.

ಇಸ್ಲಾಮಾಬಾದ್, (ಮಾರ್ಚ್ 15): ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕಾಲೇಜುಗಳಲ್ಲಿ ಬಾಲಿವುಡ್ ಹಾಡುಗಳನ್ನು ಹಾಡುವುದು ಮತ್ತು ಬಾಲಿವುಡ್ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಲಾಗಿದೆ. ಪಂಜಾಬ್ ಉನ್ನತ ಶಿಕ್ಷಣ ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ. ಈ ಆದೇಶ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳೆರಡಕ್ಕೂ ಅನ್ವಯಿಸುತ್ತದೆ. ಆಯೋಗವು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ನಿರ್ದೇಶಕರಿಗೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದೆ. ಕಾಲೇಜುಗಳಲ್ಲಿ ‘ಅನೈತಿಕ ಮತ್ತು ಅಶ್ಲೀಲ’ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅನುಚಿತ ಬಟ್ಟೆಗಳನ್ನು ಧರಿಸಿ ಭಾರತೀಯ ಹಾಡುಗಳಿಗೆ ನೃತ್ಯ ಮಾಡುವುದು ಮತ್ತು ಹಾಡುವುದಕ್ಕೆ ಅನುಮತಿ ನೀಡಬಾರದು ಎಂದು ಸೂಚಿಸಿದೆ. ಭಾರತೀಯ ಹಾಡುಗಳು ಮತ್ತು ನೃತ್ಯಗಳನ್ನು ನಿಷೇಧಿಸುವ ಆದೇಶವನ್ನು ಮಾರ್ಚ್ 14ರಂದು ಜಾರಿಗೆ ತರಲಾಯಿತು. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪಿಎಂಎಲ್-ಎನ್ ಪಕ್ಷ ಅಧಿಕಾರದಲ್ಲಿದೆ ಮತ್ತು ನವಾಜ್ ಷರೀಫ್ ಅವರ ಪುತ್ರಿ ಮರ್ಯಮ್ ನವಾಜ್ ಮುಖ್ಯಮಂತ್ರಿಯಾಗಿದ್ದಾರೆ.
ಪಾಕಿಸ್ತಾನಿ ಮಾಧ್ಯಮ ವರದಿಗಳ ಪ್ರಕಾರ, ಪಂಜಾಬ್ ಉನ್ನತ ಶಿಕ್ಷಣ ಆಯೋಗವು ಕಾಲೇಜುಗಳಲ್ಲಿ ಭಾರತೀಯ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಿದೆ. ಇನ್ನು ಪಂಜಾಬಿನ ಕಾಲೇಜುಗಳಲ್ಲಿ ನಡೆಯುವ ಕ್ರೀಡಾ ಉತ್ಸವಗಳು ಮತ್ತು ಮೋಜಿನ ಮೇಳಗಳಲ್ಲಿ ಭಾರತೀಯ ಚಲನಚಿತ್ರಗಳ ಹಾಡುಗಳಿಗೆ ನೃತ್ಯ ಮಾಡಲು ಅವಕಾಶವಿರುವುದಿಲ್ಲ. ಅಶ್ಲೀಲ ಬಟ್ಟೆಗಳನ್ನು ಧರಿಸುವುದು ಮತ್ತು ಅಸಭ್ಯ ಭಾಷೆ ಬಳಸುವುದನ್ನು ನಿಷೇಧಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣ ಮತ್ತು ನೈತಿಕ ಶಿಕ್ಷಣವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ವಾದಿಸಿದೆ.
Punjab Government in Pakistan has banned students in all colleges & education institutes across the province from dancing on Indian Bollywood songs. Circular issued to implement the order or face strict disciplinary action. Pakistani youth mostly dance on Hindi songs.
आटा खाने… pic.twitter.com/wIoqPlTK1V
— बैरागी (@VairagiUvaaCH) March 15, 2025
ಇದನ್ನೂ ಓದಿ: ಪಾಕಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ; ಇಸ್ಲಾಮಿಕ್ ನಾಯಕ ಸೇರಿದಂತೆ ಮೂವರಿಗೆ ಗಾಯ
ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಯೋಗವು ಎಲ್ಲಾ ಕಾಲೇಜು ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮತ್ತು ನೈತಿಕ ಶಿಕ್ಷಣವನ್ನು ನೀಡುವುದು ಕಾಲೇಜು ಆಡಳಿತದ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗ ಎಚ್ಚರಿಸಿದೆ. ಈ ಆದೇಶದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ಕಂಡುಬಂದಿವೆ. ಅನೇಕ ಜನರು ಇದನ್ನು ಸ್ವಾಗತಿಸಿದ್ದಾರೆ, ಆದರೆ ಕೆಲವು ವಿದ್ಯಾರ್ಥಿಗಳು ಇದನ್ನು ಗೌಪ್ಯತೆಯ ಮೇಲಿನ ಆಕ್ರಮಣ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನ ಸೇರಿ 41 ದೇಶಗಳಿಗೆ ಟ್ರಂಪ್ ಸರ್ಕಾರದಿಂದ ಪ್ರಯಾಣ ನಿಷೇಧ ಸಾಧ್ಯತೆ
ಭಾರತ-ಪಾಕಿಸ್ತಾನ ಸಂಬಂಧಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿರುವ ಸಮಯದಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಬಲೂಚಿಸ್ತಾನದಲ್ಲಿ ಜಾಫರ್ ಎಕ್ಸ್‌ಪ್ರೆಸ್ ರೈಲು ಅಪಹರಣಕ್ಕೆ ಭಾರತವೇ ಕಾರಣ ಎಂದು ಪಾಕಿಸ್ತಾನ ಆರೋಪಿಸಿದೆ. ಭಾರತ ಇದನ್ನು ಸಂಪೂರ್ಣವಾಗಿ ನಿರಾಕರಿಸಿದೆ. ಪಾಕಿಸ್ತಾನವು ಈ ರೀತಿ ಇತರರನ್ನು ದೂಷಿಸುವುದನ್ನು ನಿಲ್ಲಿಸಬೇಕು ಎಂದು ಭಾರತ ಹೇಳಿದೆ. ಈ ಘಟನೆಯು ಎರಡೂ ದೇಶಗಳ ನಡುವಿನ ಈಗಾಗಲೇ ಉದ್ವಿಗ್ನವಾಗಿರುವ ಸಂಬಂಧವನ್ನು ಮತ್ತಷ್ಟು ಹದಗೆಡಿಸಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




