AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ಕತಾರ್‌ನ ರಾಸ್ ಲಫಾನ್ ಅನಿಲ ಸ್ಥಾವರದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 54 ಮಂದಿ ಗಾಯಗೊಂಡಿದ್ದು, 18 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಈ ದುರಂತ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆಯ ಭೀತಿ ಸೃಷ್ಟಿಸಿದೆ. ವಿಶ್ವದ ಪ್ರಮುಖ ಅನಿಲ ರಫ್ತುದಾರ ದೇಶವಾದ ಕತಾರ್‌ನಲ್ಲಿನ ಈ ಘಟನೆ ಇಂಧನ ಪೂರೈಕೆ ಸರಪಳಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಕಳವಳ ವ್ಯಕ್ತಪಡಿಸಿದ್ದಾರೆ. ತನಿಖೆ ಮುಂದುವರಿದಿದೆ.

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ
ಅನಿಲ ಸ್ಥಾವರImage Credit source: India TV
ನಯನಾ ರಾಜೀವ್
|

Updated on: Jun 22, 2026 | 9:59 AM

Share

ದೋಹಾ, ಜೂನ್ 22: ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತು ರಾಷ್ಟ್ರವಾದ ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿರುವ ಬರ್ಜಾನ್ ಅನಿಲ ಸ್ಥಾವರ(Gas Plant)ದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಥಾವರದಲ್ಲಿ ಹೊಸ ಕಾರ್ಯಾಚರಣೆ ಆರಂಭವಾಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಕನಿಷ್ಠ 54 ಜನರು ಗಾಯಗೊಂಡಿದ್ದಾರೆ ಹಾಗೂ 18 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಡೆದ ತಕ್ಷಣವೇ ಉನ್ನತ ಮಟ್ಟದ ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ದೇಶದ ಇಂಧನ ಅಗತ್ಯಗಳನ್ನು ಪೂರೈಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಬರ್ಜಾನ್ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗುತ್ತಿದ್ದಂತೆಯೇ ಈ ಸ್ಫೋಟ ಸಂಭವಿಸಿದೆ ಎಂದು ಸರ್ಕಾರಿ ಸ್ವಾಮ್ಯದ ‘ಕತಾರ್ ಎನರ್ಜಿ’ ಸಂಸ್ಥೆ ಅಧಿಕೃತವಾಗಿ ದೃಢಪಡಿಸಿದೆ.

ಸ್ಫೋಟದ ತೀವ್ರತೆಗೆ ಸಿಲುಕಿ ನಾಪತ್ತೆಯಾಗಿರುವ 18 ಜನರಿಗಾಗಿ ಅವಶೇಷಗಳ ನಡುವೆ ತೀವ್ರ ಹುಡುಕಾಟ ಮುಂದುವರೆದಿದೆ. ಸ್ಫೋಟಕ್ಕೆ ನಿಖರವಾದ ಕಾರಣವೇನೆಂಬುದನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ. ತಾಂತ್ರಿಕ ದೋಷವೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಕುರಿತು ಉನ್ನತ ಮಟ್ಟದ ತನಿಖೆ ಆರಂಭವಾಗಿದೆ.

ಮತ್ತಷ್ಟು ಓದಿ: ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ಜಾಗತಿಕ ಇಂಧನ ಮಾರುಕಟ್ಟೆಗೆ ಹೊಸ ಆತಂಕ? ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಭೀತಿ: ಹಾರ್ಮುಜ್ ಜಲಸಂಧಿಯ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಇತ್ತೀಚೆಗಷ್ಟೇ ಕತಾರ್ ತನ್ನ ಗ್ಯಾಸ್ ಉತ್ಪಾದನೆಯನ್ನು ಕಡಿತಗೊಳಿಸಿತ್ತು. ಈಗ ಪರಿಸ್ಥಿತಿ ತಿಳಿಯಾಗಿ ಮರಳಿ ಸಹಜ ಸ್ಥಿತಿಗೆ ಬರುತ್ತಿರುವಾಗಲೇ ಈ ದುರಂತ ಸಂಭವಿಸಿದೆ. ವಿಶ್ವದ ಅತಿ ದೊಡ್ಡ ಅನಿಲ ಪೂರೈಕೆದಾರ ರಾಷ್ಟ್ರವಾಗಿರುವ ಕತಾರ್‌ನ ಈ ಪ್ರಮುಖ ಸ್ಥಾವರ ದೀರ್ಘಕಾಲದವರೆಗೆ ಬಂದ್ ಆದರೆ, ಜಾಗತಿಕವಾಗಿ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಗ್ಯಾಸ್ ಮತ್ತು ತೈಲ ಬೆಲೆಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಆರ್ಥಿಕ ವಿಶ್ಲೇಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ