AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Quad Summit 2022 ಕೊವಿಡ್ ಸಾಂಕ್ರಾಮಿಕವನ್ನು ಭಾರತದಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದಕ್ಕೆ ಮೋದಿಯನ್ನು ಶ್ಲಾಘಿಸಿದ ವಿಶ್ವ ನಾಯಕರು

ಚೀನಾ ಮತ್ತು ರಷ್ಯಾದ ನಾಯಕತ್ವವು ಸುದೀರ್ಘವಾದ ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮೂಲಕ ಹೋಗದೆ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಮತ್ತು ಕಾರ್ಯಗತಗೊಳಿಸಬಹುದು. ಆದರೆ ಪ್ರಧಾನಿ ಮೋದಿಯವರ ಯಶಸ್ಸು ಪ್ರಜಾಪ್ರಭುತ್ವವು ಯಾವ ರೀತಿ ನಿಭಾಯಿಸಬಲ್ಲದು ಎಂಬುದನ್ನು ಜಗತ್ತಿಗೆ ತೋರಿಸಿದೆ.

Quad Summit 2022 ಕೊವಿಡ್ ಸಾಂಕ್ರಾಮಿಕವನ್ನು ಭಾರತದಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದಕ್ಕೆ ಮೋದಿಯನ್ನು ಶ್ಲಾಘಿಸಿದ ವಿಶ್ವ ನಾಯಕರು
ಬೈಡೆನ್ ಜತೆ ಮೋದಿ
TV9 Web
| Edited By: |

Updated on:May 24, 2022 | 1:54 PM

Share

ಟೋಕಿಯೊದಲ್ಲಿ ನಡೆದ ಕ್ವಾಡ್ ಶೃಂಗಸಭೆಯ (Quad Summit 2022) ಅಧಿವೇಶನದಲ್ಲಿ, ಅಮೆರಿಕದ ಅಧ್ಯಕ್ಷ ಜೋ ಬೈಡೆನ್ (Joe Biden) ಕೊವಿಡ್ ಸಾಂಕ್ರಾಮಿಕ ರೋಗವನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದಕ್ಕಾಗಿ ಪ್ರಧಾನಿ  ನರೇಂದ್ರ ಮೋದಿಯವರನ್ನು (Narendra Modi) ಶ್ಲಾಘಿಸಿದ್ದಾರೆ ಎಂದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೀನಾ ಮತ್ತು ರಷ್ಯಾದ ನಾಯಕತ್ವವು ಸುದೀರ್ಘವಾದ ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮೂಲಕ ಹೋಗದೆ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಮತ್ತು ಕಾರ್ಯಗತಗೊಳಿಸಬಹುದು. ಆದರೆ ಪ್ರಧಾನಿ ಮೋದಿಯವರ ಯಶಸ್ಸು ಪ್ರಜಾಪ್ರಭುತ್ವವು ಯಾವ ರೀತಿ ನಿಭಾಯಿಸಬಲ್ಲದು ಎಂಬುದನ್ನು ಜಗತ್ತಿಗೆ ತೋರಿಸಿದೆ. ಇದು ಚೀನಾ ಮತ್ತು ರಷ್ಯಾದಂತಹ ನಿರಂಕುಶಾಧಿಕಾರಗಳು ವೇಗವಾಗಿ ಬದಲಾಗುತ್ತಿರುವ ಜಗತ್ತನ್ನು ಉತ್ತಮವಾಗಿ ನಿಭಾಯಿಸಬಲ್ಲವು ಎಂಬ ಮಿಥ್ಯವನ್ನು ಇದು ಒಡೆದು ಹಾಕಿದೆ ಎದು ಬೈಡೆನ್ ಹೇಳಿದ್ದಾರೆ. ಅಧಿಕಾರಿಗಳ ಪ್ರಕಾರ ಅಧ್ಯಕ್ಷ ಬೈಡನ್ ಅವರ ಈ ಮಾತುಗಳು ಬರೆದುಕೊಂಡು ಬಂದು ಹೇಳಿದ್ದಲ್ಲ. ಅವರು ಲಿಖಿತ ಹೇಳಿಕೆಗಳನ್ನು ಮುಂದಿಡುವ ಮುನ್ನವೇ ಮೋದಿ ಬಗ್ಗೆ ಶ್ಲಾಘಿಸಿದ್ದಾರೆ. ಸಾಂಕ್ರಾಮಿಕ ರೋಗವನ್ನು ಭಾರತ ನಿಭಾಯಿಸಿದ್ದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಬೈಡನ್ ಚೀನಾ ಯಾವ ರೀತಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಎಡವಿತು ಎಂಬುದನ್ನು ಹೋಲಿಸಿ ಹೇಳಿದ್ದಾರೆ.

ಹೊಸದಾಗಿ ಆಯ್ಕೆಯಾದ ಆಸ್ಟ್ರೇಲಿಯನ್ ಪ್ರಧಾನಿ ಆಂಥೋನಿ ಅಲ್ಬನೀಸ್, ಇದೇ ಅಧಿವೇಶನದಲ್ಲಿ ಭಾರತವು ಇತರ ದೇಶಗಳಿಗೆ ಸರಬರಾಜು ಮಾಡಿದ ಲಸಿಕೆಗಳು ಅಲ್ಲಿ ಬದಲಾವಣೆಯನ್ನು ತಂದಿವೆ. ಅಂತಹ ಯಶಸ್ಸು ಕೇವಲ ವಿಚಾರಗಳ ಸೈದ್ಧಾಂತಿಕ ಚರ್ಚೆಯನ್ನು ಗೆಲ್ಲುವುದಕ್ಕಿಂತ ಹೆಚ್ಚು ಮೌಲ್ಯಯುತವಾಗಿದೆ ಎಂದು ಹೇಳಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರು ಕೂಡಾ ಭಾರತದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.

ಕ್ವಾಡ್ ಲಸಿಕೆ ಉಪಕ್ರಮದ ಅಡಿಯಲ್ಲಿ ವಿತರಿಸಲಾದ ಭಾರತೀಯ ನಿರ್ಮಿತ ಲಸಿಕೆಗಳನ್ನು ಇತ್ತೀಚೆಗೆ ಥೈಲ್ಯಾಂಡ್ ಮತ್ತು ಕಾಂಬೋಡಿಯಾದಲ್ಲಿ ಕೃತಜ್ಞತೆಯಿಂದ ಸ್ವೀಕರಿಸಲಾಗಿದೆ ಎಂದು ಅವರು ಸ್ಮರಿಸಿದ್ದಾರೆ. ಕಾಂಬೋಡಿಯಾದಲ್ಲಿ ಪ್ರಧಾನಿ ಹನ್ ಸೇನ್ ಅವರೇ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ಅವರು ಹೇಳಿದ್ದಾರೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:50 pm, Tue, 24 May 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್