Sri Lanka Crisis: ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡಿದ ರನಿಲ್ ವಿಕ್ರಮಸಿಂಘೆ
ಶ್ರೀಲಂಕಾದ ಪ್ರಧಾನಿ ಹುದ್ದೆಗೆ ರನಿಲ್ ವಿಕ್ರಮಸಿಂಘೆ ರಾಜೀನಾಮೆ ನೀಡಿದ್ದಾರೆ.
ಶ್ರೀಲಂಕಾ: ಶ್ರೀಲಂಕಾದ ಪ್ರಧಾನಿ ಹುದ್ದೆಗೆ ಇಂದು (ಜುಲೈ 9) ರನಿಲ್ ವಿಕ್ರಮಸಿಂಘೆ ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸಿತ್ತಿರುವ ಹಿನ್ನೆಲೆ ಅಲ್ಲಿನ ಪ್ರಜೆಗಳು ಉಗ್ರ ಪ್ರತಿಭಟನೆಗೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ ರಾಜೀನಾಮೆ ನೀಡಲು ತೀರ್ಮಾನಿಸಿದ್ದರು. ಈ ಸಂಬಂಧ ಸಂಸದರ ಸಭೆಯಲ್ಲಿ ರಾಜೀನಾಮೆ ನೀಡುವುದಾಗಿ ಕೂಡ ಘೋಷಣೆ ಮಾಡಿದ್ದರು. ಸಂಸದರ ಸಭೆ ನಂತರ ರನಿಲ್ ವಿಕ್ರಮಸಿಂಘೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು ಹೊಸ ಸರ್ಕಾರ ಬರುವವರೆಗೆ ಹಾಲಿ ಸರ್ಕಾರ ಮುಂದುವರಿಯುತ್ತೆ. ಲಂಕಾ ಜನರ ಸುರಕ್ಷತೆಗೆ ಮೊದಲ ಆದ್ಯತೆಯಾಗಿದೆ. ಪಕ್ಷದ ನಾಯಕರ ಶಿಫಾರಸ್ಸನ್ನು ಸ್ವೀಕರಿಸಿ ಮತ್ತು ಎಲ್ಲ ಪಕ್ಷಗಳು ಸೇರಿ ಸರ್ಕಾರ ರಚಿಸಲು ಅನುವು ಮಾಡಿಕೊಡಲು ನಾನು ರಾಜಿನಾಮೆ ನೀಡುತ್ತೀದ್ದೇನೆ ಎಂದು ಹೇಳಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ರಾಜಿನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಗೋತಬಯ ರಾಜಪಕ್ಸೆ ಮನೆಯನ್ನು ಸುತ್ತುವರೆದ್ದಿದ್ದರು. ಆಗ ಅಧ್ಯಕ್ಷ ಗೋತಬಯ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದರು ಎಂದು ಖಾಸಗಿ ಸುದ್ದಿ ಸಂಸ್ಥೆ AFP ವರದಿ ಮಾಡಿತ್ತು.
ಗೋತಬಯ ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾಕಾರರು ಅವರ ನಿವಾಸದೊಳಗೆ ನುಗ್ಗುತ್ತಿರುವುದನ್ನು ಶ್ರೀಲಂಕಾದ ದೂರದರ್ಶನದಲ್ಲಿ ಪ್ರಸಾರಗೊಳ್ಳುತ್ತಿವೆ. ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಬೇರೆ ಕಡೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರು ಅಧ್ಯಕ್ಷರ ಭವನವನ್ನು ಪ್ರವೇಶಿಸದಂತೆ ಸೈನಿಕರು ಅಶ್ರುವಾಯು ಸಿಡಿಸಿದರು.
ಪ್ರತಿಭಟನೆಯನ್ನು ಹತ್ತಿಕ್ಕಲು ಶ್ರೀಲಂಕಾದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಮಧ್ಯಾಹ್ನ 3.30ರಿಂದ ನಿಷೇಧಾಜ್ಞೆ ಜಾರಿಯಾಗಿದ್ದು, ಜನರು ಮನೆಯೊಳಗೇ ಇರಲು ಆದೇಶಿಸಲಾಗಿದೆ.
Ranil Wickremesinghe resigns as Prime Minister of Sri Lanka#SriLankaCrisis pic.twitter.com/0AF8BfpmcH
— ANI (@ANI) July 9, 2022
To ensure the continuation of the Government including the safety of all citizens I accept the best recommendation of the Party Leaders today, to make way for an All-Party Government.
To facilitate this I will resign as Prime Minister.
— Ranil Wickremesinghe (@RW_UNP) July 9, 2022
Published On - 7:09 pm, Sat, 9 July 22